Amruthaballi for White Hair: ಇತ್ತೀಚಿನ ದಿನಗಳಲ್ಲಿ ಅನುಸರಿಸುತ್ತಿರುವ ಕೆಟ್ಟ ಆಹಾರ ಪದ್ಧತಿ ಮತ್ತು ಕೆಟ್ಟ ಜೀವನಶೈಲಿಯಿಂದಾಗಿ ಕೆಲವರ ಕೂದಲು ವಯಸ್ಸಿಗೆ ಮುನ್ನವೇ ಬಿಳಿಬಣ್ಣಕ್ಕೆ ತಿರುಗುತ್ತದೆ. ಇದರಿಂದ ಶಾಶ್ವತ ಪರಿಹಾರ ಪಡೆಯಲು ನಾನಾ ತರಹದ ಪ್ರಯೋಗಗಳನ್ನು ಮಾಡುತ್ತಲೇ ಇರುತ್ತಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.
ಇವಷೇ ಅಲ್ಲದೆ, ಕೂದಲು ಬೇಗನೆ ಒಡೆಯಲು ಪ್ರಾರಂಭಿಸುತ್ತದೆ ಮತ್ತು ದುರ್ಬಲಗೊಳ್ಳುತ್ತದೆ. ಒಂದು ವೇಳೆ ಕೂದಲು ಬಿಳಿಯಾಗುವ ಸಮಸ್ಯೆ ನಿಮ್ಮನ್ನು ಕಾಡುತ್ತಿದ್ದರೆ ನಾವಿಂದು ನಿಮಗೆ ಸೂಕ್ತ ಮನೆಮದ್ದನ್ನು ತಿಳಿಸಿಕೊಡಲಿದ್ದೇವೆ.
ಅಮೃತಬಳ್ಳಿ: ಬಿಳಿ ಕೂದಲನ್ನು ತೊಡೆದುಹಾಕಲು ಅಮೃತಬಳ್ಳಿ ಉತ್ತಮ ಆಯ್ಕೆ. ಒಂದು ಬಟ್ಟಲು ಅಮೃತಬಳ್ಳಿಯ ಎಲೆಗಳನ್ನು ಅರೆದು ಕೂದಲಿಗೆ ಹಚ್ಚಿ ಒಂದು ಗಂಟೆಯಾದರೂ ಬಿಡಿ. ಇದು ನಿಮ್ಮ ಕೂದಲಿಗೆ ಅದ್ಭುತವಾದ ಬಣ್ಣವನ್ನು ನೀಡುತ್ತದೆ ಮತ್ತು ಕೂದಲಿನ ಬೆಳವಣಿಗೆಯನ್ನು ಹೆಚ್ಚಿಸುತ್ತದೆ.
ನೆಲ್ಲಿಕಾಯಿ: ನೆಲ್ಲಿಕಾಯಿಯಿಂದ ತಯಾರಿಸಿದ ಹೇರ್ ಮಾಸ್ಕ್ ಕೂಡ ಕೂದಲಿಗೆ ಆರೋಗ್ಯವನ್ನು ನೀಡುತ್ತದೆ. ಒಂದು ಬಟ್ಟಲಿನಲ್ಲಿ 2 ರಿಂದ 3 ನೆಲ್ಲಿಕಾಯಿನ್ನು ಪುಡಿಮಾಡಿಟ್ಟುಕೊಳ್ಳಿ. ಅದಕ್ಕೆ ಒಂದು ಚಮಚ ಬಾದಾಮಿ ಎಣ್ಣೆ ಮತ್ತು ಜೇನುತುಪ್ಪವನ್ನು ಬೆರೆಸಿ ಕೂದಲಿಗೆ ಹಚ್ಚಿ ಮತ್ತು ಅರ್ಧ ಘಂಟೆಯವರೆಗೆ ಬಿಡಿ. ನಂತರ ಕೂದಲನ್ನು ತೊಳೆಯಿರಿ. ಇದು ನಿಮ್ಮ ಕೂದಲಿನ ಬೇರುಗಳನ್ನು ಬಲಪಡಿಸುತ್ತದೆ.
ಚಹಾ: ಕೂದಲಿನ ಸಮಸ್ಯೆಯನ್ನು ಹೋಗಲಾಡಿಸಲು ಬ್ಲ್ಯಾಕ್ ಟೀ ಕೂಡ ಉತ್ತಮ ಆಯ್ಕೆ. ಎರಡು ಲೋಟ ನೀರನ್ನು ಕುದಿಸಿ, ಅದಕ್ಕೆ 3 ರಿಂದ 4 ಚಮಚ ಕಪ್ಪು ಚಹಾ ಮತ್ತು ಒಂದು ಚಮಚ ಉಪ್ಪನ್ನು ಸೇರಿಸಿ. ಇದೆಲ್ಲವನ್ನೂ ಕುದಿಸಿ, ಫಿಲ್ಟರ್ ಮಾಡಿ ಕೂದಲಿಗೆ ಹಚ್ಚಿ 30 ನಿಮಿಷಗಳ ಕಾಲ ಬಿಡಿ. ನಂತರ ತೊಳೆಯಿರಿ. ಹೀಗೆ ಮಾಡಿದರೆ ಯಾವುದೇ ಅಡ್ಡಪರಿಣಾಮವಿಲ್ಲದೆ, ಬಿಳಿ ಕೂದಲು ಕಪ್ಪಾಗಿರುವಂತೆ ಮಾಡುತ್ತದೆ.
ಸೂಚನೆ: ಆತ್ಮೀಯ ಓದುಗರೇ, ನಮ್ಮ ಸುದ್ದಿಗಳನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಈ ಸುದ್ದಿಯನ್ನು ನಿಮಗೆ ಅರಿವು ಮೂಡಿಸುವ ಉದ್ದೇಶದಿಂದ ಬರೆಯಲಾಗಿದೆ. ಇದನ್ನು ಬರೆಯುವಲ್ಲಿ ನಾವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯ ಸಹಾಯವನ್ನು ತೆಗೆದುಕೊಂಡಿದ್ದೇವೆ. ಅಳವಡಿಸಿಕೊಳ್ಳುವ ಮೊದಲು ಖಂಡಿತವಾಗಿಯೂ ವೈದ್ಯರನ್ನು ಸಂಪರ್ಕಿಸಿ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ