Gruha Lakshmi: ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ: ಈ ದಿನ ಖಾತೆ ಸೇರಲಿದೆ ಗೃಹಲಕ್ಷ್ಮಿ ಹಣ
ಗೃಹಲಕ್ಷ್ಮಿ ಹಣಕ್ಕಾಗಿ ಕಾಯುತ್ತಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿರುವ ಸರ್ಕಾರ ಶೀಘ್ರದಲ್ಲೇ ಖಾತೆಗೆ ಹಣ ಸೇರಲಿದೆ ಎಂದು ಮಾಹಿತಿ ನೀಡಿದೆ.
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯೂ ಒಂದು. ಈ ಯೋಜನೆಯಲ್ಲಿ ಅರ್ಹ ಮಹಿಳೆಯರಿಗೆ ತಿಂಗಳಿಗೆ ರೂ. 2000 ವನ್ನು ಅವರ ಖಾತೆ ಜಮಾ ಮಾಡಲಾಗುತ್ತದೆ.
ಆದರೆ, ತಾಂತ್ರಿಕ ಸಮಸ್ಯೆಗಳಿಂದಾಗಿ ಕಳೆದ ಎರಡು ತಿಂಗಳಿನಿಂದ 'ಗೃಹ ಲಕ್ಷ್ಮಿ' ಯೋಜನೆಯ ಹಣವೇ ಬಂದಿರಲಿಲ್ಲ.
ಇದೀಗ ವರಮಹಾಲಕ್ಷ್ಮಿ ಹಬ್ಬಕ್ಕೆ ನಾರಿಯರಿಗೆ ಸಿಹಿ ಸುದ್ದಿಯೊಂದು ನೀಡಿರುವ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಯ ಜೂನ್ ತಿಂಗಳ ಹಣ ಬಿಡುಗಡೆ ಪ್ರಕ್ರಿಯೆಯ ಬಗ್ಗೆ ಮಾಹಿತಿ ನೀಡಿದೆ.
ತಾಂತ್ರಿಕ ಸಮಸ್ಯೆ ಸರಿಪಡಿಸಿದ ಬೆನ್ನಲ್ಲೇ ಗೃಹ ಲಕ್ಷ್ಮಿ ಹಣ ಜಮಾ ಮಾಡಲು ಸರ್ಕಾರ ಮುಂದಾಗಿದ್ದು ಒಂದೆರಡು ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ನಿಮ್ಮ ಖಾತೆ ಸೇರಲಿದೆ
ಗೃಹ ಲಕ್ಷ್ಮಿ ಯೋಜನೆಯಲ್ಲಿ 26.65 ಲಕ್ಷ ಅರ್ಹ ಫಲಾನುಭವಿಗಳಿಗೆ ಜೂನ್ ತಿಂಗಳ ಹಣ ಖಾತೆಗೆ ಸೇರಲಿದೆ ಎಂದು ಮಾಹಿತಿ ಲಭ್ಯವಾಗಿದೆ.
ತಾಂತ್ರಿಕ ಕಾರಣದಿಂದ ಎರಡು ತಿಂಗಳ 'ಗೃಹ ಲಕ್ಷ್ಮಿ' ಯೋಜನೆ ಹಣ ಜಮೆ ಆಗಿರಲಿಲ್ಲ. ಇವತ್ತಿನಿಂದ (ಆಗಸ್ಟ್ 06) ಜೂನ್, ಜುಲೈ ತಿಂಗಳ ಹಣ ಖಾತೆಗೆ ಜಮೆ ಆಗಲಿದೆ ಎಂದು ಮಂಡ್ಯದ ಜನಾಂದೋಲನ ಸಮಾವೇಶದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ ಮಾಡಿದ್ದಾರೆ.