ಚೆನ್ನೈ ಆಸ್ಪತ್ರೆಯಲ್ಲಿ ಕರುಣಾನಿಧಿ ಆರೋಗ್ಯ ವಿಚಾರಿಸಿದ ಮಾಜಿ ಪ್ರಧಾನಿ ದೇವೇಗೌಡ

  

  • Aug 03, 2018, 19:48 PM IST
1 /4

ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿರುವ ಡಿಎಂಕೆ ಮುಖ್ಯಸ್ಥ ಹಾಗೂ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿಯವರನ್ನು ಮಾಜಿ ಪ್ರಧಾನಿ ಹಾಗು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. 

2 /4

ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಎಂ.ಕರುಣಾನಿಧಿ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರವೇಶ ನಿರ್ಬಂಧಿಸಲಾಗಿದ್ದ ಹಿನ್ನೆಲೆಯಲ್ಲಿ ಕರುಣಾನಿಧಿ ಪುತ್ರ ಸ್ಟಾಲಿನ್‌ ಮತ್ತು ಪುತ್ರಿ ಕನಿಮೋಳಿ ಅವರೊಂದಿಗೆ ಮಾತುಕತೆ ನಡೆಸಿ ಕರುಣಾನಿಧಿ ಆರೋಗ್ಯ ಕುರಿತು ಮಾಹಿತಿ ಪಡೆದರು.

3 /4

ರಕ್ತದೊತ್ತಡ, ಜ್ವರ, ಮೂತ್ರಕೋಶ ಸೋಂಕಿನಿಂದ ಬಳಲುತ್ತಿರುವ ಡಿಎಂಕೆ ಅಧ್ಯಕ್ಷ ಎಂ.ಕರುಣಾನಿಧಿ (94) ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಳೆದ ಶನಿವಾರ ಚೆನ್ನೈನಲ್ಲಿರುವ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತಷ್ಟು ದಿನಗಳ ಚಿಕಿತ್ಸೆ ಅಗತ್ಯವಿರುವ ಹಿನ್ನೆಲೆಯಲ್ಲಿ ಕರುಣಾನಿಧಿ ಅವರು ಇನ್ನಷ್ಟು ದಿನ ಆಸ್ಪತ್ರೆಯಲ್ಲಿಯೇ ಇರಬೇಕೆಂದು ಕಾವೇರಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. 

4 /4

ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಅನೇಕ ಗಣ್ಯರು ಕರುಣಾನಿಧಿ ಅವರ ಆರೋಗ್ಯ ವಿಚಾರಿಸಿದ್ದು, ಶೀಘ್ರ ಗುಣಮುಖರಾಗಲೆಂದು ಹಾರೈಸಿದ್ದಾರೆ.