Guru Budh Yuti: 15 ದಿನಗಳವರೆಗೆ ಈ ಜನರ ಮೇಲೆ ಅಪಾರ ಧನ-ಸಂಪತ್ತು ಕರುಣಿಸಲಿದ್ದಾರೆ ದೇವಗುರು ಬೃಹಸ್ಪತಿ ಮತ್ತು ಬುಧ!
ಕರ್ಕ ರಾಶಿ: ಗುರು ಶುಕ್ರರ ಈ ಮೈತ್ರಿ ನಿಮ್ಮ ಪಾಲಿಗೆ ಸಾಕಷ್ಟು ಲಾಭದಾಯಕ ಸಾಬೀತಾಗಲಿದೆ. ಏಕೆಂದರೆ ಈ ಮೈತ್ರಿ ನಿಮ್ಮ ಜಾತಕದ ಕರ್ಮ ಭಾವದಲ್ಲಿ ನಿರ್ಮಾಣಗೊಳ್ಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಕೆಲಸ ಕಾರ್ಯಗಳಲ್ಲಿ ಅಪಾರ ಯಶಸ್ಸು ಸಿಗಲಿದೆ. ಈ ಅವಧಿಯಲ್ಲಿ ನಿಮ್ಮ ಬಾಳಸಂಗಾತಿಗೆ ಎಲ್ಲಾ ಕ್ಷೇತ್ರಗಳಲ್ಲಿ ಯಶಸ್ಸು ಸಿಗಲಿದೆ.
ಕರ್ಕ ಜಾತಕದ ಜನರಿಗೆ ಬೃಹಸ್ಪತಿ ಹಾಗೂ ಗ್ರಹಗಳ ರಾಜಕುಮಾರನ ಈ ಮೈತ್ರಿಯ ಕಾರಣ ನಿಮಗೆ ನಿಮ್ಮ ಆಪ್ತರ ಅಪಾರ ಬೆಂಬಲ ಸಿಗಲಿದೆ. ನೌಕರವರ್ಗದ ಜನರಿಗೆ ಈ ಅವಧಿಯಲ್ಲಿ ಹೊಸ ಅವಕಾಶಗಳು ಒದಗಿ ಬರಲಿವೆ. ಪ್ರಮೋಷನ್, ಬಯಸಿದೆಡೆ ವರ್ಗಾವಣೆ ಭಾಗ್ಯ ಪ್ರಾಪ್ತಿಯಾಗಬಹುದು. ಒಂದು ವೇಳೆ ನೀವು ವ್ಯಾಪಾರ ಮಾಡುತ್ತಿದ್ದರೆ, ಈ ಅವಧಿಯಲ್ಲಿ ನಿಮಗೆ ಉತ್ತಮ ಧನಲಾಭ ಸಿಗುವ ಸಾಧ್ಯತೆ ಇದೆ.
ಸಿಂಹ ರಾಶಿ: ಸಿಂಹ ರಾಶಿಯ ಜಾತಕದವರಿಗೆ ಈ ಮೈತ್ರಿ ಸಾಕಷ್ಟು ಅನಕೂಲಕರ ಸಾಬೀತಾಗಲಿದೆ. ಏಕೆಂದರೆ ಈ ಸಂಯೋಜನೆ ನಿಮ್ಮ ಜಾತಕದ ಒಂಬತ್ತನೇ ಮನೆಯಲ್ಲಿ ರಚನೆಯಾಗುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ನಿಮ್ಮ ಅದೃಷ್ಟದ ಅಪಾರ ಬೆಂಬಲ ಪ್ರಾಪ್ತಿಯಾಗಲಿದೆ. ಈ ಅವಧಿಯಲ್ಲಿ ನೀವು ಯಾವುದಾದರೊಂದು ಧಾರ್ಮಿಕ ಹಾಗೂ ಮಂಗಳ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ.
ಸಿಂಹ ಜಾತಕದವರ ಹಣಕಾಸಿನ ವಿಷಯದ ಬಗ್ಗೆ ಹೇಳುವುದಾದರೆ, ಈ ಅವಧಿಯಲ್ಲಿ ನೀವು ಉತ್ತಮ ಹಣ ಗಳಿಕೆಯ ಸ್ಥಿತಿಯಲ್ಲಿ ಇರುವಿರಿ. ಈ ನಿಟ್ಟಿನಲ್ಲಿ ನಿಮ್ಮ ಕಡೆಯಿಂದ ಮಾಡಲಾಗುವ ಪ್ರಯತ್ನಕ್ಕೆ ಯಶಸ್ಸು ಸಿಗಲಿದೆ. ಈ ಅವಧಿಯಲ್ಲಿ ನೀವು ದೇಶ ವಿದೇಶಗಳಿಗೆ ಯಾತ್ರೆಯನ್ನು ಕೂಡ ಕೈಗೊಳ್ಳುವಿರಿ. ವಿದ್ಯಾರ್ಥಿಗಳ ಪಾಲಿಗೆ ಈ ಅವಧಿ ಸಾಕಷ್ಟು ಶುಭ ಸಾಬೀತಾಗಲಿದೆ. ಈ ಅವಧಿಯಲ್ಲಿ ಅವರಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ಶ್ರೇಯಾಂಕ ಲಭಿಸಲಿದೆ.
ಮಕರ ರಾಶಿ: ನಿಮ್ಮ ಪಾಲಿಗೆ ಬುಧ ಮತ್ತು ಗುರುವಿನ ಮೈತ್ರಿ ಸಾಕಷ್ಟು ಲಾಭದಾಯಕ ಸಾಬೀತಾಗಲಿದೆ. ಏಕೆಂದರೆ ಈ ಮೈತ್ರಿ ನಿಮ್ಮ ಗೋಚರ ಜಾತಕದ ಚತುರ್ಥ ಭಾವದಲ್ಲಿ ನೆರವೇರಲಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಅಪಾರ ಸುಖ-ಸೌಕರ್ಯ ಪ್ರಾಪ್ತಿಯಾಗಲಿದೆ. ಈ ಅವಧಿಯಲ್ಲಿ ನೀವು ವಾಹನ-ಆಸ್ತಿಪಾಸ್ತಿ ಖರೀದಿಸುವ ಸಾಧ್ಯತೆ ಇದೆ.
ಈ ಅವಧಿಯಲ್ಲಿ ಮಕರ ರಾಶಿಯವರ ಹಣಕಾಸಿನ ವಿಷಯದ ಕುರಿತು ಹೇಳುವುದಾದರೆ, ನೀವು ಅಪಾರ ಹಣಗಳಿಕೆ ಮಾಡುವಲ್ಲಿ ಮತ್ತು ಕೂಡಿ ಹಾಕುವಲ್ಲಿ ಯಶಸ್ಸನ್ನು ಸಾಧಿಸುವಿರಿ. ಈ ಅವಧಿಯಲ್ಲಿ ನಿಮಗೆ ಪಿತ್ರಾರ್ಜಿತ ಸಂಪತ್ತಿನ ಲಾಭ ಕೂಡ ಸಿಗಲಿದೆ. ಈ ಅವಧಿಯಲ್ಲಿ ನಿಮಗೆ ಕೆಲಸ ವ್ಯಾಪಾರದಲ್ಲಿ ಅಪಾರ ಯಶಸ್ಸು ಲಭಿಸಲಿದೆ.
(Disclaimer- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)