ಪಿಯುಸಿ ವಿದ್ಯಾರ್ಥಿಗಳಿಗೆ ಸರ್ಕಾರ ನೀಡುವುದು 25 ಸಾವಿರ ರೂಪಾಯಿ !ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಈ ಯೋಜನೆ
ಆರ್ಥಿಕ ಸಮಸ್ಯೆಯ ಕಾರಣದಿಂದ ಯಾವುದೇ ವಿದ್ಯಾರ್ಥಿ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸಬಾರದು ಎನ್ನುವ ಉದ್ದೇಶದಿಂದ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ವಿದ್ಯಾರ್ಥಿಗಳಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಹಣಕಾಸಿನ ಅಭಾವದ ಕಾರಣದಿಂದ ಶಿಕ್ಷಣವನ್ನು ಯಾರೂ ಮೊಟಕುಗೊಳಿಸಬಾರದು ಎನ್ನುವುದು ಈ ಯೋಜನೆಯ ಉದ್ದೇಶ.
ಈ ಯೋಜನಗೆಳ ಪೈಕಿ ಒಂದು ನಮೋ ಸರಸ್ವತಿ ವಿಜ್ಞಾನ ಸಾಧನಾ ಯೋಜನೆ. ಈ ಯೋಜನೆಯಲ್ಲಿ 11-12 ನೇ ತರಗತಿ ಅಥವಾ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡಲಾಗುವುದು.
ಈ ಯೋಜನೆಯಡಿ 11 ಮತ್ತು 12ನೇ ತರಗತಿಯಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಒಟ್ಟು 25,000 ಆರ್ಥಿಕ ನೆರವು ನೀಡಲಾಗುತ್ತಿದೆ.
ಯೋಜನೆಯಡಿ ಅರ್ಹ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವನ್ನು ಡಿಬಿಟಿ ಮೂಲಕ ವಿದ್ಯಾರ್ಥಿಯ ತಾಯಿಯ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುವುದು ಒಂದು ವೇಳೆ ತಾಯಿ ಜೀವಂತವಾಗಿಲ್ಲದಿದ್ದಲ್ಲಿ ನೇರವಾಗಿ ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.
ನಮೋ ಸರಸ್ವತಿ ಯೋಜನೆ ಅಡಿಯಲ್ಲಿ 50% ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ನಮೋ ಸರಸ್ವತಿ ಯೋಜನೆಯಡಿ 11 ನೇ ತರಗತಿಯ ಪ್ರತಿ ವಿದ್ಯಾರ್ಥಿಗೆ ವಾರ್ಷಿಕ 10,000 ಮತ್ತು 12 ನೇ ತರಗತಿಗೆ ವಾರ್ಷಿಕ 15,000 ಸಹಾಯವನ್ನು ನೀಡಲಾಗುತ್ತದೆ. ಹೀಗಾಗಿ, ಎರಡು ವರ್ಷಗಳಲ್ಲಿ ಪ್ರತಿ ವಿದ್ಯಾರ್ಥಿಗೆ ಒಟ್ಟು 25,000 ಆರ್ಥಿಕ ನೆರವು ನೀಡಲಾಗುತ್ತದೆ.
ಅಂದ ಹಾಗೆ ಈ ಯೋಜನೆಯನ್ನು ಗುಜರಾತ್ ಸರ್ಕಾರ ಜಾರಿಗೆ ತಂದಿದೆ. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ನೇತೃತ್ವದ ರಾಜ್ಯ ಸರ್ಕಾರವು ರಾಜ್ಯದ ವಿದ್ಯಾರ್ಥಿಗಳನ್ನು ವಿಜ್ಞಾನ ವಿಭಾಗದಲ್ಲಿ ಅಧ್ಯಯನ ಮಾಡಲು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತಂದಿದೆ.