ತ್ರಿಗ್ರಾಹಿ ಯೋಗದಿಂದ ಮುಂದಿನ 15 ದಿನಗಳವರೆಗೆ ಐದು ರಾಶಿಯವರ ಅದೃಷ್ಟ ಬೆಳಗಲಿದ್ದಾರೆ ಸೂರ್ಯ,ಶುಕ್ರ, ಬುಧ
ಮೇಷ: ಸೂರ್ಯನ ಸಂಚಾರವು ಮೇಷ ರಾಶಿಯವರಿಗೆ ಅದೃಷ್ಟವನ್ನು ಮತ್ತಷ್ಟು ಬೆಳಗುತ್ತದೆ. ಅವರು ದೊಡ್ಡ ಮಟ್ಟದ ಸಾಧನೆಗಳನ್ನು ಸಾಧಿಸಬಹುದು. ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ಹೋಗುವ ಕನಸು ನನಸಾಗಬಹುದು. ಧರ್ಮದ ಕಡೆಗೆ ಒಲವು ಹೆಚ್ಚಾಗುತ್ತದೆ.
ವೃಷಭ: ಸೂರ್ಯನ ಸಂಚಾರದಿಂದ ರೂಪುಗೊಂಡ ತ್ರಿಗ್ರಾಹಿ ಯೋಗವು ಎಲ್ಲಾ ರೀತಿಯಲ್ಲೂ ಲಾಭವನ್ನು ನೀಡುತ್ತದೆ. ವೃತ್ತಿಯಲ್ಲಿ ಬಡ್ತಿಯಾಗಿ ವೇತನದಲ್ಲಿ ಹೆಚ್ಚಳವಾಗಬಹುದು. ನೀವಾಡುವ ಮಾತಿನಿಂದಲೇ ನಿಮಗೆ ಲಾಭವಾಗುವ ಸಾಧ್ಯತೆ ಇದೆ. ಆದಾಯ ಹೆಚ್ಚಲಿದೆ.
ತುಲಾ: ಸೂರ್ಯನ ಸಂಚಾರವು ತುಲಾ ರಾಶಿಯವರಿಗೆ ಆತ್ಮವಿಶ್ವಾಸ ಮತ್ತು ಧೈರ್ಯವನ್ನು ನೀಡುತ್ತದೆ. ನಿಮ್ಮ ಪ್ರಭಾವ ಹೆಚ್ಚಾಗಲಿದೆ. ವೃತ್ತಿಯಲ್ಲಿ ಲಾಭವಾಗಲಿದೆ. ಹೊಸ ಸಂಪರ್ಕಗಳನ್ನು ಸಾಧಿಸುವುದು ಸಾಧ್ಯವಾಗುತ್ತದೆ. ನಿಮ್ಮ ಕಾರ್ಯಗಳು ಎಲ್ಲರ ಮೆಚ್ಚುಗೆಗೆ ಪಾತ್ರವಾಗುತ್ತವೆ.
ಧನು ರಾಶಿ : ಸೂರ್ಯ ಧನು ರಾಶಿ ಪ್ರವೇಶಿಸುತ್ತಿರುವುದರಿಂದ ಧನು ರಾಶಿಯಲ್ಲಿಯೇ ತ್ರಿಗ್ರಾಹಿ ಯೋಗ ರೂಪುಗೊಳ್ಳುತ್ತಿದೆ. ಧನು ರಾಶಿಯವರು ಇದರಿಂದ ಗರಿಷ್ಠ ಲಾಭವನ್ನು ಪಡೆಯುತ್ತಾರೆ. ಈ ರಾಶಿಯವರ ಸ್ಥಾನಮಾನ, ಹಣ ಮತ್ತು ಪ್ರತಿಷ್ಠೆ ಹೆಚ್ಚಾಗುತ್ತದೆ.
ಮೀನ: ಮೀನ ರಾಶಿಯವರಿಗೆ ಸೂರ್ಯನ ಸಂಚಾರದಿಂದ ಹೆಚ್ಚಿನ ಲಾಭವಾಗಲಿದೆ. ತಾವು ಅಂದುಕೊಂಡ ಕೆಲಸವನ್ನು ಸಾಧಿಸುವುದು ಸುಲಭವಾಗಲಿದೆ. ವೃತ್ತಿಪರ ಜೀವನದಲ್ಲಿ ಉತ್ತಮ ಲಾಭವಿದೆ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯಲಿದೆ.
( ಸೂಚನೆ : ಇಲ್ಲಿ ನೀಡಲಾದ ಲೇಖನವು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.