Foods for white Hair or Grey Hair: ಇಂದಿನ ಯುವಕರು ಬಿಳಿ ಕೂದಲಿನ ಸಮಸ್ಯೆಯಿಂದ ತುಂಬಾ ತೊಂದರೆಗೀಡಾಗಿದ್ದಾರೆ. ಈ ಸಮಸ್ಯೆಗೆ ಕೆಟ್ಟ ಆಹಾರ ಪದ್ಧತಿಯೂ ಒಂದು ಕಾರಣವಾಗಿರಬಹುದು. ಅಥವಾ ಅನೇಕ ದೈಹಿಕ ಸಮಸ್ಯೆಗಳ ಸಂಕೇತವೂ ಆಗಿರಬಹುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಯುವಕರ ಕೂದಲು ಬಿಳಿಯಾಗಲು ವಿಟಮಿನ್ ಬಿ 12ರ ಕೊರತೆಯು ಸಾಮಾನ್ಯ ಕಾರಣವಾಗಿದೆ. ಕೆಲವೊಮ್ಮೆ ಥೈರಾಯ್ಡ್ ಸಮಸ್ಯೆಯಿಂದಲೂ ಇದು ಸಂಭವಿಸುತ್ತದೆ. ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಮತ್ತು ಕೂದಲು ಬಿಳಿಯಾಗುವುದನ್ನು ತಡೆಯಲು, ಕ್ಯಾಲ್ಸಿಯಂ, ವಿಟಮಿನ್ ಡಿ3, ತಾಮ್ರ, ಸತು ಮತ್ತು ಕಬ್ಬಿಣದಂತಹ ಆರೋಗ್ಯಕರ ಆಹಾರಗಳನ್ನು ಹೊಂದಿರುವ ಹೆಚ್ಚಿನ ಪೋಷಕಾಂಶಗಳನ್ನು ಸೇವಿಸಿ.
ಕ್ಯಾರೆಟ್: ಕ್ಯಾರೊಟಿನಾಯ್ಡ್’ ಗಳು, ಪೊಟ್ಯಾಸಿಯಮ್, ವಿಟಮಿನ್ ಎ ಮತ್ತು ವಿಟಮಿನ್ ಇ ನಂತಹ ಅನೇಕ ಪೋಷಕಾಂಶಗಳು ಕ್ಯಾರೆಟ್’ನಲ್ಲಿ ಹೇರಳವಾಗಿ ಕಂಡುಬರುತ್ತವೆ. ಇದು ನಿಮ್ಮ ಆರೋಗ್ಯಕ್ಕೆ ಸಹಾಯ ಮಾಡುತ್ತದೆ ಮತ್ತು ಕೂದಲು ಬಿಳಿಯಾಗದಂತೆ ರಕ್ಷಿಸುತ್ತದೆ. ಕ್ಯಾರೆಟ್ ಜ್ಯೂಸ್ ಕುಡಿಯುವುದು ಕೂದಲಿಗೆ ತುಂಬಾ ಒಳ್ಳೆಯದು.
ಹೂಕೋಸು: ಹೂಕೋಸು ತರಕಾರಿಯಾಗಿ ಬಳಸಲಾಗುತ್ತದೆ. ಇದು ಅದ್ಭುತ ಆರೋಗ್ಯ ಪ್ರಯೋಜನ ಹೊಂದಿದೆ. ಪ್ರೋಟೀನ್, ಕ್ಯಾಲ್ಸಿಯಂ, ರಂಜಕ, ವಿಟಮಿನ್ 'ಎ' ಮತ್ತು ವಿಟಮಿನ್ ಸಿ ಅಂಶಗಳು ಹೂಕೋಸುಗಳಲ್ಲಿ ಕಂಡುಬರುತ್ತವೆ. ಇದು ಕೂದಲು ಬಿಳಿಯಾಗದಂತೆ ರಕ್ಷಿಸಲು ಸಹಾಯ ಮಾಡುತ್ತದೆ.
ಬಾದಾಮಿ: ಬಾದಾಮಿ ಮೆದುಳಿಗೆ ಪ್ರಯೋಜನಕಾರಿ. ಇದರಲ್ಲಿ ಜೀವಸತ್ವಗಳು ಮತ್ತು ಅನೇಕ ಪೋಷಕಾಂಶಗಳು ಕಂಡುಬರುತ್ತವೆ. ಚರ್ಮ ಮತ್ತು ಕೂದಲಿನ ಆರೋಗ್ಯಕ್ಕೆ ಉತ್ತಮವೆಂದು ಪರಿಗಣಿಸಲಾಗಿದೆ. ಬಾದಾಮಿಯನ್ನು ನಿಯಮಿತವಾಗಿ ಸೇವಿಸುವುದರಿಂದ ಬಿಳಿ ಕೂದಲಿನ ಸಮಸ್ಯೆಯನ್ನು ದೂರವಿಡಬಹುದು.
ಮೊಟ್ಟೆ: ಮೊಟ್ಟೆಗಳಲ್ಲಿ ಅನೇಕ ಪೋಷಕಾಂಶಗಳಿದ್ದು, ಇದು ದೇಹಕ್ಕೆ ತುಂಬಾ ಪ್ರಯೋಜನಕಾರಿ. ಮೊಟ್ಟೆಗಳು ಪ್ರೋಟೀನ್ನ ಅತ್ಯುತ್ತಮ ಮೂಲವೆಂದು ಪರಿಗಣಿಸಲಾಗಿದೆ. ಮೊಟ್ಟೆಯ ಸೇವನೆಯಿಂದ ಕೂದಲು ಬೂದು ಬಣ್ಣಕ್ಕೆ ತಿರುಗುವುದನ್ನು ತಡೆಯಬಹುದು.
ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಅರ್ಹ ವೈದ್ಯಕೀಯ ಅಭಿಪ್ರಾಯಕ್ಕೆ ಯಾವುದೇ ರೀತಿಯಲ್ಲಿ ಪರ್ಯಾಯವಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞ ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸಿ. ಈ ಮಾಹಿತಿಯ ಹೊಣೆಯನ್ನು Zee Kannada News ಹೊರುವುದಿಲ್ಲ.