GST revenue collection for April 2024: GST ಸಂಗ್ರಹದಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದ್ದು, ಈ ಬಾರಿ 15,978 ಕೋಟಿ ರೂ. GST ಸಂಗ್ರಹವಾಗಿದೆ. ಕಳೆದ ಏಪ್ರಿಲ್ನಲ್ಲಿ 14,593 ಕೋಟಿ ರೂ. ಸಂಗ್ರಹವಾಗಿತ್ತು.
GST revenue collection for April 2024: ಏಪ್ರಿಲ್ ತಿಂಗಳಿನಲ್ಲಿ ದಾಖಲೆಯ 2.10 ಲಕ್ಷ ಕೋಟಿ ರೂ. GST ಸಂಗ್ರಹವಾಗಿದೆ. ದೇಶದಲ್ಲಿ GST ಜಾರಿಯಾದ ಬಳಿಕ ಇದೇ ಮೊದಲ ಬಾರಿಗೆ ಅತಿಹೆಚ್ಚು ತೆರಿಗೆ ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಮಾಹಿತಿ ನೀಡಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.
ದೇಶದಲ್ಲಿ GST ಜಾರಿಯಾದ ನಂತರ ಪ್ರತಿ ಏಪ್ರಿಲ್ ತಿಂಗಳಿನಲ್ಲಿಯೇ ಅತಿಹೆಚ್ಚು ತೆರಿಗೆ ಸಂಗ್ರಹವಾಗುತ್ತಿದೆ. 2022ರ ಏಪ್ರಿಲ್ಲ್ಲಿ 1.68 ಲಕ್ಷ ಕೋಟಿ ರೂ. GST ಸಂಗ್ರಹವಾದರೆ, ಕಳೆದ ವರ್ಷದ ಏಪ್ರಿಲ್ನಲ್ಲಿ 1.87 ಲಕ್ಷ ಕೋಟಿ ರೂ. ಸಂಗ್ರಹವಾಗಿತ್ತು.
ಇನ್ನು ಇದೇ ಮೊದಲ ಬಾರಿಗೆ ದೇಶದಲ್ಲಿ GST ಸಂಗ್ರಹ 2 ಲಕ್ಷ ಕೋಟಿ ರೂ. ಗಡಿ ದಾಟಿದೆ. ವರ್ಷದಿಂದ ವರ್ಷಕ್ಕೆ GST ಸಂಗ್ರಹದಲ್ಲಿ ಏರಿಕೆಯಾಗುತ್ತಿದ್ದು, ದೇಶದ ಆರ್ಥಿಕತೆಗೆ ಉತ್ತಮ ಬಲ ಬಂದಂತಾಗಿದೆ.
ಕಳೆದ ಏಪ್ರಿಲ್ಗೆ ಹೋಲಿಸಿದರೆ ಈ ವರ್ಷದ ಏಪ್ರಿಲ್ ತಿಂಗಳಿನಲ್ಲಿ GST ಸಂಗ್ರಹ ಶೇ.12.4ರಷ್ಟು ಏರಿಕೆಯಾಗಿದೆ. ಭಾರತದ GST ಸಂಗ್ರಹವು ವರ್ಷದಿಂದ ವರ್ಷಕ್ಕೆ ಏರಿಕೆ ಕಾಣುತ್ತಿದ್ದು, ಏಪ್ರಿಲ್ನಲ್ಲಿ ಭಾರೀ ಜಿಗಿತ ಕಂಡಿದೆ.
ಕೇಂದ್ರ ಸರ್ಕಾರವು ಪರೋಕ್ಷ ತೆರಿಗೆ ಮೂಲಕ 2.10 ಲಕ್ಷ ಕೋಟಿ ರೂ.ಗೂ ಅಧಿಕ ತೆರಿಗೆಯನ್ನು ಸಂಗ್ರಹಿಸಿದೆ. GST ಸಂಗ್ರಹದಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದ್ದು, ಈ ಬಾರಿ 15,978 ಕೋಟಿ ರೂ. GST ಸಂಗ್ರಹವಾಗಿದೆ. ಕಳೆದ ಏಪ್ರಿಲ್ನಲ್ಲಿ 14,593 ಕೋಟಿ ರೂ. ಸಂಗ್ರಹವಾಗಿತ್ತು.
ದೇಶದಲ್ಲಿ ಅತಿಹೆಚ್ಚು GST ಸಂಗ್ರಹಿಸಿರುವ ರಾಜ್ಯಗಳ ಪೈಕಿ ಮಹಾರಾಷ್ಟ್ರ 37,671 ಕೋಟಿ ರೂ., ಗುಜರಾತ್ 13,301 ಕೋಟಿ ರೂ., ಉತ್ತರ ಪ್ರದೇಶ 12,290 ಕೋಟಿ ರೂ. ಮತ್ತು ಹರ್ಯಾಣದಿಂದ 12,168 ಕೋಟಿ ರೂ. GST ಸಂಗ್ರಹವಾಗಿದೆ.