Bigg Boss Pavi Poovappa: ಪವಿ ಪೂವಪ್ಪ ದೊಡ್ಡ ಮಟ್ಟದ ಜನಪ್ರಿಯತೆ ಹೊಂದಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ. ಇದೀಗ ಅವರು ಓಪನ್ ಆಗಿ ತಮ್ಮ ಬಾಯ್‌ಫ್ರೆಂಡ್ ಬಗ್ಗೆ ಹೇಳಿಕೊಂಡಿದ್ದಾರೆ.
Bigg Boss Kannada: ‘ಬಿಗ್ ಬಾಸ್ ಕನ್ನಡ ಸೀಸನ್ 10’ ಸಾಕಷ್ಟು ಜನಪ್ರಿಯತೆಯನ್ನು ಗಳಿಸಿತ್ತು. ಫ್ಯಾಷನ್ ಡಿಸೈನರ್ ಪವಿ ಪೂವಪ್ಪ ಅವರು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಬಿಗ್ ಬಾಸ್ ಮನೆಗೆ ಕಾಲಿಟ್ಟು ಸಾಕಷ್ಟು ಗಮನ ಸೆಳೆದಿದ್ದರು. ಇದೀಗ ಅವರ ಬ್ರೇಕಪ್ ವಿಚಾರ ಸಖತ್ ಸೌಂಡ್ ಮಾಡುತ್ತಿದೆ. ಪವಿ ಯಾವ ಕಾರಣಕ್ಕೆ ಬ್ರೇಕಪ್ ಮಾಡಿಕೊಂಡರು ಅನ್ನೋದರ ಬಗ್ಗೆ ತಿಳಿದರೆ ನೀವೂ ಸಹ ಅಚ್ಚರಿ ಪಡುತ್ತೀರಿ. ಇದರ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ...
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.
ಅಂದಹಾಗೆ ಪವಿ ಪೂವಪ್ಪ ದೊಡ್ಡ ಮಟ್ಟದ ಜನಪ್ರಿಯತೆ ಹೊಂದಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ. ಇದೀಗ ಅವರು ಓಪನ್ ಆಗಿ ತಮ್ಮ ಬಾಯ್‌ಫ್ರೆಂಡ್ ಬಗ್ಗೆ ಹೇಳಿಕೊಂಡಿದ್ದಾರೆ. ಬಿಗ್ ಬಾಸ್ ಸಮಯದಲ್ಲಿ ತಮ್ಮ ಪ್ರೀತಿ ಬಗ್ಗೆ ಮಾತನಾಡಿದ್ದ ಪವಿ, ʼನನ್ನ ಬಾಯ್‌ಫ್ರೆಂಡ್ ಐರ್‌ಲ್ಯಾಂಡ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಶೀಘ್ರವೇ ನಾವಿಬ್ಬರು ಮದುವೆಯಾಗುತ್ತಿದ್ದೇವೆʼ ಅಂತಾ ಹೇಳಿದ್ದರು.
ನಮ್ಮಿಬ್ಬರು ನಡುವೆ ಒಳ್ಳೆಯ ಹೊಂದಾಣಿಕೆ ಇತ್ತು. ಬರಬರುತ್ತಾ ನನ್ನ ನಾಯಿ ಬಗ್ಗೆ ಅವರಿಗೆ ಸಮಸ್ಯೆ ಶುರುವಾಯ್ತು. ಮದುವೆಯಾದ ಮೇಲೆ ಮನೆಯಲ್ಲಿ ನಾಯಿಯನ್ನು ಬಿಡುವುದಿಲ್ಲ ಅಂತಾ ಹೇಳಿದರು. ಇದರಿಂದಲೇ ನಮ್ಮಿಬ್ಬರ ನಡುವೆ ಸಮಸ್ಯೆ ಶುರುವಾಯ್ತು. ಸಣ್ಣಪುಟ್ಟ ವಿಚಾರಗಳಿಗೆ ಕಾರಣ ಕೊಡಲು ಶುರು ಮಾಡಿದರು. ಹೀಗಾಗಿ ನಾನು ಬ್ರೇಕಪ್ ತೀರ್ಮಾನಕ್ಕೆ ಬಂದೆ. ಇದರಿಂದ ನಾನೇ ಹಿಂದೆ ಸರಿದರೆ ಒಳ್ಳೆದು ಅನಿಸಿತು ಅಂತಾ ಅವರು ಹೇಳಿಕೊಂಡಿದ್ದಾರೆ.
ಈ ಬಗ್ಗೆ ಸ್ವತಃ ಪವಿ ಪೂವಪ್ಪ ಅವರೇ ಮಾತನಾಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಯೂಟ್ಯೂಬ್ ಚಾನೆಲ್ಗೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿರುವ ಪವಿ ಪೂವಪ್ಪ, ‘ನಾವು ಐದು ವರ್ಷಗಳಿಂದ ಜೊತೆಗಿದ್ದೇವೆ. ನನ್ನ ನಾಯಿಯಿಂದ ಅವರಿಗೆ ತೊಂದರೆ ಆಯ್ತು. ಮದುವೆ ಆದಮೇಲೆ ನಾಯಿ ಸಾಕಲು ಅವರು ಒಪ್ಪಿಕೊಳ್ಳಲಿಲ್ಲ. ಸಣ್ಣ ವಿಚಾರಕ್ಕೂ ಬೇಸರ ಆಗುತ್ತದೆ. ಹೀಗಾಗಿ ನಾನು ಹಿಂದೆ ಸರಿದೆ ಎಂದಿದ್ದಾರೆ.
ಹೌದು, ಡಿಜೆ ಮ್ಯಾಡಿ ಎಂಬುವವರ ಜೊತೆ ಪವಿ ಪೂವಪ್ಪ ಕಳೆದ ಐದು ವರ್ಷಗಳಿಂದ ರಿಲೇಶನ್ಶಿಪ್ನಲ್ಲಿದ್ದರು. ಈ ಜೋಡಿ ಶೀಘ್ರವೇ ಮದುವೆ ಆಗಲಿದೆ ಅಂತಾ ಅನೇಕರು ಅಂದುಕೊಂಡಿದ್ದರಂತೆ. ಆದರೆ ಇದು ಹುಸಿಯಾಗಿದ್ದು, ನಮ್ಮಿಬ್ಬರ ನಡುವೆ ‘ಬ್ರೇಕಪ್ ಆಗಿದೆ’ ಅಂತಾ ಸ್ವತಃ ಪವಿ ಅವರೇ ಹೇಳಿದ್ದಾರೆ.
ವೃತ್ತಿ ಜೀವನದಲ್ಲಿ ಯಶಸ್ಸು ಕಾಣುತ್ತಿರುವ ಪವಿ ಪೂವಪ್ಪರ ವೈಯಕ್ತಿಕ ಜೀವನದಲ್ಲಿ ಏರುಪೇರಾಗಿದೆಯಂತೆ. ಪವಿ ಪೂವಪ್ಪ ತಮ್ಮ ಬಾಯ್‌ಫ್ರೆಂಡ್ ಜೊತೆ ಬ್ರೇಕಪ್ ಮಾಡಿಕೊಂಡಿರುವುದೇ ಇದಕ್ಕೆ ನಿದರ್ಶನವಾಗಿದೆ. ಸುಮಾರು ಐದು ವರ್ಷಗಳ ಕಾಲ ರಿಲೇಷನ್‌ಶಿಪ್‌ನಲ್ಲಿದ್ದ ಜೋಡಿ ಇದೀಗ ಬ್ರೇಕಪ್ ಮಾಡಿಕೊಂಡಿದೆ.
ಸಾಕಿದ ನಾಯಿಗೋಸ್ಕರ ನಾನು ಬ್ರೇಕಪ್ ಮಾಡಿಕೊಂಡಿದ್ದೇನೆ ಅನ್ನೋ ವಿಚಾರವನ್ನ ಪವಿ ಪೂವಪ್ಪ ರಿವೀಲ್ ಮಾಡಿದ್ದಾರೆ. ಇದು ಅನೇಕರಿಗೆ ಅಚ್ಚರಿ ಮೂಡಿಸಿದೆ. ಬಿಗ್ ಬಾಸ್ ಮೂಲಕ ಕನ್ನಡ ಕಿರುತೆರೆ ಪ್ರೇಕ್ಷಕರಿಗೆ ಚಿರಪರಿಚಿತವಾಗಿರುವ ಪವಿ ಪೂವಪ್ಪನವರ ಬ್ರೇಕಪ್ ವಿಚಾರ ಈಗ ಸಾಕಷ್ಟು ಚರ್ಚೆಯಲ್ಲಿದೆ.
ವೃತ್ತಿಯಲ್ಲಿ ಫ್ಯಾಷನ್ ಡಿಸೈನರ್ ಹಾಗೂ ಮಾಡೆಲ್ ಆಗಿರುವ ಪವಿ ಪೂವಪ್ಪ ಅವರು ʼಬಿಗ್ ಬಾಸ್ ಸೀಸನ್ 10ʼರಲ್ಲಿ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಬಿಗ್ ಬಾಸ್ ಮನೆಗೆ ಕಾಲಿಟ್ಟಿದ್ದರು. ಇದೀಗ ಅವರ ಬ್ರೇಕಪ್ ವಿಚಾರ ಈಗ ಸಾಕಷ್ಟು ಚರ್ಚೆಯಲ್ಲಿದೆ. ʼನಾನು ಏಕೆ ಬ್ರೇಕಪ್ ಮಾಡಿಕೊಂಡೆ ಅನ್ನೋ ವಿಚಾರವನ್ನು ಅವರು ತಿಳಿಸಿದ್ದಾರೆ. ಯುಟ್ಯೂಬ್ ಚಾನೆಲ್‌ವೊಂದಕ್ಕೆ ನೀಡಿರುವ ಅವರ ಸಂದರ್ಶನವಿಗ ಸಖತ್ ವೈರಲ್ ಆಗುತ್ತಿದೆ.