ಇಂದಿನಿಂದ ಬದಲಾಗುವುದು ಈ ಐದು ರಾಶಿಯವರ ಅದೃಷ್ಟ! ಆಗುವುದು ಧನವೃಷ್ಠಿ
ಮಿಥುನ ರಾಶಿ : ಮಿಥುನ ರಾಶಿಯವರಿಗೆ ಬುಧ ಸಂಕ್ರಮಣ ಬಹಳ ಶುಭವಾಗಿರಲಿದೆ. ಈ ರಾಶಿಯವರ ಆರ್ಥಿಕ ಸ್ಥಿತಿ ಉತ್ತಮವಾಗಲಿದೆ. ಆದಾಯ ಹೆಚ್ಚಲಿದೆ. ಬಹಳ ದಿನಗಳಿಂದ ಮನದಲ್ಲಿ ಅಡಗಿರುವ ಆಸೆ ಈಡೇರಬಹುದು. ಕಠಿಣ ಪರಿಶ್ರಮದ ಸಂಪೂರ್ಣ ಫಲವನ್ನು ಪಡೆಯುವುದು ಈ ಸಮಯದಲ್ಲಿ ಸಾಧ್ಯವಾಗುತ್ತದೆ.
ಕರ್ಕಾಟಕ ರಾಶಿ : ಬುಧಗ್ರಹದ ಬದಲಾವಣೆಯಿಂದ ರೂಪುಗೊಂಡ ರಾಹು-ಬುಧ ಸಂಯೋಗವು ಕರ್ಕಾಟಕ ರಾಶಿಯವರಿಗೆ ಬಹಳಷ್ಟು ಲಾಭ ನೀಡುತ್ತದೆ. ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಸಿಗಲಿವೆ. ಹೊಸ ವ್ಯವಹಾರವನ್ನು ಪ್ರಾರಂಭಿಸಬಹುದು. ಸಂಬಂಧಗಳು ಉತ್ತಮವಾಗಿರುತ್ತವೆ.
ಸಿಂಹ ರಾಶಿ : ಬುಧ ಗ್ರಹದ ರಾಶಿ ಪರಿವರ್ತನೆಯು ಸಿಂಹ ರಾಶಿಯವರಿಗೆ ಅದೃಷ್ಟದ ಸಂಪೂರ್ಣ ಬೆಂಬಲ ನೀಡಲಿದೆ. ನೀವು ಮಾಡುವ ಕೆಲಸದಲ್ಲಿ ಯಶಸ್ಸು ಸಿಗಲಿದೆ. ನಿಮ್ಮ ಮನಸ್ಸಿನ ಇಚ್ಛೆ ಈಡೇರುವುದು. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಲಿದೆ. ಪ್ರವಾಸಕ್ಕೆ ಹೋಗಬಹುದು. ವೃತ್ತಿಯಲ್ಲಿ ಉನ್ನತಿ ಕಂಡುಬರಲಿದೆ.
ಧನು ರಾಶಿ : ಬುಧ ಸಂಕ್ರಮಣವು ಧನು ರಾಶಿಯವರಿಗೆ ಅನೇಕ ರೀತಿಯಲ್ಲಿ ಲಾಭವನ್ನು ನೀಡುತ್ತದೆ. ವಿದ್ಯಾರ್ಥಿಗಳು ವಿಶೇಷ ಯಶಸ್ಸನ್ನು ಪಡೆಯಬಹುದು. ವೃತ್ತಿ ಜೀವನದಲ್ಲಿ ಹೊಸ ಅವಕಾಶಗಳು ಒದಗಿ ಬರಲಿವೆ. ಪ್ರೇಮ ಜೀವನ ಚೆನ್ನಾಗಿರುತ್ತದೆ. ಸಂಗಾತಿಯೊಂದಿಗಿನ ಸಂಬಂಧ ಉತ್ತಮವಾಗಿರುತ್ತದೆ. ಮದುವೆಯಾಗಲು ಬಯಸುವವರಿಗೆ ಇದು ಒಳ್ಳೆಯ ಸಮಯ.
ಕುಂಭ ರಾಶಿ : ಮಾಧ್ಯಮ ಉದ್ಯಮಕ್ಕೆ ಸಂಬಂಧಿಸಿದ ಜನರು ಹೊಸ ಅವಕಾಶಗಳನ್ನು ಪಡೆಯಬಹುದು. ಪ್ರವಾಸಕ್ಕೆ ತೆರಳುವ ಸಾಧ್ಯತೆ ಇದೆ. ಬಡ್ತಿ ಸಿಗಬಹುದು. ಆದಾಯ ಹೆಚ್ಚಾಗಲಿದೆ.
( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)