ಈ ಬಳ್ಳಿಯ ಎಲೆಯನ್ನು ಅರೆದು ಹಚ್ಚಿ: ಯಾವುದೇ ಅಡ್ಡಪರಿಣಾಮವಿಲ್ಲದೆ ಕೇವಲ 10 ನಿಮಿಷದಲ್ಲಿ ನೈಸರ್ಗಿಕವಾಗಿ ಕಪ್ಪಾಗುತ್ತೆ ಬಿಳಿಕೂದಲು!

Tue, 23 Apr 2024-2:50 pm,

ಇವಷೇ ಅಲ್ಲದೆ, ಕೂದಲು ಬೇಗನೆ ಒಡೆಯಲು ಪ್ರಾರಂಭಿಸುತ್ತದೆ ಮತ್ತು ದುರ್ಬಲಗೊಳ್ಳುತ್ತದೆ. ಒಂದು ವೇಳೆ ಕೂದಲು ಬಿಳಿಯಾಗುವ ಸಮಸ್ಯೆ ನಿಮ್ಮನ್ನು ಕಾಡುತ್ತಿದ್ದರೆ ನಾವಿಂದು ನಿಮಗೆ ಸೂಕ್ತ ಮನೆಮದ್ದನ್ನು ತಿಳಿಸಿಕೊಡಲಿದ್ದೇವೆ.

ಅಮೃತಬಳ್ಳಿ: ಬಿಳಿ ಕೂದಲನ್ನು ತೊಡೆದುಹಾಕಲು ಅಮೃತಬಳ್ಳಿ ಉತ್ತಮ ಆಯ್ಕೆ. ಒಂದು ಬಟ್ಟಲು ಅಮೃತಬಳ್ಳಿಯ ಎಲೆಗಳನ್ನು ಅರೆದು ಕೂದಲಿಗೆ ಹಚ್ಚಿ ಒಂದು ಗಂಟೆಯಾದರೂ ಬಿಡಿ. ಇದು ನಿಮ್ಮ ಕೂದಲಿಗೆ ಅದ್ಭುತವಾದ ಬಣ್ಣವನ್ನು ನೀಡುತ್ತದೆ ಮತ್ತು ಕೂದಲಿನ ಬೆಳವಣಿಗೆಯನ್ನು ಹೆಚ್ಚಿಸುತ್ತದೆ.

ನೆಲ್ಲಿಕಾಯಿ: ನೆಲ್ಲಿಕಾಯಿಯಿಂದ ತಯಾರಿಸಿದ ಹೇರ್ ಮಾಸ್ಕ್ ಕೂಡ ಕೂದಲಿಗೆ ಆರೋಗ್ಯವನ್ನು ನೀಡುತ್ತದೆ. ಒಂದು ಬಟ್ಟಲಿನಲ್ಲಿ 2 ರಿಂದ 3 ನೆಲ್ಲಿಕಾಯಿನ್ನು ಪುಡಿಮಾಡಿಟ್ಟುಕೊಳ್ಳಿ. ಅದಕ್ಕೆ ಒಂದು ಚಮಚ ಬಾದಾಮಿ ಎಣ್ಣೆ ಮತ್ತು ಜೇನುತುಪ್ಪವನ್ನು ಬೆರೆಸಿ ಕೂದಲಿಗೆ ಹಚ್ಚಿ ಮತ್ತು ಅರ್ಧ ಘಂಟೆಯವರೆಗೆ ಬಿಡಿ. ನಂತರ ಕೂದಲನ್ನು ತೊಳೆಯಿರಿ. ಇದು ನಿಮ್ಮ ಕೂದಲಿನ ಬೇರುಗಳನ್ನು ಬಲಪಡಿಸುತ್ತದೆ.

ಚಹಾ: ಕೂದಲಿನ ಸಮಸ್ಯೆಯನ್ನು ಹೋಗಲಾಡಿಸಲು ಬ್ಲ್ಯಾಕ್ ಟೀ ಕೂಡ ಉತ್ತಮ ಆಯ್ಕೆ. ಎರಡು ಲೋಟ ನೀರನ್ನು ಕುದಿಸಿ, ಅದಕ್ಕೆ 3 ರಿಂದ 4 ಚಮಚ ಕಪ್ಪು ಚಹಾ ಮತ್ತು ಒಂದು ಚಮಚ ಉಪ್ಪನ್ನು ಸೇರಿಸಿ. ಇದೆಲ್ಲವನ್ನೂ ಕುದಿಸಿ, ಫಿಲ್ಟರ್ ಮಾಡಿ ಕೂದಲಿಗೆ ಹಚ್ಚಿ 30 ನಿಮಿಷಗಳ ಕಾಲ ಬಿಡಿ. ನಂತರ ತೊಳೆಯಿರಿ. ಹೀಗೆ ಮಾಡಿದರೆ ಯಾವುದೇ ಅಡ್ಡಪರಿಣಾಮವಿಲ್ಲದೆ, ಬಿಳಿ ಕೂದಲು ಕಪ್ಪಾಗಿರುವಂತೆ ಮಾಡುತ್ತದೆ.

ಸೂಚನೆ: ಆತ್ಮೀಯ ಓದುಗರೇ, ನಮ್ಮ ಸುದ್ದಿಗಳನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಈ ಸುದ್ದಿಯನ್ನು ನಿಮಗೆ ಅರಿವು ಮೂಡಿಸುವ ಉದ್ದೇಶದಿಂದ ಬರೆಯಲಾಗಿದೆ. ಇದನ್ನು ಬರೆಯುವಲ್ಲಿ ನಾವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯ ಸಹಾಯವನ್ನು ತೆಗೆದುಕೊಂಡಿದ್ದೇವೆ. ಅಳವಡಿಸಿಕೊಳ್ಳುವ ಮೊದಲು ಖಂಡಿತವಾಗಿಯೂ ವೈದ್ಯರನ್ನು ಸಂಪರ್ಕಿಸಿ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ

ZEENEWS TRENDING STORIES

By continuing to use the site, you agree to the use of cookies. You can find out more by Tapping this link