ವಾರದಲ್ಲಿ 3 ಬಾರಿ ಈ ಹಣ್ಣನ್ನು ಖಾಲಿ ಹೊಟ್ಟೆಯಲ್ಲಿ ತಿನ್ನಿ; ಬಿಳಿಕೂದಲು ಬುಡದಿಂದಲೇ ನೈಸರ್ಗಿಕವಾಗಿ ಕಪ್ಪಾಗುತ್ತೆ!
ಕೆಲವೊಮ್ಮೆ ನೀವು ದೇಹಕ್ಕೆ ಅಗತ್ಯವಾದ ಪೋಷಕಾಂಶ ಸಿಗದಿದ್ದಾಗ ಕಬ್ಬಿಣದ ಕೊರತೆ ಕಾಣಿಸಿಕೊಳ್ಳುತ್ತದೆ. ಹೀಗಾದಾಗ ಅಕಾಲಿಕವಾಗಿ ಬಿಳಿಕೂದಲು ಬೆಳೆಯಲು ಪ್ರಾರಂಭಿಸುತ್ತದೆ. ಹೀಗಾಗಿ ಕೆಲ ಹಣ್ಣುಗಳನ್ನು ನಿಯಮಿತವಾಗಿ ಸೇವಿಸಿದರೆ ಉತ್ತಮ ಫಲಿತಾಂಶ ಸಿಗುತ್ತದೆ.
ಕಿತ್ತಳೆ ಹಣ್ಣು ಮಾನವನ ಆರೋಗ್ಯ ಕಾಪಾಡುವಲ್ಲಿ ಬಹಳಷ್ಟು ಸಹಕಾರಿಯಾಗಿದೆ. ಈ ಹಣ್ಣಿನಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಸಿ ಇದ್ದು, ಇದನ್ನು ನಿಯಮಿತವಾಗಿ ಸೇವಿಸಿದರೆ, ಬಿಳಿಕೂದಲನ್ನು ಕಪ್ಪಾಗಿಸಬಹುದು. ಆದರೆ ವಾರಕ್ಕೆ 3 ಬಾರಿ ಮಾತ್ರ ಸೇವಿಸಿದರೆ ಉತ್ತಮ.
ನಿಂಬೆಯಿಂದಲೂ ಪ್ರಯೋಜನವನ್ನು ಪಡೆಯಬಹುದು. ನಿಂಬೆ ಸೇವನೆಯು ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ. ಉತ್ತಮ ಪ್ರಮಾಣದ ಅಗತ್ಯ ಪೋಷಕಾಂಶಗಳನ್ನು ಹೊಂದಿರುವ ನಿಂಬೆ ಬಿಳಿಕೂದಲನ್ನು ಕಪ್ಪಾಗಿಸಲು ಸಹಾಯ ಮಾಡುತ್ತದೆ.
ಸಿಹಿ ಗೆಣಸು ಕೂಡ ಬಿಳಿಕೂದಲನ್ನು ಕಪ್ಪಾಗಿಸುವಲ್ಲಿ ಬಹಳಷ್ಟು ಸಹಾಯ ಮಾಡುತ್ತದೆ. ಇದರಲ್ಲಿ ಬೀಟಾ ಕ್ಯಾರೋಟಿನ್ ಎಂಬ ಆ್ಯಂಟಿ ಆಕ್ಸಿಡೆಂಟ್ ಹೇರಳವಾಗಿರುವ ಕಾರಣ, ಕೂದಲನ್ನು ಕಪ್ಪಾಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಜೊತೆಗೆ ಕೂದಲಿನ ಹೊಳಪನ್ನು ಕಾಪಾಡಿಕೊಳ್ಳಲು ಸಾಕಷ್ಟು ಸಹಾಯ ಮಾಡುತ್ತದೆ.
(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ದಯವಿಟ್ಟು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)