ಕರ್ನಾಟಕ ಮೂಲದ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟರ್ ಆತ್ಮಹತ್ಯೆ! ಖಿನ್ನತೆಗೆ ತುತ್ತಾಗಿದ್ದ ವೇಗಿಯ ದುರಂತ ಅಂತ್ಯ
ಟೀಂ ಇಂಡಿಯಾದ ಮಾಜಿ ಆಟಗಾರ ಕರ್ನಾಟಕ ಮೂಲಕ ಡೇವಿಡ್ ಜಾನ್ಸನ್(52) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಖಿನ್ನತೆಗೆ ಒಳಗಾಗಿದ್ದ ಡೇವಿಡ್ ಜಾನ್ಸನ್, ಕೊತ್ತನೂರು ಬಳಿ ಇರುವ ಅಪಾರ್ಟ್ಮೆಂಟ್’ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅರಸಿಕೆರೆ ಮೂಲದ ಡೇವಿಡ್ ಜಾನ್ಸನ್ 1996ರಲ್ಲಿ ಭಾರತ ಪರ 2 ಟೆಸ್ಟ್ ಪಂದ್ಯಗಳನ್ನು ಆಡಿದ್ದರು. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಅದಾಗಿದ್ದು, ಬ್ಯಾಟಿಂಗ್ ಆಲ್ರೌಂಡರ್ ಆಗಿದ್ದ ಡೇವಿಡ್, 8 ರನ್ ಮತ್ತು 3 ವಿಕೆಟ್ ಕಬಳಿಸಿದ್ದರು.
ಇನ್ನೊಂದು ಟೆಸ್ಟ್ ಪಂದ್ಯ ದಕ್ಷಿಣ ಆಫ್ರಿಕಾ ವಿರುದ್ಧ ನಡೆದಿದ್ದು, ಅದು ಡೇವಿಡ್ ಪಾಲಿಗೆ ಟೀಂ ಇಂಡಿಯಾ ಪರ ಕೊನೆಯ ಪಂದ್ಯವಾಗಿತ್ತು. ಅದಾದ ಬಳಿಕ ಅವರಿಗೆ ಅವಕಾಶ ಸಿಕ್ಕಿರರಿಲ್ಲ.
ಇನ್ನು ವಿಪರೀತ ಕುಡಿತದ ಚಟ ಹೊಂದಿದ್ದ ಡೇವಿಡ್ ಜಾನ್ಸನ್, ಕೆಲ ವರ್ಷಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಇದಲ್ಲದೆ ಖಿನ್ನತೆಗೆ ಕೂಡ ಜಾರಿದ್ದರು. ಆದರೆ ಇದೀಗ ಆತ್ಮಹತ್ಯೆಗೆ ಶರಣಾಗಿದ್ದಾರೆ.
90ರ ಕಾಲಘಟ್ಟದಲ್ಲಿ ಅತಿವೇಗದ ಬೌಲಿಂಗ್ ಮಾಡುತ್ತಿದ್ದ ಡೇವಿಡ್, ಆಸೀಸ್ ವಿರುದ್ಧದ ಪಂದ್ಯದಲ್ಲಿ ಗಂಟೆಗೆ 157.8 ಕಿಲೋ ಮೀಟರ್ ವೇಗದಲ್ಲಿ ಬೌಲಿಂಗ್ ಮಾಡಿದ್ದರು. ಅಷ್ಟೇ ಅಲ್ಲದೆ ಆಸ್ಟ್ರೇಲಿಯಾದ ಮೈಕಲ್ ಸ್ಲೇಟರ್ ವಿಕೆಟ್ ಪಡೆದಿದ್ದರು.