ಸರ್ಕಾರಿ ನೌಕರರಿಗೆ ದೊಡ್ಡ ಆಘಾತ ! ವೇತನ ಹೆಚ್ಚಳದ ಬಗ್ಗೆ ಸದನದಲ್ಲಿಯೇ ಶಾಕಿಂಗ್ ಹೇಳಿಕೆ ನೀಡಿದ ಸರ್ಕಾರ !ಹುಸಿಯಾಯಿತು ನಿರೀಕ್ಷೆ
ಕೇಂದ್ರ ಸರ್ಕಾರಿ ನೌಕರರಿಗೆ ಸಂಬಂಧಪಟ್ಟಂತೆ ಇದೀಗ ಸರ್ಕಾರ ಆಘಾತಕಾರಿ ಹೇಳಿಕೆಯನ್ನು ನೀಡಿದೆ. ಈ ಮೂಲಕ ಸರ್ಕಾರಿ ನೌಕರರ ನಿರೀಕ್ಷೆಯನ್ನು ಹುಸಿ ಮಾಡಿದೆ.
ಸರ್ಕಾರ ಪ್ರಕಟಿಸಿದ ನಿರ್ಧಾರದಿಂದ ದೊಡ್ಡ ಮಟ್ಟದ ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರ ಆಸೆಗೆ ತಣ್ಣೀರು ಎರಚಿದ ಹಾಗೆ ಆಗಿದೆ.
ಹಣಕಾಸು ಸಚಿವಾಲಯವು 8 ನೇ ವೇತನ ಆಯೋಗಕ್ಕೆ ಸಂಬಂಧಿಸಿದಂತೆ ನವೀಕರಣವನ್ನು ನೀಡಿದೆ. ಇದರಿಂದ ಕೇಂದ್ರ ನೌಕರರಿಗೆ ದೊಡ್ಡ ಹೊಡೆತ ಬಿದ್ದಂತಾಗಿದೆ.
2025-2026ರ ಕೇಂದ್ರ ಬಜೆಟ್‌ನಲ್ಲಿ ಹೊಸ ವೇತನ ಆಯೋಗದ ರಚನೆಗೆ ಸಂಬಂಧಿಸಿದ ಯಾವುದೇ ಪ್ರಸ್ತಾವನೆಯನ್ನು ಪರಿಗಣಿಸಲಾಗುತ್ತಿದೆಯೇ ಎನ್ನುವ ಪ್ರಶ್ನೆಗೆ ರಾಜ್ಯಸಭೆಯಲ್ಲಿ ಉತ್ತರಿಸಿದ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ, ಎಂಟನೇ ವೇತನ ಆಯೋಗವನ್ನು ರಚಿಸುವ ಯಾವುದೇ ಪ್ರಸ್ತಾವನೆಯನ್ನು ಪರಿಗಣಿಸುತ್ತಿಲ್ಲ ಎಂದು ಸ್ಪಷ್ಟ ಶಬ್ಧಗಳಲ್ಲಿ ಹೇಳಿದ್ದಾರೆ.
ಸರ್ಕಾರದ ಈ ಹೇಳಿಕೆಯಿಂದ ಕೇಂದ್ರ ನೌಕರರು ಮತ್ತು ಪಿಂಚಣಿದಾರರಿಗೆ ದೊಡ್ಡ ಹೊಡೆತ ಬಿದ್ದಿದೆ. ಎಂಟನೇ ವೇತನ ಆಯೋಗವನ್ನು ಮುಂಬರುವ ಬಜೆಟ್‌ನಲ್ಲಿ ಹಣಕಾಸು ಸಚಿವಾಲಯ ಪ್ರಕಟಿಸಲಿದೆ ಎನ್ನುವ ನಿರೀಕ್ಷೆ ಅವರದ್ದಾಗಿತ್ತು.
ಸಾಮಾನ್ಯವಾಗಿ ಪ್ರತಿ 10 ವರ್ಷಗಳಿಗೊಮ್ಮೆ ವೇತನ ಆಯೋಗವನ್ನು ರಚಿಸಲಾಗುತ್ತದೆ. ಇದರಂತೆ 8ನೇ ವೇತನ ಆಯೋಗ ರಚನೆಯಾದರೆ, ಕೇಂದ್ರ ನೌಕರರು ಮತ್ತು ಪಿಂಚಣಿದಾರರ ವೇತನದಲ್ಲಿ ಭಾರಿ ಏರಿಕೆಯಾಗುವುದು.