`ಮಹಾದಾಯಿ ಯೋಜನೆ ಜಾರಿಗೊಳಿಸಲು ಸರಕಾರ ಬದ್ದ`

Sat, 09 Sep 2023-5:59 pm,

ಪಂಚಗ್ಯಾರಂಟಿ ಯೋಜನೆಗಳ ಜಾರಿಯಿಂದ ಅಭಿವೃದ್ಧಿಗೆ ಹಣದ ಕೊರತೆ ಆಗಿದೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಸರಕಾರಕ್ಕೆ ಯಾವುದೇ ರೀತಿಯ ಆರ್ಥಿಕ ತೊಂದರೆ ಇಲ್ಲ. ಸರಕಾರದ ಎಲ್ಲ ಅಭಿವೃದ್ಧಿ ಕಾರ್ಯಕ್ರಮಗಳು ಮುಂದುವರೆಯಲಿವೆ. ಪ್ರಸಕ್ತ ವರ್ಷ ಪಂಚ ಗ್ಯಾರಂಟಿಗಳ ಅನುಷ್ಠಾನಕ್ಕೆ ಸುಮಾರು 32 ಸಾವಿರ ಕೋಟಿ ರೂ.ಗಳ ಅಗತ್ಯವಿದೆ. ಮುಂದಿನ ವರ್ಷದಿಂದ ಪ್ರತಿವರ್ಷ ಪಂಚ ಗ್ಯಾರಂಟಿಗಳ ಜಾರಿಗೆ ಸುಮಾರು 56 ಸಾವಿರ ಕೋಟಿ ರೂ.ಗಳು ಬೇಕಾಗುತ್ತದೆ. ಈ ಎಲ್ಲ ಅಗತ್ಯ ಹಣ ಹೊಂದಿಸಲು ಸರಕಾರ ಸಶಕ್ತವಾಗಿದೆ. ಯಾರಿಗೂ ಈ ಬಗ್ಗೆ ಭಯಬೇಡ.

ಬಡವರ ವಿರೋಧಿಗಳು ಪಂಚ ಗ್ಯಾರಂಟಿ ಅನುಷ್ಠಾನದ ವಿಷಯದಲ್ಲಿ ಸರ್ಕಾರದ ವಿರುದ್ಧ ಸುಳ್ಳ ಆರೋಪ ಮಾಡುತ್ತಿದ್ದಾರೆ, ಆದರೆ ಸರಕಾರ ಆರ್ಥಿಕವಾಗಿ ಸುಸ್ಥಿರವಾಗಿದ್ದು, ಎಲ್ಲ ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಲಾಗಿದೆ.ಪಂಚಗ್ಯಾರಂಟಿಗಳು ಸೇರಿ ರಾಜ್ಯದ ಅಭಿವೃದ್ಧಿಗಾಗಿ ಮುಂದಿನ ವರ್ಷ ಸುಮಾರು 3 ಲಕ್ಷ 80 ಸಾವಿರ ಕೋಟಿ ರೂ. ಗಳ ಬಜೆಟ್ ಮಂಡಿಸಲಾಗುತ್ತದೆ.

ಬೆಣ್ಣಿಹಳ್ಳ ಯೋಜನೆಯನ್ನು ಡಿಪಿಆರ್ ಮಾಡಿಸಿ, ಶೀಘ್ರವಾಗಿ ಜಾರಿಗೊಳಿಸಲಾಗುವುದು. ಧಾರವಾಡ ಜಿಲ್ಲೆಯ ಹಾಗೂ ಉತ್ತರ ಕರ್ನಾಟಕದ ರೈತರ ಎಲ್ಲ ಬೇಡಿಕೆಗಳಿಗೆ ಸ್ಪಂದಿಸಿ, ಕ್ರಮವಹಿಸಲಾಗುವುದು.

ಮಹಾದಾಯಿ ಯೋಜನೆ ಜಾರಿಗೊಳಿಸಲು ಸರಕಾರ ಬದ್ದವಾಗಿದೆ. ಕೇಂದ್ರ ಸರಕಾರ ಶೀಘ್ರವಾಗಿ ಸ್ಪಂದಿಸಿ, ಸಮಸ್ಯೆ ಬಗೆಹರಿಸಿದರೆ ಯೋಜನೆ ಅನುಷ್ಠಾನ ಸುಲಭವಾಗುತ್ತದೆ.

ಕೇಂದ್ರ ಸರಕಾರ ಗೋವಾ ಸರಕಾರದೊಂದಿಗೆ ಸಮಾಲೋಚಿಸಿ, ಪರಿಸರ ಮತ್ತು ಅರಣ್ಯ ಸಂಬಂಧಿಸಿದ ತಕರಾರು ಪರಿಹರಿಸಿದರೆ ರಾಜ್ಯ ಸರಕಾರ ತಕ್ಷಣ ಕ್ರಮ ವಹಿಸಲಿದೆ. ರಾಜ್ಯ ಸರಕಾರಕ್ಕೆ ಹಣಕಾಸಿನ ಕೊರತೆ ಇಲ್ಲ.

 

ರಾಜ್ಯ ಸರ್ಕಾರ ಈ ವರ್ಷದಿಂದ ರೈತರಿಗೆ ರೂ. 5 ಲಕ್ಷದವರೆಗೆ ಶೂನ್ಯ ಬಡ್ಡಿ ಸಾಲ ಮತ್ತು ರೂ.15 ಲಕ್ಷದವರೆಗೆ ಕೇವಲ ಶೇ. 3 ರಷ್ಟು ಬಡ್ಡಿ ನಿಗದಿಗೊಳಿಸಿ, ಸಾಲ ವಿತರಿಸಲು ಕ್ರಮಕೈಗೊಳ್ಳಲಾಗಿದೆ.

ಕೃಷಿ ಭಾಗ್ಯ, ಕೃಷಿ ಯಂತ್ರಧಾರೆ ಯೊಜನೆಗಳ ಮರುಜಾರಿ ಘೋಷಿಸಲಾಗಿದೆ. ರಾಜ್ಯದಲ್ಲಿ ಸಣ್ಣ ರೈತರು ಹೆಚ್ಚಿಗೆ ಇರುವುದರಿಂದ ಉನ್ನತ ತಾಂತ್ರಿಕತೆ ಇರುವ ಕಟಾವು ಯಂತ್ರಗಳನ್ನು ರೈತರಿಗೆ ನೀಡಲು ಕ್ರಮವಹಿಸಲಾಗಿದೆ.

 

ಒಣ ಬೇಸಾಯ ಮಾಡುವ ರೈತರ ಬಗ್ಗೆ ನಮಗೆ ವಿಶೇಷ ಕಾಳಜಿ ಇದೆ. ಒಣಬೇಸಾಯ ಮಾಡಲು ಅಗತ್ಯ ಸುಧಾರಿತ ಹೊಸ ತಳಿಗಳ ಸಂಶೋಧನೆ ಮಾಡಬೇಕು. ಬಿತ್ತಿದ ಯಾವುದೇ ಮುಖ್ಯ ಬೆಳೆ ಹಾಳಾದರೆ, ಅದಕ್ಕೆ ಪರ್ಯಾಯವಾಗಿ ತಕ್ಷಣದಲ್ಲಿ ಯಾವ ಬೆಳೆಗಳನ್ನು ಬೆಳೆಯಬೇಕು ಎಂಬುದರ ಬಗ್ಗೆ ವಿಜ್ಞಾನಿಗಳು ಆಸಕ್ತಿ ವಹಿಸಿ, ಸಂಶೋಧನೆ ಮಾಡಬೇಕು.

ಲ್ಯಾಬ್ ಟು ಲ್ಯಾಂಡ್ ಅಂದರೆ ಪ್ರಯೋಗಾಲಯದ ಸಂಶೋಧನೆಗಳು ರೈತರ ಭೂಮಿಗೆ ತಲುಪಬೇಕು. ಹೀಗಾದಾಗ ಮಾತ್ರ ವಿಜ್ಞಾನಿಗಳ ಸಂಶೋಧನೆಗಳು ಫಲಪ್ರದವಾಗುತ್ತದೆ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link