ಸಲ್ಮಾನ್ ಖಾನ್ ಮನೆ ಹೊರಗೆ ಗುಂಡಿನ ದಾಳಿ, ಮನೆಯಲ್ಲೇ ಇದ್ದ `ಭಾಯಿಜಾನ್`.. ಆತಂಕದಲ್ಲಿ ಫ್ಯಾನ್ಸ್ !

Sun, 14 Apr 2024-9:42 am,

ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಬೈಕ್‌ ಮೇಲೆ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. 

ಮಾಹಿತಿಯ ಪ್ರಕಾರ, ಬೈಕ್‌ನಲ್ಲಿ ಬಂದಿದ್ದ ಇಬ್ಬರು ದಾಳಿಕೋರರು ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ಹೊರಗೆ 2-3 ಸುತ್ತು ಗುಂಡಿನ ದಾಳಿ ನಡೆಸಿದ್ದಾರೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. 

ಈ ಘಟನೆ ನಡೆದಾಗ ಸಲ್ಮಾನ್ ಖಾನ್ ಮನೆಯಲ್ಲೇ ಇದ್ದರು. ಇದಕ್ಕೂ ಮುನ್ನ ಸಲ್ಮಾನ್ ಖಾನ್‌ಗೆ ಹಲವು ಬಾರಿ ಕೊಲೆ ಬೆದರಿಕೆಗಳು ಬಂದಿದ್ದವು ಎಂಬುದು ಗಮನಾರ್ಹವಾಗಿದೆ. 

ಮುಂಬೈ ಕ್ರೈಂ ಬ್ರಾಂಚ್ ಮತ್ತು ಎಟಿಎಸ್ ತಂಡ ಘಟನಾ ಸ್ಥಳಕ್ಕೆ ತಲುಪಿದ್ದು, ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ಹೊರಗೆ ದುಷ್ಕರ್ಮಿಗಳು ಗಾಳಿಯಲ್ಲಿ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. 

ಸದ್ಯ ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಕುಖ್ಯಾತ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಹಲವು ಬಾರಿ ಬೆದರಿಕೆ ಹಾಕಿದ್ದ. ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದು ತನ್ನ ಜೀವನದ ಗುರಿ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದ. 

ZEENEWS TRENDING STORIES

By continuing to use the site, you agree to the use of cookies. You can find out more by Tapping this link