ತೂಕ ಇಳಿಸಿಕೊಳ್ಳುವುದು ಕಷ್ಟದ ಕೆಲಸ. ಏಕೆಂದರೆ ಜಿಮ್‌ನಲ್ಲಿ ಗಂಟೆಗಟ್ಟಲೆ ಬೆವರು ಸುರಿಸುವುದೆಲ್ಲ ಎಲ್ಲರಿಗೂ ಸುಲಭವಲ್ಲ, ಆದರೆ ಒಂದು ವಿಶೇಷವಾದ ಪಾನೀಯದ ಸಹಾಯದಿಂದ, ಚಪ್ಪಟೆಯಾದ ಹೊಟ್ಟೆಯನ್ನು ಪಡೆಯಬಹುದು.
Weight Lose Tips : ತೂಕ ಹೆಚ್ಚಳದಿಂದ ದೇಹ ಸೌಂದರ್ಯ ಹಾಳಾಗುವುದು ಮಾತ್ರವಲ್ಲ, ಅದರ ಜೊತೆಗೆ ಅನೇಕ ಅಪಾಯಕಾರಿ ರೋಗಗಳು ಕೂಡಾ ಬೆನ್ನು ಹತ್ತುತ್ತವೆ. ಹಾಗಾಗಿ ತೂಕ ಹೆಚ್ಚಾಗಿದೆ ಎಂದು ಅನಿಸಿದರೆ ವೇಟ್ ಲಾಸ್ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳುವುದು ಮುಖ್ಯವಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.
1/7ತೂಕ ಹೆಚ್ಚಳ ಹೈ ಕೊಲೆಸ್ಟ್ರಾಲ್, ಮಧುಮೇಹ, ಹೈ ಬಿಪಿ ಮತ್ತು ಹೃದಯಾಘಾತಕ್ಕೆ ಕಾರಣವಾಗಬಹುದು. ಹೊಟ್ಟೆ ಮತ್ತು ಸೊಂಟದ ಸುತ್ತಲೂ ಕೊಬ್ಬು ಸಂಗ್ರಹವಾಗಲು ಪ್ರಾರಂಭಿಸಿದಾಗ, ದೇಹದ ಒಟ್ಟಾರೆ ಆಕಾರ ಹಾಳಾಗುತ್ತದೆ.
2/7ನೈಸರ್ಗಿಕ ಪಾನೀಯವಾದ ಎಳನೀರನ್ನು ಕುಡಿಯುವ ಮೂಲಕ ಚಪ್ಪಟೆಯಾದ ಹೊಟ್ಟೆಯನ್ನು ಪಡೆಯಬಹುದು. ಆದರೆ ಇದಕ್ಕೆ ಎಳನೀರನ್ನು ಹೇಗೆ ಕುಡಿಯಬೇಕು? ಯಾವ ಹೊತ್ತಿನಲ್ಲಿ ಕುಡಿಯಬೇಕು ಎನುವುದು ಬಹಳ ಮುಖ್ಯವಾಗಿರುತ್ತದೆ. ಇಲ್ಲವಾದರೆ ಇದು ತೂಕ ಇಳಿಸುವಲ್ಲಿ ಯಾವುದೇ ಪರಿಣಾಮ ಬೀರುವುದಿಲ್ಲ.
3/7ಎಳನೀರಿನಲ್ಲಿ ಜೀವಸತ್ವಗಳು, ಖನಿಜಗಳು ಮತ್ತು ನೈಸರ್ಗಿಕ ಕಿಣ್ವಗಳು ಅಡಗಿರುತ್ತವೆ. ಇದರಿಂದಾಗಿ ದೇಹ ಹೈಡ್ರೆಡ್ ಆಗಿ ಇರುತ್ತದೆ. ಜೊತೆಗೆ ದಿನವಿಡೀ ಫ್ರೆಶ್ ನೆಸ್ ಇರುತ್ತದೆ.
4/7ಎಳನೀರಿನಲ್ಲಿ ನೈಸರ್ಗಿಕ ಸಕ್ಕರೆ ಮತ್ತು ಕಡಿಮೆ ಕ್ಯಾಲೋರಿಗಳ ಜೊತೆಗೆ ಕಡಿಮೆ ಪ್ರಮಾಣದ ಕಾರ್ಬೋಹೈಡ್ರೇಟ್‌ಗಳಿವೆ. ಇದು ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.
5/7ಹೀಗಾಗಿ ನಿಯಮಿತವಾಗಿ ಎಳನೀರು ಕುಡಿಯುತ್ತಾ ಬಂದರೆ ಹೊಟ್ಟೆ ಮತ್ತು ಸೊಂಟ ಸೇರಿದಂತೆ ದೇಹದಲ್ಲಿ ಸೇರಿಕೊಂಡಿರುವ ಅಧಿಕ ಕೊಬ್ಬು ಕರಗಲು ಆರಂಭವಾಗುತ್ತದೆ.
6/7ಈ ನೈಸರ್ಗಿಕ ಪಾನೀಯವನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದು ಬೊಜ್ಜು ಕರಗಿಸುವಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಅಲ್ಲದೆ ಬರೀ ಎಳನೀರಿನ ಬದಲು ಇದಕ್ಕೆ ಒಂದು ಚಮಚ ತುಳಸಿ ಬೀಜವನ್ನು ಬೆರೆಸಿ ಕುಡಿದರೆ ಬಹಳ ಬೇಗನೆ ತೂಕ ಕಡಿಮೆಯಾಗುತ್ತದೆ.
7/7ಸೂಚನೆ : ಈ ಲೇಖನವು ಸಾಮಾನ್ಯ ಮಾಹಿತಿ ಮತ್ತು ಮನೆ ಮದ್ದನ್ನು ಆಧರಿಸಿದೆ. ಜೀ ನ್ಯೂಸ್ ಕನ್ನಡ ಇದನ್ನು ಅನುಮೋದಿಸುವುದಿಲ್ಲ.