ತ್ವಚೆಯ ಕಾಂತಿಗಾಗಿ ಮನೆಯಲ್ಲಿ ತಯಾರಿಸಿಕೊಳ್ಳಿ ಈ ಫೇಸ್ ಪ್ಯಾಕ್
ಈ 4 ಫೇಸ್ ಪ್ಯಾಕ್‌ಗಳನ್ನು ಮನೆಯಲ್ಲಿಯೇ ತಯಾರಿಸಿ ತ್ವಚೆಗೆ ಹಚ್ಚುವುದರಿಂದ ಡೀಪ್ ಕ್ಲೀನಿಂಗ್ ಮಾಡಿಕೊಳ್ಳುವುದು ಸಾಧ್ಯವಾಗುತ್ತದೆ.
ಅರಿಶಿನದಲ್ಲಿರುವ ಆಯುರ್ವೇದ ಗುಣಲಕ್ಷಣಗಳು ಪಿಗ್ಮೆಂಟೇಶನ್ ಮತ್ತು ಟ್ಯಾನ್ ಅನ್ನು ತೆಗೆದುಹಾಕುತ್ತದೆ. ಟೊಮೆಟೊದ ಬಳಕೆಯು ಡೀಪ್ ಕ್ಲೀನಿಂಗ್ ಗೆ ಸಹಾಯ ಮಾಡುತ್ತದೆ. ಇದಕ್ಕಾಗಿ ಒಂದು ಟೊಮೆಟೊವನ್ನು ರುಬ್ಬಿಕೊಂಡು ಅದಕ್ಕೆ ಅರಿಶಿನ ಮತ್ತು ತೆಂಗಿನೆಣ್ಣೆ ಬೆರೆಸಿ ಮುಖಕ್ಕೆ ಹಚ್ಚಿ ಸುಮಾರು 15 ನಿಮಿಷಗಳ ಬಿಟ್ಟು ಮುಖ ತೊಳೆಯಬೇಕು. ಹೀಗೆ ಮಾಡಿದರೆ ತ್ವಚೆಯ ಕಾಂತಿ ಹೆಚ್ಚುತ್ತದೆ.
ಮುಲ್ತಾನಿ ಮಿಟ್ಟಿ ಮತ್ತು ಮೊಸರು ಎರಡೂ ಚರ್ಮಕ್ಕೆ ಪ್ರಯೋಜನಕಾರಿ. ಇವೆರಡನ್ನೂ ಬೆರೆಸಿ ಫೇಸ್ ಪ್ಯಾಕ್ ತಯಾರಿಸಿ ಮುಖಕ್ಕೆ ಹಚ್ಚಿ 20 ನಿಮಿಷಗಳ ಕಾಲ ಬಿಟ್ಟರೆ ಮುಖದ ಕಾಂತಿ ಹೆಚ್ಚುತ್ತದೆ.
ಆಪಲ್ ಸೈಡರ್ ವಿನೆಗರ್ ಅನ್ನು ಜೇನುತುಪ್ಪದೊಂದಿಗೆ ಸಮ ಪ್ರಮಾಣದಲ್ಲಿ ಮಿಶ್ರಣ ಮಾಡಿ. ಈ ಫೇಸ್ ಪ್ಯಾಕ್ ಅನ್ನು ಮುಖಕ್ಕೆ ಹಚ್ಚಿ ಮತ್ತು ಸುಮಾರು 15 ರಿಂದ 20 ನಿಮಿಷಗಳ ಕಾಲ ಹಾಗೆಯೇ ಬಿಡಿ. ಇದು ಮುಖವನ್ನು ಕ್ಲೀನ್ ಮತ್ತು ಮಾಯಿಶ್ಚರೈಸ್ ಮಾಡುತ್ತದೆ.
ಒಂದು ಬೌಲ್‌ನಲ್ಲಿ ನಿಂಬೆ ರಸವನ್ನು ಹಿಂಡಿ ಮತ್ತು ಅದಕ್ಕೆ ಒಂದು ಚಮಚ ಅರಿಶಿನವನ್ನು ಬೆರೆಸಿ ಪೇಸ್ಟ್ ತಯಾರಿಸಿಕೊಳ್ಳಿ. ಈಗ ಇದನ್ನು ಮುಖಕ್ಕೆ ಹಚ್ಚಿ ಸುಮಾರು 15 ನಿಮಿಷಗಳ ಕಾಲ ಹಾಗೆಯೇ ಬಿಡಿ. ನಂತರ ಶುದ್ದ ನೀರಿನಿಂದ ಮುಖವನ್ನು ತೊಳೆಯಿರಿ. ಇದು ಮೈಖ ಕಾಂತಿ ಹೆಚ್ಚಿಸಲು ಸಹಾಯ ಮಾಡುತ್ತದೆ.
( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಜ್ಞಾನವನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ಪಡೆಯಬೇಕು. ZEE NEWS ಅದನ್ನು ಖಚಿತಪಡಿಸುವುದಿಲ್ಲ.)