ಬೇಸಿಗೆಯಲ್ಲಿ ದೇಹಕ್ಕೆ ಎನರ್ಜಿ ನೀಡುವ ಹಣ್ಣುಗಳಿವು
ಆರೋಗ್ಯ ತಜ್ಞರ ಪ್ರಕಾರ, ಬೇಸಿಗೆಯಲ್ಲಿ ಕೆಲವು ಹಣ್ಣುಗಳನ್ನು ತಿನ್ನುವುದರಿಂದ ಸುಸ್ತು, ಆಯಾಸ ಕಡಿಮೆಯಾಗಿ ದೇಹಕ್ಕೆ ಶಕ್ತಿ ದೊರೆಯುತ್ತದೆ ಎನ್ನಲಾಗುತ್ತದೆ. ಅಂತಹ ಹಣ್ಣುಗಳೆಂದರೆ...
ಬೇಸಿಗೆಯಲ್ಲಿ ಹೆಚ್ಚು ನೀರಿನ ಅಂಶವನ್ನು ಒಳಗೊಂಡಿರುವ ಕಲ್ಲಂಗಡಿ ಹಣ್ಣನ್ನು ತಿನ್ನುವುದರಿಂದ ಇದು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ.
ಬೇಸಿಗೆಯಲ್ಲಿ ಹಣ್ಣುಗಳ ರಾಜ ಮಾವಿನ ಹಣ್ಣಿನದ್ದೆ ಕಾರುಬಾರು. ತಿನ್ನಲು ರುಚಿಕರವಾದ ಮಾವಿನ ಹಲ್ಲಿನಲ್ಲಿ ನೈಸರ್ಗಿಕ ಸಕ್ಕರೆ, ವಿಟಮಿನ್ ಗಳಲ್ಲಿ ಸಮೃದ್ಧವಾಗಿದೆ. ಇದು ದೇಹಕ್ಕೆ ತ್ವರಿತ ಶಕ್ತಿಯನ್ನು ನೀಡುತ್ತದೆ.
ಬೇಸಿಗೆಯಲ್ಲಿ ತಿನ್ನಲೇಬೇಕಾದ ಮತ್ತೊಂದು ಹಣ್ಣು ಅನಾನಸ್. ಈ ಹಣ್ಣು ಜೀರ್ಣಕ್ರಿಯೆಯನ್ನು ಸುಧಾರಿಸುವುದರ ಜೊತೆಗೆ ದೇಹಕ್ಕೆ ಶಕ್ತಿಯನ್ನು ನೀಡುತ್ತದೆ.
ಎಲ್ಲಾ ಋತುಗಳಲ್ಲೂ ಬಹಳ ಸುಲಭವಾಗಿ ಲಭ್ಯವಿರುವ ಬಾಳೆಹಣ್ಣನ್ನು ನೈಸರ್ಗಿಕ ಶಕ್ತಿಯ ಅತ್ಯುತ್ತಮ ಮೂಲ ಎಂದು ಪರಿಗಣಿಸಲಾಗಿದೆ.
ಬೇಸಿಗೆಯಲ್ಲಿ ಕಿತ್ತಳೆಹಣ್ಣನ್ನು ತಿನ್ನುವುದರಿಂದ ಇದು ದೇಹಕ್ಕೆ ತ್ವರಿತ ಶಕ್ತಿಯನ್ನು ನೀಡುವುದಲ್ಲದೆ, ಮನಸ್ಸನ್ನು ಉಲ್ಲಾಸಭರಿತವಾಗಿ ಇರಿಸುತ್ತದೆ.
ಬೇಸಿಗೆಯಲ್ಲಿ ಪರಂಗಿ ಹಣ್ಣನ್ನು ತಿನ್ನುವುದರಿಂದ ಇದು ಜೀರ್ಣಕ್ರಿಯೆಯನ್ನು ಉತ್ತೇಜಿಸುತ್ತದೆ. ಮಾತ್ರವಲ್ಲ ಇದು ದೇಹಕ್ಕೆ ತ್ವರಿತ ಶಕ್ತಿಯನ್ನು ನೀಡುತ್ತದೆ.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.