ತೂಕ ಇಳಿಕೆಯಿಂದ ಚರ್ಮದ ಆರೈಕೆವರೆಗೆ ಸೌತೆಕಾಯಿಯಿಂದ ಸಿಗುತ್ತೆ ಹಲವು ಪ್ರಯೋಜನ

ನಿಯಮಿತವಾಗಿ ಸೌತೆಕಾಯಿ ಸೇವಿಸುವುದರಿಂದ ಆರೋಗ್ಯಕರವಾಗಿ ತೂಕ ಕಡಿಮೆ ಮಾಡಬಹುದು. ಮಾತ್ರವಲ್ಲ ಇದು ಚರ್ಮಕ್ಕೂ ಪ್ರಯೋಜನಕಾರಿ ಎಂದು ನಿಮಗೆ ತಿಳಿದಿದೆಯೇ? 

Health benefits of cucumber: ಬೇಸಿಗೆಯಲ್ಲಿ ಸೌತೆಕಾಯಿಯನ್ನು ಹೆಚ್ಚಾಗಿ ಬಳಸಲಾಗುತ್ತದೆ. ವಿಟಮಿನ್ ಎ, ಸಿ, ಕೆ, ಪೊಟ್ಯಾಸಿಯಮ್, ಲುಟೀನ್, ಫೈಬರ್ ಮುಂತಾದ ಅನೇಕ ಪೋಷಕಾಂಶಗಳು ಸೌತೆಕಾಯಿಯಲ್ಲಿ ಹೆಚ್ಚಾಗಿ ಕಂಡು ಬರುತ್ತವೆ. ನಿಯಮಿತವಾಗಿ ಸೌತೆಕಾಯಿ ಸೇವಿಸುವುದರಿಂದ ಆರೋಗ್ಯಕರವಾಗಿ ತೂಕ ಕಡಿಮೆ ಮಾಡಬಹುದು. ಮಾತ್ರವಲ್ಲ ಇದು ಚರ್ಮಕ್ಕೂ ಪ್ರಯೋಜನಕಾರಿ ಎಂದು ನಿಮಗೆ ತಿಳಿದಿದೆಯೇ? 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಮೂಳೆಗಳು ಬಲಗೊಳ್ಳುತ್ತವೆ : ಸೌತೆಕಾಯಿ ತಿನ್ನುವುದರಿಂದ ಮೂಳೆಗಳು ಬಲಗೊಳ್ಳುತ್ತವೆ. ಇದರಲ್ಲಿ ವಿಟಮಿನ್-ಕೆ ಅತಿ ಹೆಚ್ಚಾಗಿ ಕಂಡು ಬರುತ್ತದೆ. ಇದು ಮೂಳೆಯ ಸಾಂದ್ರತೆಯನ್ನು ಹೆಚ್ಚಿಸುತ್ತದೆ ಮತ್ತು ಮೂಳೆಗಳನ್ನು ಬಲಪಡಿಸುತ್ತದೆ.  

2 /5

ಚರ್ಮದ ಆರೈಕೆಗೆ ಒಳ್ಳೆಯದು: ಸೌತೆಕಾಯಿ ಚರ್ಮ ಮತ್ತು ನಮ್ಮ ಕೂದಲಿಗೆ ತುಂಬಾ ಒಳ್ಳೆಯದು. ಸೌತೆಕಾಯಿಯ ನಿಯಮಿತ ಸೇವನೆಯು ಕೂದಲಿನ ಬೆಳವಣಿಗೆಯನ್ನು ಸುಧಾರಿಸುತ್ತದೆ. ಅಲ್ಲದೆ,  ಮುಖದ ಕಾಂತಿಯೂ ಹೆಚ್ಚಿಸುತ್ತದೆ. ನಿತ್ಯ ಸೌತೆಕಾಯಿ ಜ್ಯೂಸ್ ಕುಡಿಯುವುದರಿಂದ ತ್ವಚೆಯ ಮೇಲಇನ ಕಲೆಗಳು ಮಾಯವಾಗುತ್ತದೆ ಎಂದು ಹೇಳಲಾಗುತ್ತದೆ.

3 /5

ಮಲಬದ್ಧತೆ ಸಮಸ್ಯೆಗೆ ಪರಿಹಾರ: ಮಲಬದ್ಧತೆ ಸಮಸ್ಯೆ ಇರುವವರು ನಿತ್ಯವೂ ಸೌತೆಕಾಯಿಯನ್ನು ಸೇವಿಸಿದರೆ ಮಲಬದ್ಧತೆಯಿಂದ ಮುಕ್ತಿ ಪಡೆಯಬಹುದು. ಇದರೊಂದಿಗೆ, ಇದು ಗ್ಯಾಸ್ ಮತ್ತು ಅಜೀರ್ಣ ಸಮಸ್ಯೆಗಳಿಂದ ಪರಿಹಾರವನ್ನು ನೀಡುತ್ತದೆ. 

4 /5

ತೂಕ ಇಳಿಕೆ: ಸೌತೆಕಾಯಿಯನ್ನು ತಿಂದರೆ ತೂಕ ಕಡಿಮೆಯಾಗುತ್ತದೆ. ಏಕೆಂದರೆ ಸೌತೆಕಾಯಿಯಲ್ಲಿ ಕ್ಯಾಲೋರಿಗಳು ತುಂಬಾ ಕಡಿಮೆ. ಇದರಲ್ಲಿ ನಾರಿನಂಶವೂ ಅಧಿಕವಾಗಿದೆ. ಸೌತೆಕಾಯಿ ಸೇವನೆಯಿಂದ ಹೊಟ್ಟೆ ತುಂಬಿದ ಅನುಭವವಾಗುವುದರಿಂದ ಅನಾವಶ್ಯಕವಾಗಿ ಬೇರೆ ಏನನ್ನಾದರೂ ತಿನ್ನಬೇಕು ಎಂದೆನಿಸುವುದಿಲ್ಲ. 

5 /5

ರಕ್ತದೊತ್ತಡವನ್ನು ನಿಯಂತ್ರಿಸಬಹುದು: ಸೌತೆಕಾಯಿಯನ್ನು ತಿನ್ನುವುದರಿಂದ ರಕ್ತದೊತ್ತಡವನ್ನು ನಿಯಂತ್ರಿಸಬಹುದು. ಇದರಲ್ಲಿ ಪೊಟ್ಯಾಶಿಯಂ ಅಧಿಕವಾಗಿದೆ. ಇದು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಸೂಚನೆ:  ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ಖಂಡಿತವಾಗಿಯೂ ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.