ಡಯೆಟ್ ಅಗತ್ಯವೇ ಇಲ್ಲ! ಈ ಗಿಡದ ಚಿಗುರನ್ನು ಅರೆದು ನೀರಲ್ಲಿ ಬೆರೆಸಿ ಕುಡಿದರೆ ಕೇವಲ 4 ದಿನದಲ್ಲಿ ಸೊಂಟದ ಬೊಜ್ಜು ಕರಗುತ್ತೆ
ಇತ್ತೀಚಿನ ದಿನಗಳಲ್ಲಿ, ಸಂಪೂರ್ಣವಾಗಿ ಫಿಟ್ ಆಗಿರುವವರು ಬಹಳ ಕಡಿಮೆ. ಕೆಟ್ಟ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ ತೂಕ ಹೆಚ್ಚಾಗುವುದು ಸಾಮಾನ್ಯವಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಪ್ರತಿಯೊಬ್ಬರೂ ತೂಕ ಇಳಿಸಿಕೊಳ್ಳಲು ಬಯಸುತ್ತಾರೆ. ಇದೇ ಕಾರಣಕ್ಕೆ ಜಿಮ್, ವ್ಯಾಯಾಮ, ಡಯೆಟ್ ಮೊರೆ ಹೋಗುತ್ತಾರೆ.
ತೂಕ ಇಳಿಸಿಕೊಳ್ಳಲು ಸರಿಯಾದ ಆಹಾರ ಕ್ರಮವನ್ನು ಹೊಂದಿರುವುದು ಸಹ ಬಹಳ ಮುಖ್ಯ. ಸದ್ಯದ ಪರಿಸ್ಥಿತಿಯಲ್ಲಿ ತೂಕ ಕಳೆದುಕೊಳ್ಳುವುದು ಕಷ್ಟದ ಕೆಲಸ. ಆದರೆ ನಿಮ್ಮ ಈ ಸಮಸ್ಯೆಗೆ ಸುಲಭದಲ್ಲೇ ಪರಿಹಾರ ನೀಡಬೇಕೆಂದರೆ ಪೇರಳೆ ಎಲೆಗಳನ್ನು ಬಳಸಬಹುದು. ಪೇರಳೆ ಎಲೆಗಳು ತೂಕ ನಷ್ಟಕ್ಕೆ ಬಹಳ ಪರಿಣಾಮಕಾರಿ. ಈ ಎಲೆಗಳನ್ನು ಸೇವಿಸುವುದರಿಂದ ಅನೇಕ ರೀತಿಯ ಸಮಸ್ಯೆಗಳು ದೂರವಾಗುತ್ತವೆ.
ಪೇರಳೆ ಎಲೆಗಳು ಕ್ಯಾಲೋರಿ ಮುಕ್ತ. ಇದರಿಂದಾಗಿ ತೂಕ ನಷ್ಟದಲ್ಲಿ ಪರಿಣಾಮಕಾರಿ ಎಂದು ಸಾಬೀತುಪಡಿಸುತ್ತವೆ. ಈ ಎಲೆಗಳನ್ನು ಹೀಗೆ ತಿಂದರೆ ರುಚಿಯಾಗಿರುತ್ತದೆ. ಬೇಕಿದ್ದರೆ ಅರೆದು ನೀರಲ್ಲಿ ಬೆರೆಸಿ ಜ್ಯೂಸ್ ಮಾಡಿ ಕುಡಿಯಬಹುದು. ಇದರಲ್ಲಿ ಹೆಚ್ಚಿನ ಪ್ರಮಾಣದ ಫೈಬರ್ ಇರುವುದರಿಂದ ತೂಕ ಕಳೆದುಕೊಳ್ಳಲು ಸಹಾಯ ಮಾಡುತ್ತದೆ.
ಆಂಟಿ ಬ್ಯಾಕ್ಟೀರಿಯಲ್ ಮತ್ತು ಆಂಟಿ ಮೈಕ್ರೊಬಿಯಲ್ ಗುಣಲಕ್ಷಣಗಳು ಪೇರಳೆ ಎಲೆಗಳಲ್ಲಿ ಕಂಡುಬರುತ್ತವೆ. ಇದು ಹೊಟ್ಟೆಯ ಹುಣ್ಣುಗಳಿಂದ ದೇಹವನ್ನು ರಕ್ಷಿಸಲು ಸಹಾಯ ಮಾಡುತ್ತದೆ.
ಕೆಮ್ಮು, ತುರಿಕೆ ಇತ್ಯಾದಿಗಳಿಂದ ಬಳಲುತ್ತಿದ್ದರೆ ಪೇರಳೆ ಎಲೆಗಳನ್ನು ಸೇವಿಸಬೇಕು. ಏಕೆಂದರೆ ಇವು ದೇಹಕ್ಕೆ ಪರಿಹಾರವನ್ನು ನೀಡುವ ಅಲರ್ಜಿ-ವಿರೋಧಿ ಗುಣಲಕ್ಷಣಗಳನ್ನು ಒಳಗೊಂಡಿರುತ್ತವೆ.
ಪೇರಳೆ ಎಲೆಗಳು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ದೇಹಕ್ಕೆ ಸಹಾಯ ಮಾಡುವ ಅನೇಕ ಅಂಶಗಳನ್ನು ಒಳಗೊಂಡಿದೆ. ಅಷ್ಟೇ ಅಲ್ಲ, ಇದು ದೇಹದ ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ ಮತ್ತು ಹೃದ್ರೋಗದ ಸಮಸ್ಯೆಗಳನ್ನು ದೂರವಿಡುತ್ತದೆ.
ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಅರ್ಹ ವೈದ್ಯಕೀಯ ಅಭಿಪ್ರಾಯಕ್ಕೆ ಯಾವುದೇ ರೀತಿಯಲ್ಲಿ ಪರ್ಯಾಯವಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞ ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸಿ. ಈ ಮಾಹಿತಿಯ ಹೊಣೆಯನ್ನು Zee Kannada News ಖಚಿತಪಡಿಸಿಕೊಳ್ಳುವುದಿಲ್ಲ.