ಚಳಿಗಾಲದಲ್ಲಿ ಶ್ವಾಸಕೋಶವನ್ನು ಆರೋಗ್ಯವಾಗಿಡಲು ನಿತ್ಯ ಸೇವಿಸಿ ಈ ಜ್ಯೂಸ್

ಶ್ವಾಸಕೋಶಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಹೊಂದಿದ್ದರೆ,  ಚಳಿಗಾಲದಲ್ಲಿ ನಿತ್ಯ ಈ ಜ್ಯೂಸ್ ಅನ್ನು ಸೇವಿಸುವಂತೆ ಸೂಚಿಸಲಾಗುತ್ತದೆ.  ಪ್ರತಿ ದಿನ ಈ ಜ್ಯೂಸ್ ಸೇವಿಸುವುದರಿಂದ  ಶ್ವಾಸಕೋಶ ಆರೋಗ್ಯವಾಗಿರುತ್ತದೆ. 
 

How To Detox Your Lungs : ಚಳಿಗಾಲದಲ್ಲಿ, ಶ್ವಾಸಕೋಶಕ್ಕೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚಾಗುತ್ತವೆ. ಈ ಕಾರಣದಿಂದಾಗಿ ಚಳಿಗಾಲದಲ್ಲಿ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಅದರಲ್ಲೂ ಶ್ವಾಸಕೋಶಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಹೊಂದಿದ್ದರೆ,  ಚಳಿಗಾಲದಲ್ಲಿ ನಿತ್ಯ ಈ ಜ್ಯೂಸ್ ಅನ್ನು ಸೇವಿಸುವಂತೆ ಸೂಚಿಸಲಾಗುತ್ತದೆ.  ಪ್ರತಿ ದಿನ ಈ ಜ್ಯೂಸ್ ಸೇವಿಸುವುದರಿಂದ  ಶ್ವಾಸಕೋಶ ಆರೋಗ್ಯವಾಗಿರುತ್ತದೆ. 
 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಹಸಿರು-ಎಲೆ ತರಕಾರಿಗಳ  ಜ್ಯೂಸ್ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಪಾಲಕ್ ಮತ್ತು ಮೆಂತ್ಯೆ ಸೊಪ್ಪನ್ನು ಬಳಸಿಕೊಂಡು ಜ್ಯೂಸ್ ಮಾಡಿದರೆ ಇದು ಶ್ವಾಸಕೋಶವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. 

2 /5

 ಬೀಟ್ ರೂಟ್ ಮತ್ತು ಕ್ಯಾರೆಟ್ ಜ್ಯೂಸ್ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಇದು ಶ್ವಾಸಕೋಶದ ಕಲ್ಮಶವನ್ನು ಹೊರ ಹಾಕಲು ಸಹಾಯ ಮಾಡುತ್ತದೆ.  ಬೀಟ್ ರೂಟ್ ನಲ್ಲಿ ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್‌ನಂತಹ ಅಗತ್ಯವಾದ ಪೋಷಕಾಂಶಗಳು ಅಡಗಿವೆ. ಈ ಕಾರಣದಿಂದಾಗಿ, ಶ್ವಾಸಕೋಶದ ಕಾರ್ಯವನ್ನು ಉತ್ತಮಗೊಳಿಸುತ್ತವೆ. 

3 /5

ಆಪಲ್ ಜ್ಯೂಸ್ ಶ್ವಾಸಕೋಶಕ್ಕೆ ಬಹಳ ಮುಖ್ಯ. ಇದು ಅನೇಕ ಪೋಷಕಾಂಶಗಳಿಂದ ಕೂಡಿದೆ. ಸೇಬು ಹಣ್ಣು ವಿಟಮಿನ್ ಎ, ಆಂಟಿಆಕ್ಸಿಡೆಂಟ್ ಕ್ವೆರ್ಸೆಟಿನ್ ನ ಉತ್ತಮ ಮೂಲವಾಗಿದೆ. ಇದರಿಂದಾಗಿ ಇದು ಶ್ವಾಸಕೋಶಕ್ಕೆ ಉಂಟಾಗುವ ಹಾನಿಯನ್ನು ಕಡಿಮೆ ಮಾಡುತ್ತದೆ 

4 /5

ಕುಂಬಳಕಾಯಿ ರಸವು ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ.  ಇದು ಸೋಂಕುಗಳ ವಿರುದ್ಧ ಹೋರಾಡಲು ಮತ್ತು ಶ್ವಾಸಕೋಶದ ಆರೋಗ್ಯವನ್ನು ಕಾಪಾಡಲು ಸಹಾಯ ಮಾಡುತ್ತದೆ. ಉಸಿರಾಟದ ಸಮಸ್ಯೆಯಿದ್ದರೆ, ಪ್ರತಿದಿನ ಕುಂಬಳಕಾಯಿ ರಸವನ್ನು ಸೇವಿಸಬೇಕು. 

5 /5

ಟೊಮೆಟೊ ಹಣ್ಣು ಕೂಡಾ ಅಪಾರ ಪ್ರಮಾಣದ ಪೋಷಕಾಂಶವನ್ನು  ಹೊಂದಿದೆ. ಇದು ಉರಿಯೂತವನ್ನು ತೆಗೆದುಹಾಕಲು ಮತ್ತು ಉಸಿರಾಟದ ಪ್ರಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಟೊಮೆಟೊ ರಸವನ್ನು ಸೇವಿಸಿದರೆ, ಶ್ವಾಸಕೋಶದ ಹಾನಿಯನ್ನು ಕಡಿಮೆ ಮಾಡಬಹುದು.