ಈ ಕೆಂಪು ಹಣ್ಣು ಸೇವಿಸಿದರೆ ಸಾಕು ಬ್ಲಡ್ ಶುಗರ್ ಅನ್ನು ಶಾಶ್ವತವಾಗಿ ನಾರ್ಮಲ್ ಆಗುವುದು ! ದಿನಕ್ಕೊಂದು ತಿಂದು ನೋಡಿ !
ಪೋಷಕಾಂಶಗಳಲ್ಲಿ ಸಮೃದ್ಧವಾಗಿರುವ ಸೇಬು ಹಣ್ಣಿನಲ್ಲಿ ಫೈಬರ್ ಮತ್ತು ವಿಟಮಿನ್ ಸಿ ಅಡಗಿರುತ್ತದೆ. ಇದರಲ್ಲಿರುವ ಪೆಕ್ಟಿನ್, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಮತ್ತು ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸುತ್ತದೆ.
ಟೊಮ್ಯಾಟೋ ಲೈಕೋಪೀನ್ ಮತ್ತು ವಿಟಮಿನ್ ಸಿ ಅನ್ನು ಹೊಂದಿರುತ್ತದೆ. ಇದು ಸಕ್ಕರೆ ಮಟ್ಟವನ್ನು ಸ್ಥಿರವಾಗಿಡಲು ಸಹಾಯ ಮಾಡುತ್ತದೆ. ಮಧುಮೇಹ ರೋಗಿಗಳು ಇದನ್ನು ಸೇವಿಸುವುದರಿಂದ ಹೆಚ್ಚು ಲಾಭವಾಗುತ್ತದೆ.
ದಾಳಿಂಬೆಯು ಉತ್ಕರ್ಷಣ ನಿರೋಧಕಗಳು ಮತ್ತು ಪಾಲಿಫಿನಾಲ್ಗ್ ಗಳನ್ನು ಹೊಂದಿರುತ್ತದೆ. ಇದು ದೇಹದಲ್ಲಿ ಸಕ್ಕರೆಯ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸುತ್ತದೆ.
ಕೆಂಪು ಕ್ಯಾಪ್ಸಿಕಂ ಕಡಿಮೆ ಕ್ಯಾಲೋರಿಗಳನ್ನು ಹೊಂದಿದ್ದು, ಮಿನ್ ಎ, ಸಿ ಮತ್ತು ಬಿ 6 ಅನ್ನು ಹೊಂದಿರುತ್ತದೆ.ಇದು ಚಯಾಪಚಯವನ್ನು ಸುಧಾರಿಸಲು ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರವಾಗಿಡಲು ಸಹಾಯ ಮಾಡುತ್ತದೆ.
ಪ್ಲಮ್ ಕರಗುವ ಫೈಬರ್ ಅನ್ನು ಹೊಂದಿರುತ್ತದೆ. ಇದು ಸಕ್ಕರೆಯ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಸೂಚನೆ : ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ.