ಈ ಬಾರಿ ಕೇಂದ್ರ ಸರ್ಕಾರಿ ನೌಕರರು ಕಳೆದ 7 ವರ್ಷಗಳಲ್ಲಿ ಅತ್ಯಂತ ಕಡಿಮೆ ಡಿಎ ಹೆಚ್ಚಳವನ್ನು ಪಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳುತ್ತಿವೆ.
ಬೆಂಗಳೂರು : ಲಕ್ಷಾಂತರ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ತುಟ್ಟಿ ಭತ್ಯೆ ಹೆಚ್ಚಳದ ಘೋಷಣೆಗಾಗಿ ಕಾಯುತ್ತಿದ್ದಾರೆ. ತುಟ್ಟಿ ಭತ್ಯೆ (ಡಿಎ) ಮತ್ತು ತುಟ್ಟಿ ಪರಿಹಾರ (ಡಿಆರ್) ಹೆಚ್ಚಳವನ್ನು ಕೇಂದ್ರ ಸಚಿವ ಸಂಪುಟ ಶೀಘ್ರದಲ್ಲೇ ಪ್ರಕಟಿಸುವ ನಿರೀಕ್ಷೆಯಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ
ಕೇಂದ್ರ ಸರ್ಕಾರವು ಶೀಘ್ರದಲ್ಲೇ ಜನವರಿ 2025ರ ತುಟ್ಟಿ ಭತ್ಯೆ ಮತ್ತು ತುಟ್ಟಿ ಪರಿಹಾರವನ್ನು ಘೋಷಿಸಲಿದೆ. ಮಾರ್ಚ್ ತಿಂಗಳ ವೇತನದಲ್ಲಿ ಕೇಂದ್ರ ಸರ್ಕಾರಿ ನೌಕರರು ಹೆಚ್ಚಿದ ಸಂಬಳ ಮತ್ತು ಎರಡು ತಿಂಗಳ ಬಾಕಿ ಡಿಎ ಮೊತ್ತವನ್ನು ಕೂಡಾ ಪಡೆಯಲಿದ್ದಾರೆ.
ಈ ಬಾರಿ ಕೇಂದ್ರ ಸರ್ಕಾರಿ ನೌಕರರು ಕಳೆದ 7 ವರ್ಷಗಳಲ್ಲಿ ಅತ್ಯಂತ ಕಡಿಮೆ ಡಿಎ ಹೆಚ್ಚಳವನ್ನು ಪಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳುತ್ತಿವೆ. ಈ ಬಾರಿ, ಕೇಂದ್ರ ಸರ್ಕಾರಿ ನೌಕರರಿಗೆ ಡಿಎ ಮತ್ತು ಪಿಂಚಣಿದಾರರಿಗೆ ಡಿಆರ್ ಶೇಕಡಾ 2 ರಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.
ಈ ಹಿಂದೆ, ಅಕ್ಟೋಬರ್ 2024 ರಲ್ಲಿ ಡಿಎ ಹೆಚ್ಚಳವನ್ನು ಘೋಷಿಸಲಾಗಿತ್ತು. ಆ ಸಮಯದಲ್ಲಿ, ಕೇಂದ್ರ ಸರ್ಕಾರಿ ನೌಕರರಿಗೆ ಶೇ.3 ರಷ್ಟು ತುಟ್ಟಿ ಭತ್ಯೆಯನ್ನು ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿತು. ಅದಾದ ನಂತರ, ಒಟ್ಟು ತುಟ್ಟಿ ಭತ್ಯೆ ಶೇಕಡ 50 ರಿಂದ ಶೇಕಡ 53ಕ್ಕೆ ಏರಿತು.
ತುಟ್ಟಿ ಭತ್ಯೆ (ಡಿಎ) ಹೆಚ್ಚಳವು ಸರಾಸರಿ ಅಖಿಲ ಭಾರತ ಗ್ರಾಹಕ ಬೆಲೆ ಸೂಚ್ಯಂಕವನ್ನು ಆಧರಿಸಿದೆ. ಕೈಗಾರಿಕಾ ಕಾರ್ಮಿಕರಿಗೆ (CPI-IW), ಇದು ಜೀವನ ವೆಚ್ಚದಲ್ಲಿನ ಬದಲಾವಣೆಗಳನ್ನು ಪ್ರತಿಬಿಂಬಿಸುತ್ತದೆ. ಸರ್ಕಾರವು ವರ್ಷಕ್ಕೆ ಎರಡು ಬಾರಿ, ಜನವರಿ ಮತ್ತು ಜುಲೈನಲ್ಲಿ ಡಿಎ/ಡಿಆರ್‌ನಲ್ಲಿ ಬದಲಾವಣೆಗಳನ್ನು ಮಾಡುತ್ತದೆ.
ತುಟ್ಟಿ ಭತ್ಯೆ 2% ಹೆಚ್ಚಾದರೆ ೧೮,೦೦೦ ರೂ. ಮೂಲ ವೇತನ ಹೊಂದಿರುವ ಕೇಂದ್ರ ಸರ್ಕಾರಿ ನೌಕರರ ವೇತನವು ತಿಂಗಳಿಗೆ 360 ರೂ.ಗಳಷ್ಟು ಹೆಚ್ಚಾಗಲಿದೆ. ಪ್ರಸ್ತುತ, ಅವರು 53% ತುಟ್ಟಿ ಭತ್ಯೆಯ ಪ್ರಕಾರ 9,540 ರೂ.ಗಳನ್ನು ಪಡೆಯುತ್ತಿದ್ದಾರೆ. ಡಿಎ ಶೇ.2 ರಷ್ಟು ಹೆಚ್ಚಾದರೆ, ಡಿಎ ಮೊತ್ತ 9,900 ರೂ.ಗಳಿಗೆ ಹೆಚ್ಚಾಗುತ್ತದೆ.
ಆದರೆ, ಈ ಬಗ್ಗೆ ಕೇಂದ್ರ ಸರ್ಕಾರದಿಂದ ಇನ್ನೂ ಯಾವುದೇ ಅಧಿಕೃತ ಘೋಷಣೆ ಬಂದಿಲ್ಲ. ಈ ಹಿಂದೆ 2018 ರ ಜುಲೈನಲ್ಲಿ ಶೇ. 2 ರಷ್ಟು ಡಿಎ ಹೆಚ್ಚಳವಾಗಿತ್ತು.