Nirmala Sitharaman : ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್!

Thu, 29 Sep 2022-7:52 pm,

ಬೆಂಗಳೂರು : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಜೆ ನಗರದ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಸೌಹಾರ್ದ ಭೇಟಿ ನೀಡಿದರು.

ಸೀತಾರಾಮನ್ ಅವರು ಮಾಜಿ ಪ್ರಧಾನಿಗಳ ಕುಟುಂಬ ಸದಸ್ಯರು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು.

ಮಾಜಿ ಪ್ರಧಾನಿಗಳ ಆರೋಗ್ಯ ವಿಚಾರಿಸಿದ ನಿರ್ಮಲಾ ಸೀತಾರಾಮನ್ ಅವರು, ಕೆಲ ಹೊತ್ತು ಕುಶಲೋಪರಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಉಪಸ್ಥಿತರಿದ್ದರು.

ZEENEWS TRENDING STORIES

By continuing to use the site, you agree to the use of cookies. You can find out more by Tapping this link