ಗ್ಯಾಸ್ಟ್ರಿಕ್ ಸಮಸ್ಯೆಗೆ ಶುಂಠಿಯಲ್ಲಿದೆ ಪರಿಹಾರ
ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ಯೋಗ ಮತ್ತು ಧ್ಯಾನ ಮಾಡಬೇಕು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.
ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತಿರುವವರು ಹೆಚ್ಚು ಮಸಾಲೆಯುಕ್ತ ಪದಾರ್ಥಗಳು, ಫಾಸ್ಟ್ ಫುಡ್, ಎಣ್ಣೆಯಲ್ಲಿ ಕರಿದ ಪದಾರ್ಥಗಳನ್ನು ತಿನ್ನುವುದನ್ನು ತಪ್ಪಿಸಿ.
ಶುಂಠಿ ಪುಡಿ ಮತ್ತು ಬೆಲ್ಲವನ್ನು ಬೆರೆಸಿ ಪ್ರತಿದಿನ ಬೆಳಿಗ್ಗೆ ಇದನ್ನು ಸೇವಿಸಿ. ಬಳಿಕ ತಕ್ಷಣ ಒಂದು ಲೋಟ ಬಿಸಿ ನೀರು ಕುಡಿಯಿರಿ. ಇದರಿಂದ ಗ್ಯಾಸ್ಟ್ರಿಕ್ ಸಮಸ್ಯೆ ಕಡಿಮೆಯಾಗುವುದು.
ಒಂದು ಬಟ್ಟಲಿನಲ್ಲಿ ಒಂದು ಲೋಟ ನೀರನ್ನು ತೆಗೆದುಕೊಂಡು ಅದನ್ನು ಬಿಸಿ ಮಾಡಿ. ನೀರು ಸ್ವಲ್ಪ ಬಿಸಿಯಾದ ನಂತರ ಅರ್ಧ ಚಮಚ ಧನಿಯಾ ಪುಡಿ ಮತ್ತು ಒಂದು ಚಮಚ ಕೊತ್ತಂಬರಿ ಸೊಪ್ಪನ್ನು ಹಾಕಿ ಕುದಿಸಿ. ಈ ನೀರನ್ನು ಪ್ರತಿದಿನ ಸೇವಿಸಿ.
ಒಂದು ಪಾತ್ರೆಯಲ್ಲಿ ಒಂದು ಲೋಟ ನೀರು ತೆಗೆದುಕೊಂಡು ಬಿಸಿ ಮಾಡಿ. ನೀರು ಬಿಸಿಯಾದ ನಂತರ ಒಂದು ತುಂಡು ಶುಂಠಿಯನ್ನು ಹಾಕಬೇಕು. ಒಂದು ಚಮಚ ಬೆಲ್ಲವನ್ನು ಸೇರಿಸಿ ಮಿಶ್ರಣ ಮಾಡಿ. ಉಗುರು ಬೆಚ್ಚಗಾದ ನಂತರ ಈ ನೀರನ್ನು ಕುಡಿಯಬೇಕು.