ಸಾಕಿದ ನಾಯಿಗೋಸ್ಕರ ಬ್ರೇಕಪ್ ಮಾಡಿಕೊಂಡ ಬಿಗ್ ಬಾಸ್ ಮಾಜಿ ಸ್ಪರ್ಧಿ; 5 ವರ್ಷದ ಸಂಬಂಧಕ್ಕೆ ಎಳ್ಳು ನೀರು!!
ಅಂದಹಾಗೆ ಪವಿ ಪೂವಪ್ಪ ದೊಡ್ಡ ಮಟ್ಟದ ಜನಪ್ರಿಯತೆ ಹೊಂದಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ. ಇದೀಗ ಅವರು ಓಪನ್ ಆಗಿ ತಮ್ಮ ಬಾಯ್‌ಫ್ರೆಂಡ್ ಬಗ್ಗೆ ಹೇಳಿಕೊಂಡಿದ್ದಾರೆ. ಬಿಗ್ ಬಾಸ್ ಸಮಯದಲ್ಲಿ ತಮ್ಮ ಪ್ರೀತಿ ಬಗ್ಗೆ ಮಾತನಾಡಿದ್ದ ಪವಿ, ʼನನ್ನ ಬಾಯ್‌ಫ್ರೆಂಡ್ ಐರ್‌ಲ್ಯಾಂಡ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಶೀಘ್ರವೇ ನಾವಿಬ್ಬರು ಮದುವೆಯಾಗುತ್ತಿದ್ದೇವೆʼ ಅಂತಾ ಹೇಳಿದ್ದರು.
ನಮ್ಮಿಬ್ಬರು ನಡುವೆ ಒಳ್ಳೆಯ ಹೊಂದಾಣಿಕೆ ಇತ್ತು. ಬರಬರುತ್ತಾ ನನ್ನ ನಾಯಿ ಬಗ್ಗೆ ಅವರಿಗೆ ಸಮಸ್ಯೆ ಶುರುವಾಯ್ತು. ಮದುವೆಯಾದ ಮೇಲೆ ಮನೆಯಲ್ಲಿ ನಾಯಿಯನ್ನು ಬಿಡುವುದಿಲ್ಲ ಅಂತಾ ಹೇಳಿದರು. ಇದರಿಂದಲೇ ನಮ್ಮಿಬ್ಬರ ನಡುವೆ ಸಮಸ್ಯೆ ಶುರುವಾಯ್ತು. ಸಣ್ಣಪುಟ್ಟ ವಿಚಾರಗಳಿಗೆ ಕಾರಣ ಕೊಡಲು ಶುರು ಮಾಡಿದರು. ಹೀಗಾಗಿ ನಾನು ಬ್ರೇಕಪ್ ತೀರ್ಮಾನಕ್ಕೆ ಬಂದೆ. ಇದರಿಂದ ನಾನೇ ಹಿಂದೆ ಸರಿದರೆ ಒಳ್ಳೆದು ಅನಿಸಿತು ಅಂತಾ ಅವರು ಹೇಳಿಕೊಂಡಿದ್ದಾರೆ.
ಈ ಬಗ್ಗೆ ಸ್ವತಃ ಪವಿ ಪೂವಪ್ಪ ಅವರೇ ಮಾತನಾಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಯೂಟ್ಯೂಬ್ ಚಾನೆಲ್ಗೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿರುವ ಪವಿ ಪೂವಪ್ಪ, ‘ನಾವು ಐದು ವರ್ಷಗಳಿಂದ ಜೊತೆಗಿದ್ದೇವೆ. ನನ್ನ ನಾಯಿಯಿಂದ ಅವರಿಗೆ ತೊಂದರೆ ಆಯ್ತು. ಮದುವೆ ಆದಮೇಲೆ ನಾಯಿ ಸಾಕಲು ಅವರು ಒಪ್ಪಿಕೊಳ್ಳಲಿಲ್ಲ. ಸಣ್ಣ ವಿಚಾರಕ್ಕೂ ಬೇಸರ ಆಗುತ್ತದೆ. ಹೀಗಾಗಿ ನಾನು ಹಿಂದೆ ಸರಿದೆ ಎಂದಿದ್ದಾರೆ.
ಹೌದು, ಡಿಜೆ ಮ್ಯಾಡಿ ಎಂಬುವವರ ಜೊತೆ ಪವಿ ಪೂವಪ್ಪ ಕಳೆದ ಐದು ವರ್ಷಗಳಿಂದ ರಿಲೇಶನ್ಶಿಪ್ನಲ್ಲಿದ್ದರು. ಈ ಜೋಡಿ ಶೀಘ್ರವೇ ಮದುವೆ ಆಗಲಿದೆ ಅಂತಾ ಅನೇಕರು ಅಂದುಕೊಂಡಿದ್ದರಂತೆ. ಆದರೆ ಇದು ಹುಸಿಯಾಗಿದ್ದು, ನಮ್ಮಿಬ್ಬರ ನಡುವೆ ‘ಬ್ರೇಕಪ್ ಆಗಿದೆ’ ಅಂತಾ ಸ್ವತಃ ಪವಿ ಅವರೇ ಹೇಳಿದ್ದಾರೆ.
ವೃತ್ತಿ ಜೀವನದಲ್ಲಿ ಯಶಸ್ಸು ಕಾಣುತ್ತಿರುವ ಪವಿ ಪೂವಪ್ಪರ ವೈಯಕ್ತಿಕ ಜೀವನದಲ್ಲಿ ಏರುಪೇರಾಗಿದೆಯಂತೆ. ಪವಿ ಪೂವಪ್ಪ ತಮ್ಮ ಬಾಯ್‌ಫ್ರೆಂಡ್ ಜೊತೆ ಬ್ರೇಕಪ್ ಮಾಡಿಕೊಂಡಿರುವುದೇ ಇದಕ್ಕೆ ನಿದರ್ಶನವಾಗಿದೆ. ಸುಮಾರು ಐದು ವರ್ಷಗಳ ಕಾಲ ರಿಲೇಷನ್‌ಶಿಪ್‌ನಲ್ಲಿದ್ದ ಜೋಡಿ ಇದೀಗ ಬ್ರೇಕಪ್ ಮಾಡಿಕೊಂಡಿದೆ.
ಸಾಕಿದ ನಾಯಿಗೋಸ್ಕರ ನಾನು ಬ್ರೇಕಪ್ ಮಾಡಿಕೊಂಡಿದ್ದೇನೆ ಅನ್ನೋ ವಿಚಾರವನ್ನ ಪವಿ ಪೂವಪ್ಪ ರಿವೀಲ್ ಮಾಡಿದ್ದಾರೆ. ಇದು ಅನೇಕರಿಗೆ ಅಚ್ಚರಿ ಮೂಡಿಸಿದೆ. ಬಿಗ್ ಬಾಸ್ ಮೂಲಕ ಕನ್ನಡ ಕಿರುತೆರೆ ಪ್ರೇಕ್ಷಕರಿಗೆ ಚಿರಪರಿಚಿತವಾಗಿರುವ ಪವಿ ಪೂವಪ್ಪನವರ ಬ್ರೇಕಪ್ ವಿಚಾರ ಈಗ ಸಾಕಷ್ಟು ಚರ್ಚೆಯಲ್ಲಿದೆ.
ವೃತ್ತಿಯಲ್ಲಿ ಫ್ಯಾಷನ್ ಡಿಸೈನರ್ ಹಾಗೂ ಮಾಡೆಲ್ ಆಗಿರುವ ಪವಿ ಪೂವಪ್ಪ ಅವರು ʼಬಿಗ್ ಬಾಸ್ ಸೀಸನ್ 10ʼರಲ್ಲಿ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಬಿಗ್ ಬಾಸ್ ಮನೆಗೆ ಕಾಲಿಟ್ಟಿದ್ದರು. ಇದೀಗ ಅವರ ಬ್ರೇಕಪ್ ವಿಚಾರ ಈಗ ಸಾಕಷ್ಟು ಚರ್ಚೆಯಲ್ಲಿದೆ. ʼನಾನು ಏಕೆ ಬ್ರೇಕಪ್ ಮಾಡಿಕೊಂಡೆ ಅನ್ನೋ ವಿಚಾರವನ್ನು ಅವರು ತಿಳಿಸಿದ್ದಾರೆ. ಯುಟ್ಯೂಬ್ ಚಾನೆಲ್‌ವೊಂದಕ್ಕೆ ನೀಡಿರುವ ಅವರ ಸಂದರ್ಶನವಿಗ ಸಖತ್ ವೈರಲ್ ಆಗುತ್ತಿದೆ.