Gold and Silver Rate: ಕಳೆದ ಮೂರ್ನಾಲ್ಕು ದಿನಗಳಿಂದ ಏರಿಕೆಯತ್ತ ಸಾಗಿದ್ದ ಬಂಗಾರದ ಬೆಲೆಯಲ್ಲಿ ಇಂದು ಭಾರೀ ಇಳಿಕೆ ಕಂಡು ಬಂದಿದೆ.. ಹಾಗಾದರೆ 10 ಗ್ರಾಂ ಚಿನ್ನದ ದರ ಎಷ್ಟಿದೆ ಎನ್ನುವುದನ್ನು ಇಲ್ಲಿ ತಿಳಿಯಿರಿ..
ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಪ್ರತಿದಿನ ಏರಿಳಿತ ಕಂಡುಬರುತ್ತಿದೆ. ಹಾಗೂ ಕಳೆದ ಕೆಲ ದಿನಗಳಿಂದ ಭಾರೀ ಕುಸಿತ ಕಂಡಿದ್ದ ಚಿನ್ನ ಬೆಳ್ಳಿ ಬೆಲೆ ಕಳೆದ ಮೂರು ದಿನಗಳಿಂದ ಏರಿಕೆ ಕಾಣುತ್ತಿದ್ದು ಗ್ರಾಹಕರನ್ನು ಬೆಚ್ಚಿ ಬೀಳಿಸುತ್ತಿದೆ. ಇದೀಗ ಶನಿವಾರ ದೇಶದಲ್ಲಿ ದಾಖಲಾದ ಚಿನ್ನ ಮತ್ತು ಬೆಳ್ಳಿ ಬೆಲೆಗಳನ್ನು ನೋಡೋಣ.
ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಳಿತವಾಗುತ್ತಿದೆ. ಹಾಗೂ ಕಳೆದ ಕೆಲ ದಿನಗಳಿಂದ ಭಾರೀ ಕುಸಿತ ಕಂಡಿದ್ದ ಚಿನ್ನದ ಬೆಲೆ ಕಳೆದೆರಡು ದಿನಗಳಿಂದ ಏರಿಕೆಯಾಗುತ್ತಿದ್ದು ಬೆಚ್ಚಿ ಬೀಳುವಂತಾಗಿದೆ.
ನಿನ್ನೆ ಅಂದರೆ ಶುಕ್ರವಾರ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ ರೂ. 71,260 ಆಗಿದ್ದರೆ, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ರೂ. 77,740. ಹಾಗೂ ಇಂದು ಶನಿವಾರ 10 ಗ್ರಾಂ 22ಕ್ಯಾರೆಟ್ ಚಿನ್ನದ ಬೆಲೆ ರೂ. 71,510 ಆಗಿದ್ದರೆ, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ರೂ. 78,010 ದಾಖಲಾಗಿದೆ.
ಹೈದರಾಬಾದ್ನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 71,510 ರೂ. ವಿಶಾಖಪಟ್ಟಣ ಮತ್ತು ವಿಜಯವಾಡದಲ್ಲೂ ಇದೇ ಬೆಲೆ ಮುಂದುವರಿದಿದೆ. ಮತ್ತು ದೇಶದ ರಾಜಧಾನಿ ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 71660 ರೂ., 24 ಕ್ಯಾರೆಟ್ ಚಿನ್ನದ ಬೆಲೆ ರೂ. 78,160. ಆಗಿದೆ..
ಇನ್ನು ಬೆಳ್ಳಿ ಬೆಲೆಯ ವಿಚಾರಕ್ಕೆ ಬಂದರೆ.. ಹೈದರಾಬಾದ್, ವಿಶಾಖಪಟ್ಟಣಂ ಮತ್ತು ವಿಜಯವಾಡದಲ್ಲಿ ಒಂದು ಕಿಲೋ ಬೆಳ್ಳಿ ರೂ. 99,900 ಆಗಿದ್ದರೆ, ಮುಂಬೈ, ದೆಹಲಿ, ಕೋಲ್ಕತ್ತಾ ಮತ್ತು ಬೆಂಗಳೂರಿನಲ್ಲಿ ಪ್ರತಿ ಕೆಜಿ ಬೆಳ್ಳಿ ಬೆಲೆ ರೂ. 92,400 ದಾಖಲಾಗಿದೆ. ಇತ್ತೀಚಿನ ಚಿನ್ನದ ಬೆಲೆಗಳನ್ನು ತಿಳಿಯಲು ನೀವು 8955664433 ಗೆ ಮಿಸ್ಡ್ ಕಾಲ್ ನೀಡಬಹುದು.