ದೇಹದಲ್ಲಿ ಕಬ್ಬಿಣದ ಕೊರತೆಯನ್ನು ನೀಗಿಸಲು ಈ ಆಹಾರಗಳನ್ನು ತಪ್ಪದೇ ಸೇವಿಸಿ
ಬೀಟ್ರೂಟ್ : ದೇಹದಲ್ಲಿ ಕಬ್ಬಿಣದ ಕೊರತೆಯನ್ನು ತಡೆಗಟ್ಟಲು ಪ್ರತಿದಿನ ಒಂದು ಬೀಟ್ರೂಟ್ ಅನ್ನು ಸೇವಿಸಿ. ಬೀಟ್ರೂಟ್ ಸೇವನೆಯು ದೇಹದಲ್ಲಿ ಹಿಮೋಗ್ಲೋಬಿನ್ ಅನ್ನು ಹೆಚ್ಚಿಸುತ್ತದೆ
ಪಾಲಕ್ ಸೊಪ್ಪು: ದೇಹದಲ್ಲಿ ಕಬ್ಬಿಣದ ಕೊರತೆಯನ್ನು ನೀಗಿಸಲು ಪಾಲಕ್ ಸೊಪ್ಪನ್ನು ಸೇವಿಸಬೇಕು. ಪಾಲಕ್ ಸೊಪ್ಪಿನಲ್ಲಿ ಕ್ಯಾಲ್ಸಿಯಂ, ಸೋಡಿಯಂ, ಖನಿಜ ಲವಣಗಳು, ಕ್ಲೋರಿನ್, ರಂಜಕ ಮತ್ತು ಪ್ರೋಟೀನ್‌ನಂತಹ ಪೋಷಕಾಂಶಗಳು ಇರುವುದರಿಂದ ದೇಹದಲ್ಲಿನ ರಕ್ತದ ಕೊರತೆಯನ್ನು ನೀಗಿಸುತ್ತದೆ.
ದಾಳಿಂಬೆ ರುಚಿಗಷ್ಟೇ ಅಲ್ಲ ಆರೋಗ್ಯಕ್ಕೂ ಒಳ್ಳೆಯದು. ದಾಳಿಂಬೆ ತಿಂದರೆ ದೇಹದಲ್ಲಿ ಕಬ್ಬಿಣಾಂಶದ ಕೊರತೆ ನಿವಾರಣೆಯಾಗುತ್ತದೆ. ದಾಳಿಂಬೆ ಜ್ಯೂಸ್ ಕುಡಿಯುವುದರಿಂದ ರಕ್ತಹೀನತೆಯಂತಹ ಸಮಸ್ಯೆಯಿಂದ ಪರಿಹಾರ ಪಡೆಯಬಹುದು ಎಂದು ಹೇಳಲಾಗುತ್ತದೆ.
ಸೀಬೆ ಹಣ್ಣಿನಲ್ಲಿ ವಿಟಮಿನ್ ಸಿ ಮತ್ತು ಕಬ್ಬಿಣದ ಅಂಶ ಹೇರಳವಾಗಿದ್ದು, ಈ ಹಣ್ಣಿನ ಸೇವನೆಯಿಂದ ದೇಹದಲ್ಲಿ ಐರನ್ ಕೊರತೆಯನ್ನು ಸರಿಪಡಿಸಬಹುದು ಎನ್ನಲಾಗುವುದು.
ಹಸಿರು ತರಕಾರಿಗಳು: ದೇಹದಲ್ಲಿ ಕಬ್ಬಿಣದ ಕೊರತೆಯನ್ನು ಹೋಗಲಾಡಿಸಲು ನಿಮ್ಮ ಡಯಟ್ನಲ್ಲಿ ಹಸಿರು ತರಕಾರಿಗಳನ್ನು ತಪ್ಪದೇ ಸೇರಿಸಿ. ಹಸಿರು ತರಕಾರಿಗಳ ಸೇವನೆಯಿಂದ ಐರನ್ ಕೊರತೆ ಮಾತ್ರವಲ್ಲ ಇತರ ಹಲವು ಆರೋಗ್ಯ ಸಮಸ್ಯೆಗಳಿಂದಲೂ ದೂರ ಉಳಿಯಬಹುದು.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ಖಂಡಿತವಾಗಿಯೂ ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.