ಈ 5 ಕಾರಣಗಳಿಂದ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚುತ್ತದೆ ..!
ಆನುವಂಶಿಕ ಕೊಲೆಸ್ಟ್ರಾಲ್ ಹೊಂದಲು ದೊಡ್ಡ ಕಾರಣಗಳಲ್ಲಿ ಒಂದಾಗಿದೆ. ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ನಿಯಮಿತವಾಗಿ ವ್ಯಾಯಾಮ ಮಾಡುತ್ತಿದ್ದ ನಂತರವೂ ಕೊಲೆಸ್ಟ್ರಾಲ್ ಕಡಿಮೆಯಾಗಿಲ್ಲ ಎಂದಾದರೆ ಅದು ಆನುವಂಶಿಕ ಕಾರಣದಿಂದ ಆಗಿರುವ ಸಾಧತೆಗಳು ಹೆಚ್ಚು.
ಆಲ್ಕೊಹಾಲ್ ಸೇವನೆಯು ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುತ್ತದೆ. ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುವಲ್ಲಿ ಆಲ್ಕೋಹಾಲ್ ಪ್ರಮುಖ ಪಾತ್ರ ವಹಿಸುತ್ತದೆ. ಸರಿಯಾದ ಆಹಾರ ಕ್ರಮವನ್ನು ಅನುಸರಿಸಿ, ನಿಯಮಿತವಾಗಿ ವ್ಯಾಯಾಮ ಮಾಡುತ್ತಿದ್ದರೂ ಕೂಡಾ ಹೆಚ್ಚು ಮದ್ಯಪಾನ ಮಾಡುತ್ತಿದ್ದರೆ, ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚುತ್ತದೆ.
ಕೆಲವು ಔಷಧಿಗಳು ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತಿರಬಹುದು. ಸ್ಟೀರಾಯ್ಡ್ ಮತ್ತು ರೆಟಿನಾಯ್ಡ್ ಅಥವಾ ಪ್ರೊಜೆಸ್ಟಿನ್ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದರೆ, ಕೊಲೆಸ್ಟ್ರಾಲ್ ಮಟ್ಟಗಳು ಹೆಚ್ಚಾಗಬಹುದು.
ಸರಿಯಾಗಿ ವ್ಯಾಯಾಮ ಮಾಡದೇ ಹೋದರೆ ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟ ಹೆಚ್ಚುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು, ಸರಿಯಾದ ಮತ್ತು ಸಾಕಷ್ಟು ವ್ಯಾಯಾಮ ಮಾಡುವುದು ಆಹಾರದಷ್ಟೇ ಮುಖ್ಯವಾಗಿದೆ.
ಹೊರಗಿನ ಆಹಾರವನ್ನು ತೆಗೆದುಕೊಳ್ಳುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಬಹುದು. ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು, ಹೆಚ್ಚಾಗಿ ಮನೆಯಲ್ಲಿ ತಯಾರಿಸಿದ ಆಹಾರವನ್ನು ಸೇವಿಸಬೇಕು. ಹೊರಗಿನ ಆಹಾರ ಪದಾರ್ಥಗಳನ್ನು ಕಡಿಮೆ ಮಾಡುವುದು ಅವಶ್ಯಕ