Virat Kohli: 13 ವರ್ಷಗಳ ‘ಪ್ರೀತಿಯ ಜೀವನ’ದಲ್ಲಿ ವಿರಾಟ್’ಗೆ ಈ ರೀತಿ ಆಗಿದ್ದು ಇದೇ ಮೊದಲು! ಅಂತಹದ್ದೇನಾಯ್ತು?
ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯ ಫೆಬ್ರವರಿ 15 ರಿಂದ ರಾಜ್‌ಕೋಟ್’ನಲ್ಲಿ ನಡೆಯಲಿದೆ. ಈ ಸರಣಿಯ ಕೊನೆಯ 3 ಟೆಸ್ಟ್ ಪಂದ್ಯಗಳಿಗೆ ಭಾರತ ತಂಡವನ್ನು ಈಗಾಗಲೇ ಪ್ರಕಟಿಸಲಾಗಿದೆ. ಈ 17 ಸದಸ್ಯರ ಭಾರತ ತಂಡದಲ್ಲಿ ವಿರಾಟ್ ಕೊಹ್ಲಿ ಇಲ್ಲ. ವಿರಾಟ್ ಕೊಹ್ಲಿ ವೈಯಕ್ತಿಕ ಕಾರಣಗಳಿಂದ ಆಡುತ್ತಿಲ್ಲ ಎಂದು ಹೇಳಲಾಗುತ್ತಿದೆ.
ಈ ಹಿಂದೆ ಹೈದರಾಬಾದ್ ಮತ್ತು ವಿಶಾಖಪಟ್ಟಣಂನಲ್ಲಿ ನಡೆದ ಟೆಸ್ಟ್’ನಲ್ಲಿಯೂ ಸಹ ವಿರಾಟ್ ಕೊಹ್ಲಿ ಟೀಂ ಇಂಡಿಯಾದ ಭಾಗವಾಗಿರಲಿಲ್ಲ. ಸರಣಿ ಆರಂಭಕ್ಕೂ ಮುನ್ನ ವಿರಾಟ್ ಕೊಹ್ಲಿ ಮೊದಲ 2 ಟೆಸ್ಟ್ ಪಂದ್ಯಗಳಿಂದ ತಮ್ಮ ಹೆಸರನ್ನು ಹಿಂಪಡೆಯಲು ನಿರ್ಧರಿಸಿದ್ದರು.
ಆದರೆ ಈ ಸರಣಿಯ ಕೊನೆಯ 3 ಟೆಸ್ಟ್ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಆಡುತ್ತಾರೆ ಎಂದೇ ಹೇಳಲಾಗಿತ್ತು. ಆದರೆ, ಭಾರತೀಯ ಅಭಿಮಾನಿಗಳಿಗೆ ನಿರಾಸೆಯಾಗಿದೆ. ವೈಯಕ್ತಿಕ ಕಾರಣಗಳಿಂದ ವಿರಾಟ್ ಕೊಹ್ಲಿಗೆ ಆಡಲು ಸಾಧ್ಯವಾಗುವುದಿಲ್ಲ.
ವಿರಾಟ್ ಕೊಹ್ಲಿ ಅವರ 13 ವರ್ಷಗಳ ಟೆಸ್ಟ್ ವೃತ್ತಿಜೀವನದಲ್ಲಿ ಒಂದೇ ಒಂದು ಟೆಸ್ಟ್ ಪಂದ್ಯವನ್ನು ಆಡಲು ಸಾಧ್ಯವಾಗದಿರುವುದು ಇದೇ ಮೊದಲು. ಅದರಲ್ಲೂ ತವರು ನೆಲದಲ್ಲಿ ನಡೆಯುತ್ತಿರುವ ಪಂದ್ಯವನ್ನು ಕೊಹ್ಲಿ ಮಿಸ್ ಮಾಡಿಕೊಂಡಿದ್ದು ಫಸ್ಟ್ ಟೈಂ. ವಿರಾಟ್ ಕೊಹ್ಲಿ ಎಲ್ಲದಕ್ಕಿಂತ ಹೆಚ್ಚಾಗಿ ಕ್ರಿಕೆಟ್ ಜೀವನವನ್ನು ಪ್ರೀತಿಸುತ್ತಾರೆ. ಆದರೆ ಇದೇ ಮೊದಲ ಬಾರಿಗೆ ತಮ್ಮ ‘ಪ್ರೀತಿಯ ವೃತ್ತಿಜೀವನ’ವನ್ನು ಪಕ್ಕಕ್ಕಿಟ್ಟು ಕುಟುಂಬಕ್ಕೆ ಪ್ರಾಮುಖ್ಯತೆ ನೀಡಿದ್ದಾರೆ. ಈ ನಿರ್ಧಾರದ ಹಿಂದಿನ ಕಾರಣ ಏನೆಂಬುದು ಇನ್ನಷ್ಟೇ ಸ್ಪಷ್ಟವಾಗಬೇಕಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಹೈದರಾಬಾದ್’ನಲ್ಲಿ ನಡೆದಿತ್ತು. ಈ ಟೆಸ್ಟ್’ನಲ್ಲಿ ಬೆನ್ ಸ್ಟೋಕ್ಸ್ ನೇತೃತ್ವದ ಆಂಗ್ಲರ ತಂಡ, ಭಾರತ ತಂಡವನ್ನು 28 ರನ್’ಗಳಿಂದ ಸೋಲಿಸಿತು. ಇದಾದ ಬಳಿಕ ಎರಡನೇ ಟೆಸ್ಟ್’ನಲ್ಲಿ ಟೀಂ ಇಂಡಿಯಾ ಅದ್ಭುತ ಪ್ರತಿದಾಳಿ ನಡೆಸಿತು. ವಿಶಾಖಪಟ್ಟಣಂ ಟೆಸ್ಟ್’ನಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ 106 ರನ್’ಗಳಿಂದ ಜಯ ಸಾಧಿಸಿತು.
ಇನ್ನು ಎರಡೂ ತಂಡಗಳು ಫೆಬ್ರವರಿ 15 ರಿಂದ ರಾಜ್’ಕೋಟ್’ನಲ್ಲಿ ಮುಖಾಮುಖಿಯಾಗಲಿವೆ. ಇದಾದ ಬಳಿಕ ನಾಲ್ಕನೇ ಟೆಸ್ಟ್ ರಾಂಚಿಯಲ್ಲಿ ನಡೆದರೆ, ಕೊನೆಯ ಟೆಸ್ಟ್ ಧರ್ಮಶಾಲಾದಲ್ಲಿ ಆಯೋಜನೆಗೊಳ್ಳಲಿದೆ.