ಬೇಸಿಗೆಯಲ್ಲಿ ಸೋಂಪು ನಿಮ್ಮ ಆಹಾರದಲ್ಲಿದ್ದರೆ ಸಿಗುತ್ತೆ ಇಷ್ಟೆಲ್ಲಾ ಪ್ರಯೋಜನ
ಪೋಷಕಾಂಶಗಳ ಖಜಾನೆ ಎಂದು ಹೇಳಲಾಗುವ ಫೆನ್ನೆಲ್/ಸೋಂಪು ಕ್ಯಾಲ್ಸಿಯಂ, ಫೈಬರ್, ಕಬ್ಬಿಣ, ಪೊಟ್ಯಾಸಿಯಮ್, ಸತು ಮತ್ತು ಮೆಗ್ನೀಸಿಯಮ್, ವಿಟಮಿನ್‌ಗಳಂತಹ ಅನೇಕ ಪೋಷಕಾಂಶಗಳನ್ನು ಒಳಗೊಂಡಿದೆ. ಬೇಸಿಗೆಯಲ್ಲಿ ನಿಮ್ಮ ಆಹಾರದಲ್ಲಿ ಸೋಂಪನ್ನು ಬಳಸುವುದರಿಂದ ಆರೋಗ್ಯಕ್ಕೆ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು. ಅವುಗಳೆಂದರೆ...
ಬೇಸಿಗೆ ಕಾಲದಲ್ಲಿ ನಿಮ್ಮ ಆಹಾರದಲ್ಲಿ ಸೋಂಪನ್ನು ಬಳಸುವುದರಿಂದ ಇದು ಚಯಾಪಚಯವನ್ನು ಹೆಚ್ಚಿಸಿ ಅಧಿಕ ಕ್ಯಾಲೋರಿಗಳನ್ನು ಸುಡುವ ಮೂಲಕ ತೂಕ ಇಳಿಕೆಗೆ ಸಹಾಯಕವಾಗಿದೆ.
ಸೋಂಪಿನಲ್ಲಿ ಫೈಬರ್ ಹೆಚ್ಚಾಗಿ ಕಂಡು ಬರುತ್ತದೆ. ಬೇಸಿಗೆಯಲ್ಲಿ ಸೋಂಪನ್ನು ಬಳಸುವುದರಿಂದ ಇದು ಗ್ಯಾಸ್, ಅಜೀರ್ಣ, ಮಲಬದ್ಧತೆಯಂತಹ ಜೀರ್ಣಕಾರಿ ಸಮಸ್ಯೆಗಳಿಂದ ಪರಿಹಾರವನ್ನು ನೀಡುತ್ತದೆ.
ಸೋಂಪು ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳನ್ನು ಒಳಗೊಂಡಿದೆ. ಬೇಸಿಗೆಯಲ್ಲಿ ನಿಮ್ಮ ಆಹಾರದಲ್ಲಿ ಇದನ್ನು ಬಳಸುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ.
ಸೋಂಪಿನಲ್ಲಿ ಕಂಡು ಬರುವ ಪೊಟ್ಯಾಸಿಯಮ್ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿರುವವರು ಬೇಸಿಗೆಯಲ್ಲಿ ರಾತ್ರಿ ಮಲಗುವ ಮೊದಲು ಸೋಂಪಿನಿಂದ ಕಷಾಯ ತಯಾರಿಸಿ ಕುಡಿಯುವುದರಿಂದ ಉತ್ತಮ ನಿದ್ರೆ ಪಡೆಯಬಹುದು.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.