ಮಹಿಳೆಯರಿಗೆ ಗುಡ್ ನ್ಯೂಸ್: ಗೃಹಲಕ್ಷ್ಮಿ ಪೆಂಡಿಂಗ್ ಹಣ ಜಮಾ, ಈಗಲೇ ಖಾತೆ ಪರಿಶೀಲಿಸಿ

Gruhalakshmi Scheme: ಮಹಿಳೆಯರು ಸ್ವಾವಲಂಬಿಯಾಗಿ ಬದುಕಬೇಕು, ಪುರುಷರನ್ನು ಅವಲಂಬಿಸಬಾರದೆಂದು ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದೆ.

Gruhalakshmi Yojana: ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿರುವವರ ರೇಷನ್ ಕಾರ್ಡ್, ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆಗಳು ಸರಿಯಿದ್ದರೆ ಮಾತ್ರ ಖಾತೆಗೆ ಹಣ ಬರುತ್ತದೆ.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /8

ಗ್ರಾಮೀಣ ಭಾಗದ ಆರ್ಥಿಕತೆಗೆ ಚೇತರಿಕೆ ನೀಡಿರುವ, ಮಹಿಳೆಯರು ಸ್ವಾವಲಂಬಿಯಾಗಿ ಬದುಕುವಂತೆ ಪ್ರೇರೇಪಿಸುತ್ತಿರುವ ರಾಜ್ಯ ಸರ್ಕಾರದ ಮಹತ್ವದ ಗೃಹಲಕ್ಷ್ಮಿ ಯೋಜನೆಯ 14 ಮತ್ತು 15ನೇ ಕಂತಿನ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಿರುವ ಬಿಗ್ ಅಪ್ಡೇಟ್ ಸಿಕ್ಕಿದೆ.

2 /8

ರಾಜ್ಯದಲ್ಲಿ ಅಪಾರ ಜನಮನ್ನಣೆ ಗಳಿಸಿರುವ ಗೃಹಲಕ್ಷ್ಮಿ ಯೋಜನೆಯಿಂದ ಪ್ರತಿ ತಿಂಗಳು ನೇರ ಲಾಭ ವರ್ಗಾವಣೆ (ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್ ಫರ್) ವ್ಯವಸ್ಥೆ ಮೂಲಕ ಪ್ರತಿ ತಿಂಗಳು ಫಲಾನುಭವಿಗಳ ಖಾತೆಗೆ ತಲಾ 2,000 ರೂಪಾಯಿ ಹಣ ಹಾಕಲಾಗುತ್ತಿದೆ. 

3 /8

ಕಳೆದ ವರ್ಷ ಶುರುವಾಗಿರುವ ಗೃಹಲಕ್ಷ್ಮಿ ಯೋಜನೆಯಡಿ ಈವರೆಗೆ ಒಟ್ಟು 15 ಕಂತುಗಳಲ್ಲಿ 30,000 ಸಾವಿರ ಹಣ ಹಾಕಲಾಗಿದೆ. ಈಗ ಡಿಸಂಬರ್ ತಿಂಗಳ  16ನೇ ಕಂತಿನ ಹಣ 26.65 ಲಕ್ಷ ರೂಪಾಯಿಗಳನ್ನು ಅರ್ಹ ಫಲಾನುಭವಿಗಳ ಖಾತೆಗೆ ಜಮಾವಣೆ ಮಾಡಲಾಗಿದೆ.  

4 /8

ಮೊದಲ ಹಂತದಲ್ಲಿ ಬೆಳಗಾವಿ, ಕಲ್ಬುರ್ಗಿ, ಬೀದರ್, ವಿಜಯಪುರ, ಬಳ್ಳಾರಿ, ಗದಗ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಹಣ ಬಿಡುಗಡೆಯಾಗಿದೆ. ಇದೇ ಜನವರಿ 12ನೇ ತಾರೀಖಿನಂದು ಬೇರೆ ಜಿಲ್ಲೆಗಳಲ್ಲಿ 16ನೇ ಕಂತಿನ ಹಣ ಬಿಡುಗಡೆ ಮಾಡುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

5 /8

ಈಗಾಗಲೇ ಹಾವೇರಿ ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಬಿಡುಗಡೆಯಾಗಿದ್ದು ಮುಂದಿನ ದಿನಗಳಲ್ಲಿ ಇತರೆ ಜಿಲ್ಲೆಗಳ ಫಲಾನುಭವಿಗಳ ಖಾತೆಗೂ ಹಣ ವರ್ಗವಾಗಲಿದೆ. 

6 /8

ನಿಮ್ಮ ಖಾತೆಗೆ ಹಣ ಬಂದಿದೆಯೋ ಇಲ್ಲವೋ ಎಂದು ಬ್ಯಾಂಕಿಗೆ ಹೋಗಿ ಪರಿಶೀಲಿಸಿಕೊಳ್ಳಿ. ಅಥವಾ ನಿಮ್ಮ ಮೊಬೈಲಿಗೆ DBT Karnataka ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ಚೆಕ್ ಮಾಡಿ.

7 /8

ತಾಂತ್ರಿಕ ದೋಷದಿಂದ ಹಣ ಬಿಡುಗಡೆ ತಡವಾಗಿತ್ತು. ಮುಂದೆ ಯಾರೂ ಆತಂಕಗೊಳ್ಳುವ ಅಗತ್ಯ ಇಲ್ಲ, ಸರಿಯಾದ ಸಮಯಕ್ಕೆ ಹಣ ಬಿಡುಗಡೆಯಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

8 /8

ರಾಜ್ಯದಲ್ಲಿ ಒಟ್ಟು 1.18 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಎಲ್ಲರಿಗೂ ಪ್ರತಿತಿಂಗಳು ತಲಾ 2.000 ರೂಪಾಯಿ ಹಣ ಜಮೆಯಾಗುತ್ತಿದೆ.