ಚಳಿಗಾಲದಲ್ಲಿ ಕಾಣಿಸಿಕೊಳ್ಳುವ ಗಂಟಲು ನೋವಿಗೆ ಇದೇ ಸುಲಭ ಪರಿಹಾರ !
ಚಳಿಗಾಲದಲ್ಲಿ ಕಾಣಿಸಿಕೊಳ್ಳುವ ಗಂಟಲು ನೋವಿನ ಪರಿಹಾರಕ್ಕಾಗಿ, ಬಿಸಿ ನೀರಿನ ಸ್ಟೀಮ್ ತೆಗೆದುಕೊಳ್ಳಬೇಕು. ಹೀಗೆ ಮಾಡಿದರೆ ಗಂಟಲು ನೋವಿನಿಂದ ಪರಿಹಾರ ಸಿಗುತ್ತದೆ.
ಬಿಸಿನೀರು ಕುಡಿಯುವುದರಿಂದ ಗಂಟಲು ನೋವಿನಿಂದ ಪರಿಹಾರ ಸಿಗುತ್ತದೆ. ಗಂಟಲು ನೋವು ಇದ್ದಾಗ ಪದೇ ಪದೇ ಬಿಸಿ ನೀರು ಕುಡಿಯಬೇಕು.
ಗಂಟಲು ನೋವು ಇದ್ದಾಗ ಕರಿದ ಪದಾರ್ಥಗಳನ್ನು ತಿನ್ನಬಾರದು. ಗಂಟಲು ನೋವು ಇದ್ದಾಗ ಕರಿದ ಪದಾರ್ಥಗಳನ್ನು ತಿನ್ನುವುದರಿಂದ ಸಮಸ್ಯೆ ಹೆಚ್ಚಾಗುತ್ತದೆ.
ರಾತ್ರಿ ಮಲಗುವ ಮುನ್ನ ಅರಿಶಿನದ ಹಾಲನ್ನು ಕುಡಿಯಿರಿ. ರಾತ್ರಿ ಮಲಗುವ ಮುನ್ನ ಅರಿಶಿನ ಹಾಲು ಸೇವಿಸಿದರೆ ಗಂಟಲು ನೋವಿನಿಂದ ಪರಿಹಾರ ಸಿಗುತ್ತದೆ.
ಗಂಟಲು ನೋವು ಇದ್ದಾಗ ತಂಪು ಪಾನೀಯಗಳು ಮತ್ತು ಐಸ್ ಕ್ರೀಮ್ ತಿನ್ನಲುಹೊಗಬೇಡಿ. ಇವುಗಳ ಸೇವನೆಯಿಂದ ಸಮಸ್ಯೆ ಮತ್ತಷ್ಟು ಹೆಚ್ಚಾಗಬಹುದು.
( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ZEE NEWS ಅದನ್ನು ಖಚಿತಪಡಿಸುವುದಿಲ್ಲ.)