ಸಲ್ಮಾನ್ ಖಾನ್ ಮನೆ ಹೊರಗೆ ಗುಂಡಿನ ದಾಳಿ, ಮನೆಯಲ್ಲೇ ಇದ್ದ 'ಭಾಯಿಜಾನ್'.. ಆತಂಕದಲ್ಲಿ ಫ್ಯಾನ್ಸ್ !

Firing Outside Salman Khan House: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬೈ ನಿವಾಸದ ಹೊರಗೆ ಇಂದು ಬೆಳಗ್ಗೆ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /5

ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಬೈಕ್‌ ಮೇಲೆ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. 

2 /5

ಮಾಹಿತಿಯ ಪ್ರಕಾರ, ಬೈಕ್‌ನಲ್ಲಿ ಬಂದಿದ್ದ ಇಬ್ಬರು ದಾಳಿಕೋರರು ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ಹೊರಗೆ 2-3 ಸುತ್ತು ಗುಂಡಿನ ದಾಳಿ ನಡೆಸಿದ್ದಾರೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. 

3 /5

ಈ ಘಟನೆ ನಡೆದಾಗ ಸಲ್ಮಾನ್ ಖಾನ್ ಮನೆಯಲ್ಲೇ ಇದ್ದರು. ಇದಕ್ಕೂ ಮುನ್ನ ಸಲ್ಮಾನ್ ಖಾನ್‌ಗೆ ಹಲವು ಬಾರಿ ಕೊಲೆ ಬೆದರಿಕೆಗಳು ಬಂದಿದ್ದವು ಎಂಬುದು ಗಮನಾರ್ಹವಾಗಿದೆ. 

4 /5

ಮುಂಬೈ ಕ್ರೈಂ ಬ್ರಾಂಚ್ ಮತ್ತು ಎಟಿಎಸ್ ತಂಡ ಘಟನಾ ಸ್ಥಳಕ್ಕೆ ತಲುಪಿದ್ದು, ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ಹೊರಗೆ ದುಷ್ಕರ್ಮಿಗಳು ಗಾಳಿಯಲ್ಲಿ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. 

5 /5

ಸದ್ಯ ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಕುಖ್ಯಾತ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಹಲವು ಬಾರಿ ಬೆದರಿಕೆ ಹಾಕಿದ್ದ. ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದು ತನ್ನ ಜೀವನದ ಗುರಿ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದ.