ಒಂದು ಚಮಚ ತುಪ್ಪವನ್ನು ಬೆಳಗ್ಗೆ ಖಾಲಿ ಹೊಟ್ಟೆಗೆ ಹೀಗೆ ತಿನ್ನಿ, ಆರೋಗ್ಯಕ್ಕಿದೆ ಇಷ್ಟೆಲ್ಲ ಪ್ರಯೋಜನ.. ಶಿಲ್ಪಾ ಶೆಟ್ಟಿ ಕೂಡ ಇದನ್ನೇ ಮಾಡೋದು!
ತುಪ್ಪವನ್ನು ಸರಿಯಾದ ರೀತಿ, ಸೀಮಿತ ಪ್ರಮಾಣದಲ್ಲಿ ಸೇವಿಸಿದರೆ ಅದು ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನ ನೀಡುತ್ತದೆ. ಹಲವು ಬಾರಿ ನಟಿ ಶಿಲ್ಪಾ ಶೆಟ್ಟಿ ಸಹ ತಾವು ಪ್ರತಿದಿನ ತುಪ್ಪ ಸೇವಿಸುವ ಬಗ್ಗೆ ಹೇಳಿದ್ದಿದೆ.
ಮಲಬದ್ಧತೆ ಸಮಸ್ಯೆ ಇರುವವರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಚಮಚ ತುಪ್ಪವನ್ನು ಸೇವಿಸುವುದು ತುಂಬಾ ಪ್ರಯೋಜನಕಾರಿ. ಇದು ಮಲಬದ್ಧತೆ ಮತ್ತು ಹೊಟ್ಟೆ ನೋವನ್ನು ಗುಣಪಡಿಸುತ್ತದೆ.
ತುಪ್ಪದಲ್ಲಿ ಬ್ಯುಟರಿಕ್ ಆಮ್ಲವಿದೆ. ಖಾಲಿ ಹೊಟ್ಟೆಯಲ್ಲಿ ಉಗುರುಬೆಚ್ಚನೆಯ ನೀರಿನೊಂದಿಗೆ ತುಪ್ಪವನ್ನು ಸೇವಿಸಿದರೆ ಜೀರ್ಣಕಾರಿ ಸಮಸ್ಯೆಗಳಿಂದ ಪರಿಹಾರವನ್ನು ಪಡೆಯಬಹುದು.
ತುಪ್ಪದಲ್ಲಿ ಸಾಕಷ್ಟು ಪ್ರಮಾಣದ ಒಮೆಗಾ-3 ಕೊಬ್ಬಿನಾಮ್ಲಗಳಿವೆ. ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವಿಸುವುದರಿಂದ ಕೀಲು ನೋವಿನಿಂದ ಪರಿಹಾರ ಪಡೆಯಬಹುದು.
ತುಪ್ಪದಲ್ಲಿ ಕ್ಯಾಲ್ಸಿಯಂ ಸಮೃದ್ಧವಾಗಿದೆ. ಇದು ಮೂಳೆಗಳನ್ನು ಆರೋಗ್ಯವಾಗಿಡುತ್ತದೆ. ಇಮ್ಯುನಿಟಿ ಬೂಸ್ಟರ್ ಆಗಿ ಕೆಲಸ ಮಾಡುತ್ತದೆ.
ಆರೋಗ್ಯಕರ ಕೊಬ್ಬುಗಳು ತುಪ್ಪದಲ್ಲಿ ಕಂಡುಬರುತ್ತವೆ. ಇದರಲ್ಲಿರುವ ಆ್ಯಂಟಿಆಕ್ಸಿಡೆಂಟ್ ಗುಣಗಳು ಆರೋಗ್ಯಕ್ಕೆ ಅತ್ಯಗತ್ಯ. ಖಾಲಿ ಹೊಟ್ಟೆಯಲ್ಲಿ ಒಂದು ಚಮಚ ತುಪ್ಪವನ್ನು ಬೆಚ್ಚಗಿನ ನೀರಿನೊಂದಿಗೆ ಸೇವಿಸಿದರೆ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.
ತುಪ್ಪ ಚರ್ಮವನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ತಿನ್ನುವುದರಿಂದ ಮುಖದ ಮೇಲೆ ಸುಕ್ಕುಗಳು ಮತ್ತು ಮೊಡವೆಗಳಿಂದ ಪರಿಹಾರವನ್ನು ಪಡೆಯಬಹುದು.
ವಿಟಮಿನ್-ಎ ಮತ್ತು ಒಮೆಗಾ-3 ಕೊಬ್ಬಿನಾಮ್ಲಗಳು ತುಪ್ಪದಲ್ಲಿ ಕಂಡುಬರುತ್ತವೆ, ಇದು ಕಣ್ಣಿನ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಇದರ ಸೇವನೆಯಿಂದ ದೃಷ್ಟಿ ಸುಧಾರಿಸುತ್ತದೆ.
ಸೂಚನೆ: ಪ್ರಿಯ ಓದುಗರೇ, ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.