ಈ ಪದಾರ್ಥಗಳನ್ನು ಸೇವಿಸಿದ ಕೂಡಲೇ ಬ್ಲಡ್ ಶುಗರ್ ಆಗುತ್ತದೆ ನಾರ್ಮಲ್ ! ಒಮ್ಮೆ ಟ್ರೈ ಮಾಡಿ ನೋಡಿ !
ಅಗಸೆಬೀಜಗಲ್ಲಿ ಹೆಚ್ಚಿನ ಫೈಬರ್ ಅಂಶ ಇರುತ್ತದೆ. ಇದು ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿರುತ್ತವೆ.ಅಗಸೆ ಬೀಜಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗುವುದೇ ಇಲ್ಲ.
ಚಿಯಾ ಬೀಜಗಳು ಉತ್ಕರ್ಷಣ ನಿರೋಧಕಗಳು, ಒಮೆಗಾ 3 ಕೊಬ್ಬಿನಾಮ್ಲಗಳು, ಫೈಬರ್ ಮತ್ತು ಮೆಗ್ನೀಸಿಯಮ್ ಗಳಲ್ಲಿ ಸಮೃದ್ಧವಾಗಿವೆ. ಈ ಎಲ್ಲಾ ಪೋಷಕಾಂಶಗಳು ಟೈಪ್ 2 ಮಧುಮೇಹ ಮತ್ತು ಅದರ ತೊಡಕುಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಈ ತರಕಾರಿಗಳು ಫೈಬರ್, ಮೆಗ್ನೀಸಿಯಮ್ ಮತ್ತು ವಿಟಮಿನ್ ಎ ನಂತಹ ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ. ಹೀಗಾಗಿ ಈ ತರಕಾರಿಗಳು ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಮೆಂತ್ಯೆ ಫೈಬರ್ ಮತ್ತು ಇತರ ಆರೋಗ್ಯ ಅಂಶಗಳನ್ನು ಒಳಗೊಂಡಿದೆ. ಇದರಲ್ಲಿ ನಾರಿನಂಶವೂ ಅಧಿಕವಾಗಿದೆ. ಇದು ಜೀರ್ಣಕ್ರಿಯೆಯನ್ನು ನಿಧಾನಗೊಳಿಸುವುದರಿಂದ ಕಾರ್ಬೋಹೈಡ್ರೇಟ್‌ಗಳು ಮತ್ತು ಸಕ್ಕರೆಯನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಈ ಕಾರಣದಿಂದಾಗಿ, ರಕ್ತದಲ್ಲಿನ ಸಕ್ಕರೆಯ ಮಟ್ಟವು ಹೆಚ್ಚಾಗದೆ ನಾರ್ಮಲ್ ಆಗಿ ಇರುತ್ತದೆ.
ಮಧುಮೇಹಿಗಳು ಪ್ರತಿದಿನ ಬೆಳಿಗ್ಗೆ ಹಾಗಲಕಾಯಿ ರಸವನ್ನು ಕುಡಿಯುವುದರಿಂದ ದಿನವಿಡೀ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣದಲ್ಲಿರಲು ಸಹಾಯವಾಗುತ್ತದೆ.
ಸೋರೆಕಾಯಿಯಲ್ಲಿ 92% ನೀರು ಮತ್ತು 8% ಫೈಬರ್ ಇರುತ್ತದೆ. ಇದು ಅತ್ಯಂತ ಕಡಿಮೆ ಮಟ್ಟದ ಗ್ಲೂಕೋಸ್ ಮತ್ತು ಕ್ಯಾಲೋರಿಯನ್ನು ಹೊಂದಿದೆ. ಹಾಗಾಗಿ ಮಧುಮೇಹ ಇರುವವರಿಗೆ ಇದು ಬೆಸ್ಟ್ ತರಕಾರಿ.
ಚಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಇದರ ಚಹಾ ತಯಾರಿಸಿ ಕುಡಿಯಬಹುದು. ನೀರಿನಲ್ಲಿ ಕುದಿಸಿ ಚಕ್ಕೆ ನೀರಿನಂತೆ ಸೇವಿಸಬಹುದು. ಇದು ಬ್ಲಡ್ ಶುಗರ್ ನಿಯಂತ್ರಣದಲ್ಲಿ ಇದುವ ಜೊತೆಗೆ ತೂಕ ನಷ್ಟಕ್ಕೂ ಸಹಾಯ ಮಾಡುತ್ತದೆ. (ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.)