Guava Side Effects: ಈ ಸಮಸ್ಯೆ ಇರುವವರು ಅಪ್ಪಿತಪ್ಪಿಯೂ ಪೇರಳೆ ಹಣ್ಣು ಸೇವಿಸಬಾರದು

Side Effects Of Eating Guava: ಪೇರಳೆ ಹಣ್ಣನ್ನು ಅತಿಯಾಗಿ ಸೇವಿಸುವುದರಿಂದ ಹೊಟ್ಟೆ ಉಬ್ಬರ ಮತ್ತು ಗ್ಯಾಸ್‌ನಂತಹ ಸಮಸ್ಯೆಗಳು ಉಂಟಾಗುತ್ತವೆ. ದುರ್ಬಲ ಜೀರ್ಣಕ್ರಿಯೆ, ಶೀತ ಮತ್ತು ಕೆಮ್ಮಿನ ಸಮಸ್ಯೆ ಇರುವವರು ಪೇರಳೆ ಹಣ್ಣನ್ನು ತಿನ್ನಬಾರದು. ಇದು ಈ ರೋಗ ಲಕ್ಷಣಗಳನ್ನು ಉಲ್ಭಣಗೊಳಿಸುತ್ತದೆ. ವಿಶೇಷವಾಗಿ ಈ ಹಣ್ಣನ್ನು ರಾತ್ರಿ ವೇಳೆ ತಿನ್ನಬಾರದು.

Guava Side Effects: ಸೀಬೆಹಣ್ಣು, ಚೇಪೆ ಕಾಯಿ ಅಥವಾ ಪೇರಲ ಹಣ್ಣಿನಲ್ಲಿ ನಾರಿನಂಶ, ಜೀವಸತ್ವಗಳು ಅಧಿಕವಾಗಿವೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುವ ಸಾಮರ್ಥ್ಯಕ್ಕೆ ಈ ಹಣ್ಣು ಹೆಸರುವಾಸಿಯಾಗಿದೆ. ಹೀಗಾಗಿ ಈ ಹಣ್ಣು ಮಧುಮೇಹಿಗಳಿಗೆ ಒಳ್ಳೆಯದು. ಪೇರಳೆ ತಿನ್ನುವುದರಿಂದ ಅನೇಕ ಆರೋಗ್ಯಕರ ಪ್ರಯೋಜನಗಳಿವೆ. ಆದರೆ ಕೆಲವರು ಪೇರಳೆ ಹಣ್ಣನ್ನು ಅಪ್ಪಿತಪ್ಪಿಯೂ ಸೇವಿಸಬಾರದು. ಕೆಲ ಆರೋಗ್ಯ ಸಮಸ್ಯೆಗಳಿದ್ದವರು ಈ ಹಣ್ಣು ಸೇವಿಸುವುದರಿಂದ ಕೆಲವು ಅಡ್ಡಪರಿಣಾಮಗಳು ಉಂಟಾಗುತ್ತವೆ. ಇದರ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /4

ರುಚಿಯ ಜೊತೆಗೆ ಪೇರಳೆ ಹಣ್ಣು ಪೌಷ್ಟಿಕಾಂಶಗಳಿಂದ ಸಮೃದ್ಧವಾಗಿದೆ. ಇದರಲ್ಲಿ ಉತ್ಕರ್ಷಣ ನಿರೋಧಕಗಳು, ವಿಟಮಿನ್ C, ಪೊಟ್ಯಾಸಿಯಮ್ ಮತ್ತು ಫೈಬರ್ ಸಮೃದ್ಧವಾಗಿದೆ. ಪೇರಳೆಯಲ್ಲಿ ನಾರಿನಂಶ, ಜೀವಸತ್ವಗಳು ಅಧಿಕವಾಗಿವೆ. ಇದರ ಜೊತೆಗೆ ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಹೀಗಾಗಿ ಈ ಹಣ್ಣು ಮಧುಮೇಹಿಗಳಿಗೆ ಒಳ್ಳೆಯದು. ಪೇರಳೆ ತಿನ್ನುವುದರಿಂದ ಅನೇಕ ಪ್ರಯೋಜನಗಳಿವೆ. ಕೆಲವರು ಮಾತ್ರ ಈ ಹಣ್ಣನ್ನು ಅಪ್ಪಿತಪ್ಪಿಯೂ ಸೇವಿಸಬಾರದು.   

2 /4

ಪೇರಳೆ ಹಣ್ಣನ್ನು ಅತಿಯಾಗಿ ಸೇವಿಸುವುದರಿಂದ ಹೊಟ್ಟೆ ಉಬ್ಬರ ಮತ್ತು ಗ್ಯಾಸ್‌ನಂತಹ ಸಮಸ್ಯೆಗಳು ಉಂಟಾಗುತ್ತವೆ. ದುರ್ಬಲ ಜೀರ್ಣಕ್ರಿಯೆ, ಶೀತ ಮತ್ತು ಕೆಮ್ಮಿನ ಸಮಸ್ಯೆ ಇರುವವರು ಪೇರಳೆ ಹಣ್ಣನ್ನು ತಿನ್ನಬಾರದು. ಇದು ಈ ರೋಗ ಲಕ್ಷಣಗಳನ್ನು ಉಲ್ಭಣಗೊಳಿಸುತ್ತದೆ. ವಿಶೇಷವಾಗಿ ಈ ಹಣ್ಣನ್ನು ರಾತ್ರಿ ವೇಳೆ ತಿನ್ನಬಾರದು.

3 /4

ಪೇರಳೆ ಹಣ್ಣು ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆ ಮಾಡುತ್ತದೆ. ಆದರೆ ಅತಿಯಾಗಿ ಇದನ್ನು ತಿನ್ನುವುದು ಒಳ್ಳೆಯದಲ್ಲ. ಶಸ್ತ್ರಚಿಕಿತ್ಸೆಗೆ ಒಳಗಾದವರು, ಗರ್ಭಿಣಿಯರು & ಹಾಲುಣಿಸುವ ತಾಯಂದಿರು ಪೇರಳೆ ಹಣ್ಣನ್ನು ಸೇವಿಸುವ ಮೊದಲು ವೈದ್ಯರನ್ನು ಸಂಪರ್ಕಿಸಬೇಕು. ಇದರಲ್ಲಿ ಫೈಬರ್ ಸಮೃದ್ಧವಾಗಿದ್ದು, ಇದನ್ನು ಅತಿಯಾಗಿ ತಿನ್ನುವುದರಿಂದ ಹೊಟ್ಟೆನೋವು ಕಾಣಿಸಿಕೊಳ್ಳಬಹುದು. ಪೇರಳೆ ಎಲೆಗಳನ್ನು ಸೇವಿಸುವುದರಿಂದ ರಕ್ತಹೀನತೆ, ತಲೆನೋವು ಮತ್ತು ಮೂತ್ರಪಿಂಡದ ಸಮಸ್ಯೆಗಳು ಉಂಟಾಗಬಹುದು. ಇದರಲ್ಲಿರುವ ನೈಸರ್ಗಿಕ ಸಕ್ಕರೆ ಅಂಶವು ಹೊಟ್ಟೆ ಉಬ್ಬರಕ್ಕೆ ಕಾರಣವಾಗುತ್ತದೆ.

4 /4

ಪೇರಳೆಯಲ್ಲಿ ವಿಟಮಿನ್ ʼC ಸಮೃದ್ಧವಾಗಿದ್ದು, ಹೀಗಾಗಿ ಇದನ್ನು ಅತಿಯಾಗಿ ಸೇವಿಸಬಾರದು. ಉರಿಯೂತದ ಸಮಸ್ಯೆ ಇರುವವರು ಸಹ ಪೇರಳೆಯನ್ನು ತಿನ್ನಬಾರದು. ಏಕೆಂದರೆ ಇದನ್ನು ತಿನ್ನುವುದರಿಂದ ಊತ ಹೆಚ್ಚಾಗಬಹುದು. ಪ್ರತಿದಿನ ಒಂದು ಅಥವಾ ಎರಡು ಪೇರಳೆ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಮಧ್ಯಾಹ್ನದ ಸಮಯದಲ್ಲಿ ಇದನ್ನು ತಿನ್ನುವುದು ಒಳ್ಳೆಯದು. ವ್ಯಾಯಾಮದ ಮೊದಲು ಇದನ್ನು ಸೇವಿಸಬಹುದು ಅಂತಾ ಆರೋಗ್ಯ ತಜ್ಞರು ಸಲಹೆ ನೀಡಿದ್ದಾರೆ.