ದಿವ್ಯಾಂಗರಿಗೆ ಭಾರಿ ನೆಮ್ಮದಿಯ ಸುದ್ದಿ ನೀಡಿದ Modi ಸರ್ಕಾರ, ರಾಜ್ಯಗಳಿಗೆ ನೀಡಿದ ನಿರ್ದೇಶನ ಇದು

Tue, 25 Aug 2020-6:38 pm,

ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಅಡಿಯಲ್ಲಿ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಕಾರ್ಯದರ್ಶಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಕಳುಹಿಸಿದ ಪತ್ರದಲ್ಲಿ ಈ ವಿಷಯವನ್ನು ವೈಯಕ್ತಿಕವಾಗಿ ಗಮನಿಸಬೇಕು ಮತ್ತು ಸಂಬಂಧಪಟ್ಟ ಇಲಾಖೆಗಳು, ಅಧಿಕಾರಿಗಳು ಮತ್ತು ವಿಶೇಷವಾಗಿ ಎಲ್ಲಾ ಅರ್ಹ ದಿವ್ಯಾಂಗ್ ಜನರು ಸರ್ಕಾರದ ಯೋಜನೆಗಳ ಲಾಭವನ್ನು ಪಡೆದುಕೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚಿಸಬೇಕು ಎಂದು ಹೇಳಿದ್ದಾರೆ.

ಇದಕ್ಕೂ ಮೊದಲು ಆಗಸ್ಟ್ 22, 2020ರಂದು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರವೊಂದನ್ನು ಬರೆದು ಮಾರ್ಗ ಸೂಚಿಗಳನ್ನು ಜಾರಿಗೊಳಿಸಲು ಸೂಚಿಸಲಾಗಿದೆ. ಮಾರ್ಗ ಸೂಚಿಗಳ ಪ್ರಕಾರ , ಎನ್‌ಎಫ್‌ಎಸ್‌ಎ ಅಡಿಯಲ್ಲಿ ಅರ್ಹತೆ ಹೊಂದಿರುವ ಎಲ್ಲ ವಿಕಲಾಂಗ ವ್ಯಕ್ತಿಗಳನ್ನು ಗುರುತಿಸಿ ಅವರನ್ನು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013 ರ ಅಡಿಯಲ್ಲಿ ಸೇರಿಸಿಕೊಳ್ಳಬೇಕೆಂದು ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಕೇಳಿಕೊಂಡಿದೆ.

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013 ರ ನಿಬಂಧನೆಗಳ ಪ್ರಕಾರ, ಅರ್ಹ ಅಂಗವಿಕಲರಿಗೆ ಎನ್‌ಎಫ್‌ಎಸ್‌ಎ ಮತ್ತು ಪಿಎಂಜಿಕೆಎ ಅಡಿಯಲ್ಲಿ ಲಭ್ಯವಿರುವ ಆಹಾರ ಧಾನ್ಯಗಳ ಕೋಟಾ ನೀಡಲಾಗುವುದು.

ಈ ಯೋಜನೆಯಲ್ಲಿ ಈಗಾಗಲೇ ಸೇರ್ಪಡೆಗೊಳ್ಳದವರನ್ನು ಹೊಸ ಪಡಿತರ ಚೀಟಿ ಅರ್ಹತಾ ಮಾನದಂಡಗಳನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆಯಲ್ಲಿ ಸೇರಿಸಿಕೊಳ್ಳಬೇಕು ಎಂದು ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಸೂಚಿಸಿದೆ.

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಸೆಕ್ಷನ್ 38 ಪ್ರಕಾರ,  ಕೇಂದ್ರ ಸರ್ಕಾರವು ಕಾಲಕಾಲಕ್ಕೆ ಕಾಯಿದೆಯ ನಿಬಂಧನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬಹುದು. ಇದರ ಅಡಿಯಲ್ಲಿ ಅಂಗವಿಕಲರನ್ನು ಸಮಾಜದ ದುರ್ಬಲ ವರ್ಗವೆಂದು ಪರಿಗಣಿಸಲು ಸೂಚನೆಗಳನ್ನು ನೀಡಲಾಗಿದೆ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link