5 ದಿನದಲ್ಲಿ ತೂಕ ಇಳಿಸಿ ಸ್ಲಿಮ್ ಆಗುವಂತೆ ಮಾಡುತ್ತೆ ತುಪ್ಪ! ಮಲಗುವ ಮುನ್ನ ಇದರಲ್ಲಿ ಬೆರೆಸಿ ಕುಡಿಯಿರಿ ಸಾಕು

Mon, 24 Jun 2024-4:35 pm,

ದೇಸಿ ತುಪ್ಪವನ್ನು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ದೇಸಿ ತುಪ್ಪದಿಂದ ಹಲವು ಬಗೆಯ ತಿನಿಸುಗಳನ್ನು ತಯಾರಿಸುತ್ತಾರೆ. ಆದರೆ ತುಪ್ಪವನ್ನು ಸೇವಿಸುವ ಮೂಲಕ ತೂಕವನ್ನು ಕಡಿಮೆ ಮಾಡಬಹುದು ಎಂದು ನಿಮಗೆ ತಿಳಿದಿದೆಯೇ?

ಹೌದು, ಆಹಾರದಲ್ಲಿ ತುಪ್ಪವನ್ನು ಸರಿಯಾದ ಪ್ರಮಾಣದಲ್ಲಿ ಸೇರಿಸಿದರೆ, ಅದು ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಅನೇಕ ಆರೋಗ್ಯ ತಜ್ಞರು ಹೇಳುತ್ತಾರೆ.

ತುಪ್ಪವನ್ನು ಸೀಮಿತ ಪ್ರಮಾಣದಲ್ಲಿ ಮಾತ್ರ ಸೇವಿಸಬೇಕು. ಇಲ್ಲದಿದ್ದರೆ ಅದು ಪ್ರಯೋಜನಕ್ಕೆ ಬದಲಾಗಿ ಹಾನಿಯನ್ನು ಉಂಟುಮಾಡಬಹುದು. ಆದ್ದರಿಂದ, ತೂಕವನ್ನು ಕಡಿಮೆ ಮಾಡಲು ತುಪ್ಪವನ್ನು ಎಷ್ಟು ಪ್ರಮಾಣದಲ್ಲಿ ಸೇವಿಸಬಹುದು ಎಂಬುದನ್ನು ತಿಳಿಯೋಣ.

ಅಡುಗೆಯಲ್ಲಿ ಸಂಸ್ಕರಿಸಿದ ಎಣ್ಣೆಯನ್ನು ಬಳಸುವುದಕ್ಕಿಂತ ತುಪ್ಪವನ್ನು ಬಳಸಬಹುದು. ತುಪ್ಪವನ್ನು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ.

ಇನ್ನು ತೂಕ ಇಳಿಸಲು ಮಾತ್ರವಲ್ಲ, ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳಿದ್ದರೆ ತುಪ್ಪವನ್ನು ಹಾಲಿಗೆ ಸೇರಿಸಿ ಸೇವಿಸಬಹುದು. ಇದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು. ಜೊತೆಗೆ ಕೊಬ್ಬು ಕರಗಲು ಸಹ ಇದು ಸಹಕಾರಿ.

ಕೇಳಲು ಸ್ವಲ್ಪ ವಿಚಿತ್ರ ಅನ್ನಿಸಬಹುದು. ಆದರೆ, ತೂಕ ಕಡಿಮೆ ಮಾಡಲು ಬಯಸಿದರೆ ಕಾಫಿಗೆ ತುಪ್ಪ ಸೇರಿಸಿ ಕುಡಿಯಬಹುದು. ಇದು ಹಸಿವನ್ನು ತ್ವರಿತವಾಗಿ ಕಡಿಮೆ ಮಾಡುವುದಲ್ಲದೆ ತೂಕ ನಿಯಂತ್ರಿಸಲು ಸಹಾಯ ಮಾಡುತ್ತದೆ.

ತೂಕ ಕಡಿಮೆ ಮಾಡಲು ತುಪ್ಪ ಬೆರೆಸಿದ ಉಗುರುಬೆಚ್ಚಗಿನ ನೀರನ್ನು ಕುಡಿಯಬಹುದು. ಇದರಿಂದ ದೇಹದ ಕೊಬ್ಬನ್ನು ಕರಗಿಸಲು ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಆದರೆ ರಾತ್ರಿ ವೇಳೆ ಕುಡಿದರೆ ರಿಸಲ್ಟ್ ಕೊಂಚ ಶೀಘ್ರವಾಗಿಯೇ ಇರುತ್ತದೆ.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಅರ್ಹ ವೈದ್ಯಕೀಯ ಅಭಿಪ್ರಾಯಕ್ಕೆ ಯಾವುದೇ ರೀತಿಯಲ್ಲಿ ಪರ್ಯಾಯವಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞ ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸಿ. ಈ ಮಾಹಿತಿಯ ಹೊಣೆಯನ್ನು Zee Kannada News ಖಚಿತಪಡಿಸಿಕೊಳ್ಳುವುದಿಲ್ಲ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link