ಚಳಿಗಾಲದಲ್ಲಿಯೇ ಸಿಗುವ ಈ ಹಣ್ಣನ್ನು ಸೇವಿಸಿದರೆ ಚುರುಕಾಗುವುದು ದೃಷ್ಟಿ!ವರ್ಷಾನುಗಟ್ಟಲೆಯಿಂದ ಧರಿಸುತ್ತಿದ್ದ ಕನ್ನಡಕ್ಕಕ್ಕೂ ಹೇಳಬಹುದು ಗುಡ್ ಬೈ

Sat, 19 Oct 2024-1:06 pm,

ಕೆಲವು ಆಹಾರಗಳನ್ನು ಸೇವಿಸುವ ಮೂಲಕವೂ ಕಣ್ಣುಗಳ ದೃಷ್ಟಿಯನ್ನು ಚುರುಕುಗೊಳಿಸುವುದು ಸಾಧ್ಯವಾಗುತ್ತದೆ. ಸಿಟ್ರಸ್ ಹಣ್ಣುಗಳು ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತವೆ. ಇದು ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.  

ಕಿತ್ತಳೆ, ದ್ರಾಕ್ಷಿ, ನಿಂಬೆ ಹಣ್ಣುಗಳನ್ನು ಸೇವಿಸುವ ಮೂಲಕ ದೃಷ್ಟಿಯನ್ನು ಹೆಚ್ಚಿಸಿಕೊಳ್ಳಬಹುದು. ಈ ಹಣ್ಣುಗಳಲ್ಲಿ ವಿಟಮಿನ್ ಸಿ, ಆ್ಯಂಟಿಆಕ್ಸಿಡೆಂಟ್ ಗಳು  ಸಮೃದ್ಧವಾಗಿದೆ. ಇದು ಕಣ್ಣಿನ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ.

ಇನ್ನು ನೆಲ್ಲಿಕಾಯಿ ಕೂಡಾ ಕಣ್ಣಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ವಿಟಮಿನ್ ಎ, ಸಿ, ಮತ್ತು ಇ, ಲುಟೀನ್ ಮತ್ತು ಜಿಯಾಕ್ಸಾಂಥಿನ್‌ನಂತಹ ಪೋಷಕಾಂಶಗಳನ್ನು ಹೊಂದಿರುತ್ತವೆ.ಇದು ಕಣ್ಣಿನ ದೃಷ್ಟಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ.    

ಪಾಲಕ್ ಸೊಪ್ಪು ಮತ್ತು ಮೆಂತ್ಯೆ ಸೇವನೆ ಕೂಡಾ ಕಣ್ಣಿನ ದೃಷ್ಟಿಯನ್ನು ಹೆಚ್ಚಿಸುತ್ತದೆ.  ಪಾಲಕ್ ಮತ್ತು ಮೆಂತ್ಯೆ ಸೊಪ್ಪಿನಲ್ಲಿ ವಿಟಮಿನ್ ಎ ಮತ್ತು ಲುಟೀನ್ ಸಮೃದ್ಧವಾಗಿದೆ.ಹಾಗಾಗಿ ಈ ಸೊಪ್ಪು ತಿನ್ನುವ ಮೂಲಕ ದೃಷ್ಟಿಯನ್ನು ಸುಧಾರಿಸಬಹುದು.

ಮೀನಿನಲ್ಲಿರುವ  ಒಮೆಗಾ -3 ಕೊಬ್ಬಿನಾಮ್ಲಗಳು, ವಿಟಮಿನ್ ಎ ಮತ್ತು ಸತುವುಗಳಂತಹ ಪೋಷಕಾಂಶಗಳು ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಇದು ಕಣ್ಣಿನ ಊತವನ್ನು ಕಡಿಮೆ ಮಾಡುತ್ತದೆ ಮತ್ತು ದೃಷ್ಟಿ ಸುಧಾರಿಸುತ್ತದೆ.

ಮೊಟ್ಟೆಯಲ್ಲಿ ಕೂಡಾ ವಿಟಮಿನ್ ಎ ಮತ್ತು ಸತು ಹೆಚ್ಚಿನ ಪ್ರಮಾಣದಲ್ಲಿ ಇರುತ್ತದೆ. ಇದು ಕಣ್ಣಿನ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ.ಇದು ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಮತ್ತು ದೃಷ್ಟಿ ಸುಧಾರಿಸಲು ಸಹಾಯ ಮಾಡುತ್ತದೆ.  

ಸೂಚನೆ :ಮೇಲಿನ ಲೇಖನ ಸಾಮಾನ್ಯ ಮಾಹಿತಿ ಮತ್ತು ಧಾರ್ಮಿಕ ನಂಬಿಕೆಯನ್ನು ಆಧರಿಸಿದೆ. ಜೀ ನ್ಯೂಸ್ ಕನ್ನಡ ಇದನ್ನು ಅನುಮೋದಿಸುವುದಿಲ್ಲ. 

ZEENEWS TRENDING STORIES

By continuing to use the site, you agree to the use of cookies. You can find out more by Tapping this link