ಪಂಜಾಬ್‌ನಲ್ಲಿ, ಕಾಂಗ್ರೆಸ್‌ನ ಸಿಎಂ ಅಭ್ಯರ್ಥಿ ಚರಣ್‌ಜಿತ್ ಸಿಂಗ್ ಚನ್ನಿ ಕೂಡ ಗುರುದ್ವಾರದಲ್ಲಿ ಪೂಜೆ ಸಲ್ಲಿಸುವ ಮೂಲಕ ದಿನವನ್ನು ಪ್ರಾರಂಭಿಸಿದರು.
ನವದೆಹಲಿ : ಪಂಜಾಬ್ ನಲ್ಲಿ ಈ ಬಾರಿ ಭಗವಂತ್ ಮಾನ್ ಮುಖ್ಯಮಂತ್ರಿ ಪಟ್ಟವನ್ನು ಏರಲಿದ್ದಾರೆ. ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷ ಭಾರೀ ಬಹುಮತದಿಂದ ಗೆಲ್ಲಲಿದೆ. ಅದೇ ಸಮಯದಲ್ಲಿ, ಭಗವಂತ್ ಮಾನ್ ಅವರ ಧುರಿ ವಿಧಾನಸಭಾ ಸ್ಥಾನವನ್ನೂ ಗೆದ್ದಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
ಫಲಿತಾಂಶದ ದಿನ, ಬೆಳಿಗ್ಗೆ, ಭಗವಂತ್ ಮಾನ್ ಗುರುದ್ವಾರವನ್ನು ತಲುಪಿ ಪ್ರಾರ್ಥನೆ ಸಲ್ಲಿಸಿದರು. ಪಂಜಾಬ್‌ನಲ್ಲಿ, ಕಾಂಗ್ರೆಸ್‌ನ ಸಿಎಂ ಅಭ್ಯರ್ಥಿ ಚರಣ್‌ಜಿತ್ ಸಿಂಗ್ ಚನ್ನಿ ಕೂಡ ಗುರುದ್ವಾರದಲ್ಲಿ ಪೂಜೆ ಸಲ್ಲಿಸುವ ಮೂಲಕ ದಿನವನ್ನು ಪ್ರಾರಂಭಿಸಿದರು.
ಈ ಬಾರಿ ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷ ಸರ್ಕಾರ ರಚಿಸಬಹುದು ಎಂದು ಎಲ್ಲಾ ಎಕ್ಸಿಟ್ ಪೋಲ್‌ಗಳಲ್ಲಿ ಹೇಳಲಾಗಿತ್ತು. ಅದೆ ವೇಳೆ ಈಗ ಫಲಿತಾಂಶ ಬರುತ್ತಿದ್ದು, ಭಗವಂತ್ ಮಾನ್ ಮುಖ್ಯಮಂತ್ರಿ ಗದ್ದುಗೆ ಏರಲಿದ್ದಾರೆ. ರಾಜ್ಯದಲ್ಲಿ ಮಟ ಎಣಿಕೆ ಆರಂಭವಾದಾಗಿನಿಂದಲೂ ಆಪ್ ಮುನ್ನಡೆ ಕಾಯ್ದುಕೊಂಡಿತ್ತು.
ಭಗವಂತ್ ಮಾನ್ ಪ್ರಸ್ತುತ ಆಮ್ ಆದ್ಮಿ ಪಕ್ಷದ ಸಂಸದರಾಗಿದ್ದಾರೆ. ಅವರು ಎರಡನೇ ಬಾರಿಗೆ ಲೋಕಸಭೆ ಪ್ರವೇಶಿಸಿದ್ದಾರೆ. ಧುರಿ ವಿಧಾನಸಭಾ ಕ್ಷೇತ್ರ ಕೂಡಾ ಇದೆ ಲೋಕಸಭೆ ವ್ಯಾಪ್ತಿಯಲ್ಲಿ ಬರುತ್ತದೆ.
ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಪಂಜಾಬ್‌ನ ಧುರಿ ವಿಧಾನಸಭೆಯಿಂದ 38000 ಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ.
ಭಗವಂತ್ ಮಾನ್ ಭಾರತದ ಪಂಜಾಬ್‌ನ ಸಂಗ್ರೂರ್ ಜಿಲ್ಲೆಯ ಸತೋಜ್ ಗ್ರಾಮದಲ್ಲಿ 17 ಅಕ್ಟೋಬರ್ 1973 ರಂದು ಜನಿಸಿದರು. ಅವರು ಪಂಜಾಬ್‌ನ ಸಂಗ್ರೂರ್‌ನಲ್ಲಿರುವ ಎಸ್‌ಯುಎಸ್ ಕಾಲೇಜಿನಲ್ಲಿ ಬಿಕಾಂ ಪದವಿಯನ್ನು ಪಡೆದಿದ್ದಾರೆ.
ಅಪ್ ಸಂಪೂರ್ಣ ಬಹುಮತ ಪಡೆಯುವುದನ್ನು ಕಂಡು ಪಕ್ಷದ ನಾಯಕರು ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಭಗವಂತ್ ಮಾನ್ ಅವರೊಂದಿಗಿನ ಫೋಟೋವನ್ನು ಹಂಚಿಕೊಂಡಿದ್ದಾರೆ,
ಭಗವಂತ್ ಮಾನ್ ಕಾಮಿಡಿ ಶೋ ನಿಂದ ರಾಜಕೀಯದವರೆಗೆ ಎಲ್ಲಾ ಕಡೆ ತಮ್ಮ ಛಾಪು ಮೂಡಿಸಿದ್ದಾರೆ. ತಮ್ಮ ಮಗ ಕತ್ತಲೆಯಲ್ಲಿ ಬೆಳಕಿನ ಕಿರಣವನ್ನು ತೋರಿಸುವ ಮಿಂಚುಹುಳು ಎನ್ನುತ್ತಾರೆ ಕುಟುಂಬ ಸದಸ್ಯರು. ಭಗವಂತ್ ಮಾನ್ ಅವರು ಇಂದರ್‌ಪ್ರೀತ್ ಕೌರ್ ಅವರನ್ನು ವಿವಾಹವಾಗಿದ್ದರು. ಆದರೆ 2015 ರಲ್ಲಿ ಇಬ್ಬರೂ ಬೇರ್ಪಟ್ಟಿದ್ದಾರೆ. ಇಬ್ಬರಿಗೂ ಇಬ್ಬರು ಮಕ್ಕಳಿದ್ದಾರೆ.
ಭಗವಂತ್ ಮಾನ್ ಅವರ ರಾಜಕೀಯ ಜೀವನದ ಬಗ್ಗೆ ಮಾತನಾಡುವುದಾದರೆ ಮಾನ್ ಮೊದಲಿನಿಂದಲೂ ಆಮ್ ಆದ್ಮಿ ಪಕ್ಷದ (ಎಎಪಿ) ಭಾಗವಾಗಿರಲಿಲ್ಲ. ಅವರು ತಮ್ಮ ರಾಜಕೀಯ ಇನ್ನಿಂಗ್ಸ್ ಅನ್ನು ಮನ್‌ಪ್ರೀತ್ ಸಿಂಗ್ ಬಾದಲ್ ಅವರ ಪಕ್ಷವಾದ ಪಂಜಾಬ್ ಪೀಪಲ್ಸ್ ಪಾರ್ಟಿಯೊಂದಿಗೆ ಪ್ರಾರಂಭಿಸಿದರು. 2014 ರಲ್ಲಿ, ಭಗವಂತ್ ಮಾನ್ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡರು ಮತ್ತು ಆಮ್ ಆದ್ಮಿ ಪಕ್ಷದ ಟಿಕೆಟ್‌ನಲ್ಲಿ ಸಂಗ್ರೂರ್ ಲೋಕಸಭಾ ಕ್ಷೇತ್ರದಿಂದ ಚುನಾವಣಾ ಕಣಕ್ಕೆ ಧುಮುಕಿ, 2 ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ.