ಸರ್ಕಾರಿ ನೌಕರರಿಗೆ ನಿಜಕ್ಕೂ ಆಘಾತ !DA ಬಗ್ಗೆ ಶಾಕಿಂಗ್ ನಿರ್ಧಾರ ಪ್ರಕಟಿಸಿದ ಸರ್ಕಾರ! ಹುಸಿಯಾದ ನಿರೀಕ್ಷೆ
ಹಣದುಬ್ಬರವನ್ನು ಸರಿಹೊಂದಿಸಿಕೊಂಡು ಹೋಗಲು ನೆರವಾಗುವಂತೆ ಸರ್ಕಾರ ವರ್ಷಕ್ಕೆ ಎರಡು ಬಾರಿ ತುಟ್ಟಿಭತ್ಯೆ ಹೆಚ್ಚಳ ಮಾಡುತ್ತದೆ. ತುಟ್ಟಿಭತ್ಯೆ ಹೆಚ್ಚಳವಾಗುತ್ತಿದ್ದ ಹಾಗೆಯೇ ಸರ್ಕಾರಿ ನೌಕರರ ವೇತನ ಕೂಡಾ ಹೆಚ್ಚಾಗುತ್ತಾ ಹೋಗುತ್ತದೆ.
ಇದೀಗ ಸರ್ಕಾರಿ ನೌಕರರು ಜುಲೈ ತಿಂಗಳ ತುಟ್ಟಿಭತ್ಯೆ ಹೆಚ್ಚಳದ ಘೋಷಣೆಗಾಗಿ ಕಾಯುತ್ತಿದ್ದಾರೆ. ಜೂನ್ ತಿಂಗಳ ಎಐಸಿಪಿಐ ಸೂಚ್ಯಂಕ ಸಂಖ್ಯೆ ಕೂಡ ಬಿಡುಗಡೆಯಾಗಿದೆ.
ಕೆಲವು ದಿನಗಳ ಹಿಂದೆ ಬಿಡುಗಡೆಯಾದ ಎಐಸಿಪಿಐ ಸೂಚ್ಯಂಕ ಸಂಖ್ಯೆ ಆಧಾರದ ಮೇಲೆ ಈ ಬಾರಿ ತುಟ್ಟಿಭತ್ಯೆ 3% ರಷ್ಟು ಹೆಚ್ಚಾಗಬಹುದು ಎಂದು ನಿರೀಕ್ಷಿಸಲಾಗಿದೆ. ಇದು ಆಗಸ್ಟ್ ಅಥವಾ ಸೆಪ್ಟೆಂಬರ್ ನಲ್ಲಿ ಘೋಷಣೆ ಬರಬಹುದು.
ಆದರೆ ಇದರ ಮಧ್ಯೆ, ಸರ್ಕಾರ ಇದೀಗ ಶಾಕಿಂಗ್ ನಿರ್ಧಾರ ಪ್ರಕಟಿಸಿದೆ. 18 ತಿಂಗಳ ಬಾಕಿ ತುಟ್ಟಿಭತ್ಯೆ ಪಾವತಿಸಲು ಸರ್ಕಾರ ಸ್ಪಷ್ಟವಾಗಿ ನಿರಾಕರಿಸಿದೆ.
ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ,ರಾಜ್ಯಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ. ಸರ್ಕಾರ ತಡೆ ಹಿಡಿದಿದ್ದ 18 ತಿಂಗಳ ಡಿಎ/ಡಿಆರ್ ಅನ್ನು ಬಿಡುಗಡೆ ಮಾಡುವುದು ಸಾಧ್ಯವಿಲ್ಲ ಎಂದು ಈ ಮೂಲಕ ಸ್ಪಶವಾಗಿ ಹೇಳಿದ್ದಾರೆ.
ಕರೋನಾ ಅವಧಿಯಲ್ಲಿ ಸರ್ಕಾರಿ ನೌಕರರ 18 ತಿಂಗಳ ತುಟ್ಟಿಭತ್ಯೆಯನ್ನು ಕೇಂದ್ರ ಸರ್ಕಾರ ನಿಲ್ಲಿಸಿತ್ತು. ಈ ಬಾಕಿ ಡಿಎ ನೀಡಬೇಕೆಂದು ಕೇಂದ್ರ ನೌಕರರು ಬಹಳ ದಿನಗಳಿಂದ ಬೇಡಿಕೆ ಇಟ್ಟಿದ್ದರು.
ಸರ್ಕಾರ ತನ್ನ ನಿರ್ಧಾರ ಪ್ರಕಟಿಸುವ ಮೂಲಕ 1 ಕೋಟಿ ಕೇಂದ್ರ ನೌಕರರು ಮತ್ತು ಪಿಂಚಣಿದಾರರಿಗೆ ಶಾಕ್ ನೀಡಿದೆ.