ಮಹಿಳೆಯರಿಗೆ ಗುಡ್ ನ್ಯೂಸ್: ಗೃಹಲಕ್ಷ್ಮಿ ಪೆಂಡಿಂಗ್ ಹಣ ಜಮಾ, ಈಗಲೇ ಖಾತೆ ಪರಿಶೀಲಿಸಿ
ಗ್ರಾಮೀಣ ಭಾಗದ ಆರ್ಥಿಕತೆಗೆ ಚೇತರಿಕೆ ನೀಡಿರುವ, ಮಹಿಳೆಯರು ಸ್ವಾವಲಂಬಿಯಾಗಿ ಬದುಕುವಂತೆ ಪ್ರೇರೇಪಿಸುತ್ತಿರುವ ರಾಜ್ಯ ಸರ್ಕಾರದ ಮಹತ್ವದ ಗೃಹಲಕ್ಷ್ಮಿ ಯೋಜನೆಯ 14 ಮತ್ತು 15ನೇ ಕಂತಿನ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಿರುವ ಬಿಗ್ ಅಪ್ಡೇಟ್ ಸಿಕ್ಕಿದೆ.
ರಾಜ್ಯದಲ್ಲಿ ಅಪಾರ ಜನಮನ್ನಣೆ ಗಳಿಸಿರುವ ಗೃಹಲಕ್ಷ್ಮಿ ಯೋಜನೆಯಿಂದ ಪ್ರತಿ ತಿಂಗಳು ನೇರ ಲಾಭ ವರ್ಗಾವಣೆ (ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್ ಫರ್) ವ್ಯವಸ್ಥೆ ಮೂಲಕ ಪ್ರತಿ ತಿಂಗಳು ಫಲಾನುಭವಿಗಳ ಖಾತೆಗೆ ತಲಾ 2,000 ರೂಪಾಯಿ ಹಣ ಹಾಕಲಾಗುತ್ತಿದೆ.
ಕಳೆದ ವರ್ಷ ಶುರುವಾಗಿರುವ ಗೃಹಲಕ್ಷ್ಮಿ ಯೋಜನೆಯಡಿ ಈವರೆಗೆ ಒಟ್ಟು 15 ಕಂತುಗಳಲ್ಲಿ 30,000 ಸಾವಿರ ಹಣ ಹಾಕಲಾಗಿದೆ. ಈಗ ಡಿಸಂಬರ್ ತಿಂಗಳ 16ನೇ ಕಂತಿನ ಹಣ 26.65 ಲಕ್ಷ ರೂಪಾಯಿಗಳನ್ನು ಅರ್ಹ ಫಲಾನುಭವಿಗಳ ಖಾತೆಗೆ ಜಮಾವಣೆ ಮಾಡಲಾಗಿದೆ.
ಮೊದಲ ಹಂತದಲ್ಲಿ ಬೆಳಗಾವಿ, ಕಲ್ಬುರ್ಗಿ, ಬೀದರ್, ವಿಜಯಪುರ, ಬಳ್ಳಾರಿ, ಗದಗ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಹಣ ಬಿಡುಗಡೆಯಾಗಿದೆ. ಇದೇ ಜನವರಿ 12ನೇ ತಾರೀಖಿನಂದು ಬೇರೆ ಜಿಲ್ಲೆಗಳಲ್ಲಿ 16ನೇ ಕಂತಿನ ಹಣ ಬಿಡುಗಡೆ ಮಾಡುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.
ಈಗಾಗಲೇ ಹಾವೇರಿ ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಬಿಡುಗಡೆಯಾಗಿದ್ದು ಮುಂದಿನ ದಿನಗಳಲ್ಲಿ ಇತರೆ ಜಿಲ್ಲೆಗಳ ಫಲಾನುಭವಿಗಳ ಖಾತೆಗೂ ಹಣ ವರ್ಗವಾಗಲಿದೆ.
ನಿಮ್ಮ ಖಾತೆಗೆ ಹಣ ಬಂದಿದೆಯೋ ಇಲ್ಲವೋ ಎಂದು ಬ್ಯಾಂಕಿಗೆ ಹೋಗಿ ಪರಿಶೀಲಿಸಿಕೊಳ್ಳಿ. ಅಥವಾ ನಿಮ್ಮ ಮೊಬೈಲಿಗೆ DBT Karnataka ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ಚೆಕ್ ಮಾಡಿ.
ತಾಂತ್ರಿಕ ದೋಷದಿಂದ ಹಣ ಬಿಡುಗಡೆ ತಡವಾಗಿತ್ತು. ಮುಂದೆ ಯಾರೂ ಆತಂಕಗೊಳ್ಳುವ ಅಗತ್ಯ ಇಲ್ಲ, ಸರಿಯಾದ ಸಮಯಕ್ಕೆ ಹಣ ಬಿಡುಗಡೆಯಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಒಟ್ಟು 1.18 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಎಲ್ಲರಿಗೂ ಪ್ರತಿತಿಂಗಳು ತಲಾ 2.000 ರೂಪಾಯಿ ಹಣ ಜಮೆಯಾಗುತ್ತಿದೆ.