ಸರ್ಕಾರಿ ನೌಕರರಿಗೆ ಡಬಲ್ ಗುಡ್ ನ್ಯೂಸ್ !ಬೋನಸ್ ಜೊತೆಗೆ 18 ತಿಂಗಳ ಬಾಕಿ ಡಿಎ ಬಗ್ಗೆ ದೀಪಾವಳಿಗೂ ಮುನ್ನವೇ ಮಹತ್ವದ ನಿರ್ಧಾರ
ಕೇಂದ್ರ ಸರ್ಕಾರಿ ನೌಕರರು ತುಟ್ಟಿಭತ್ಯೆ ಹೆಚ್ಚಳದ ಘೋಷಣೆಗಾಗಿ ಬಹಳ ದಿನಗಳಿಂದ ಕಾಯುತ್ತಿದ್ದಾರೆ.ಇನ್ನೇನು ಕೆಲವೇ ದಿನಗಳಲ್ ಈ ಘೋಷಣೆ ಹೊರ ಬೀಳಲಿದೆ.
ಜನವರಿ-ಜುಲೈ AICPI ಸೂಚ್ಯಂಕ ಸಂಖ್ಯೆಗಳ ಆಧಾರದ ಮೇಲೆ, ಜುಲೈ 2024 ರ ಹಣದುಬ್ಬರವು 3%-4% ರಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಈ ಅಧಿಸೂಚನೆ ಯಾವಾಗ ಬೇಕಾದರೂ ಹೊರ ಬೀಳಬಹುದು.
ಈಗಾಗಲೇ 2023-24ನೇ ಸಾಲಿಗೆ ವಿಶೇಷ ದೀಪಾವಳಿ ಬೋನಸ್ ಘೋಷಿಸಲಾಗಿದೆ. ಈ ಬೋನಸ್ ಗ್ರೂಪ್ ಸಿ ಉದ್ಯೋಗಿಗಳಿಗೆ ಮತ್ತು ಗೆಜೆಟೆಡ್ ಅಲ್ಲದ ಗುಂಪು ಬಿ ಉದ್ಯೋಗಿಗಳಿಗೆ ನೀಡಲಾಗುತ್ತದೆ.
ಈ ಮಧ್ಯೆ, ಮತ್ತೊಂದು ಪ್ರಮುಖ ಸುದ್ದಿ ಹೊರ ಬಿದ್ದಿದೆ. ಮೂಲಗಳ ಪ್ರಕಾರ, ಕರೋನಾ ಸಾಂಕ್ರಾಮಿಕ ಸಮಯದಲ್ಲಿ ಸ್ಥಗಿತಗೊಂಡಿದ್ದ 18 ತಿಂಗಳ ಡಿಎ ಬಾಕಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡುವ ಸಾಧ್ಯತೆಯಿದೆ. ದೀಪಾವಳಿಗೆ ಮುನ್ನವೇ ಈ ನಿರ್ಧಾರ ಹೊರ ಬೀಳಲಿದೆ ಎನ್ನಲಾಗಿದೆ.
ದೀಪಾವಳಿಗೆ ಮುನ್ನ ನಡೆಯುವ ಸಂಪುಟ ಸಭೆಯಲ್ಲಿ ತುಟ್ಟಿಭತ್ಯೆ ಹೆಚ್ಚಳ, ಮತ್ತು 18 ತಿಂಗಳ ಬಾಕಿ ಡಿಎ ಬಗ್ಗೆ ಸರ್ಕಾರ ನಿರ್ಧರ ತೆಗೆದುಕೊಳ್ಳಲಿದೆ ಎನ್ನಲಾಗುತ್ತಿದೆ.
ಏರುತ್ತಿರುವ ಬೆಲೆಗಳು ಮತ್ತು ಹಣದುಬ್ಬರವನ್ನು ನಿಯಂತ್ರಿಸಲು ನೌಕರರು ಮತ್ತು ಪಿಂಚಣಿದಾರರಿಗೆ ಪರಿಹಾರವಾಗಿ ತುಟ್ಟಿಭತ್ಯೆ ನೀಡಲಾಗುತ್ತದೆ.ಇದನ್ನು ವರ್ಷಕ್ಕೆ ಎರಡು ಬಾರಿ ಅಂದರೆ ಜನವರಿ ಮತ್ತು ಜುಲೈನಲ್ಲಿ ಪರಿಷ್ಕರಿಸಲಾಗುತ್ತದೆ.
ಸೂಚನೆ :ಈ ಪೋಸ್ಟ್ ಅನ್ನು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಬರೆಯಲಾಗಿದೆ. ಇದರಿಂದ ರಿಯಾಯಿತಿ ಹೆಚ್ಚಳದ ಗ್ಯಾರಂಟಿ ನೀಡಲಾಗುವುದಿಲ್ಲ.ಇತ್ತೀಚಿನ ಮತ್ತು ನಿಖರವಾದ ಮಾಹಿತಿಗಾಗಿ ಅಧಿಕೃತ ಸರ್ಕಾರಿ ವೆಬ್‌ಸೈಟ್‌ಗಳನ್ನು ಪರಿಶೀಲಿಸಲು ಶಿಫಾರಸು ಮಾಡಲಾಗಿದೆ.