ಡಿಸೆಂಬರ್ ತಿಂಗಳಾಂತ್ಯಕ್ಕೆ ಗುರುವಿನ ನೇರನಡೆ, ಗಜಕೇಸರಿಯೋಗದಿಂದ ಈ ಜನರ ಜೀವನದಲ್ಲಿ ಸುವರ್ಣಕಾಲ ಆರಂಭ!

Guru Chandra Yuti In Mesha Rashi 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಡಿಸೆಂಬರ್ ತಿಂಗಳಾಂತ್ಯಕ್ಕೆ ಮೇಷ ರಾಶಿಯಲ್ಲಿ ಗುರುವಿನ ನೇರನಡೆ ಆರಂಭಗೊಳ್ಳುತ್ತಿದ್ದ, ಇದರಿಂದ ಗಜಕೇಸರಿ ಯೋಗ ನಿರ್ಮಾಣಗೊಳ್ಳಲಿದೆ. ಈ ಯೋಗದಿಂದ ಕೆಲ ರಾಶಿಗಳ ಜನರ ಜೀವನದಲ್ಲಿ ಸುವರ್ಣಕಾಲ ಆರಂಭಗೊಳ್ಳಲಿದೆ. (Spiritual News In Kannada)

ಬೆಂಗಳೂರು: ಡಿಸೆಂಬರ್ ತಿಂಗಳಾಂತ್ಯಕ್ಕೆ ಮೇಷ ರಾಶಿಯಲ್ಲಿ ದೇವಗುರು ಬೃಹಸ್ಪತಿಯ ನೇರನಡೆ ಆರಂಭಗೊಳ್ಳಲಿದ್ದು, ಇದರಿಂದ ಮೇಷ ರಾಶಿಯಲ್ಲಿ ಗಜಕೇಸರಿ ಯೋಗ ನಿರ್ಮಾಣಗೊಳ್ಳುತ್ತಿದೆ. ಈ ಯೋಗ ಸಕಲ ದ್ವಾದಶ ರಾಶಿಗಳ ಜನರ ಮೇಲೆ ಪ್ರಭಾವವನ್ನು ಬೀರಲಿದೆ. ಏಕೆಂದರೆ ಡಿಸೆಂಬರ್ ಅಂತ್ಯಕ್ಕೆ ಮೇಷ ರಾಶಿಯಲ್ಲಿ ಚಂದ್ರ ಹಾಗೂ ಗುರುವಿನ ಮೈತ್ರಿ ನೆರವೇರಲಿದ್ದು, ಇದು ಕೆಲ ರಾಶಿಗಳ ಜನರಿಗೆ ಆಕಸ್ಮಿಕ ಧನಲಾಭ ಯೋಗ ರೂಪಿಸುತ್ತಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ, (Spiritual News In Kannada) 

 

ಇದನ್ನೂ ಓದಿ-ಎರಡು ದಿನಗಳ ಬಳಿಕ ಮಾಲವ್ಯ ಮಹಾಪುರುಷ ರಾಜಯೋಗ ರಚನೆ, ಧನ ಕುಬೇರ ಕೃಪೆಯಿಂದ ಈ ಜನರು ಮುಟ್ಟಿದ್ದೆಲ್ಲಾ ಚಿನ್ನ!

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

1 /5

Guru Chandra Yuti In Mesha Rashi 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಡಿಸೆಂಬರ್ ತಿಂಗಳಾಂತ್ಯಕ್ಕೆ ಮೇಷ ರಾಶಿಯಲ್ಲಿ ಗುರುವಿನ ನೇರನಡೆ ಆರಂಭಗೊಳ್ಳುತ್ತಿದ್ದ, ಇದರಿಂದ ಗಜಕೇಸರಿ ಯೋಗ ನಿರ್ಮಾಣಗೊಳ್ಳಲಿದೆ. ಈ ಯೋಗದಿಂದ ಕೆಲ ರಾಶಿಗಳ ಜನರ ಜೀವನದಲ್ಲಿ ಸುವರ್ಣಕಾಲ ಆರಂಭಗೊಳ್ಳಲಿದೆ. (Spiritual News In Kannada)

2 /5

ಮೇಷ ರಾಶಿ: ಚಂದ್ರ-ಗುರುವಿನ ಮೈತ್ರಿಯಿಂದ ನಿಮ್ಮ ರಾಶಿಯಲ್ಲಿಯೇ ಈ ಗಜಕೇಸರಿ ಯೋಗ ರಚನೆಯಾಗುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ವ್ಯಕ್ತಿತ್ವದಲಿ ಹೊಸ ಆಕರ್ಷಣೆ ಇರಲಿದೆ.ಇದಲ್ಲದೆ ನಿಮ್ಮ ಘನತ-ಗೌರವ ಪ್ರತಿಷ್ಠೆ ಕೂಡ ಹೆಚ್ಚಾಗಲಿದೆ. ನಿಮ್ಮ ಎಲ್ಲಾ ಆಸೆ ಆಕಾಂಕ್ಷೆಗಳು ಈಡೇರಲಿವೆ. ನೌಕರವರ್ಗದ ಜನರಿಗೆ ಹೆಚ್ಚುವರಿ ಆದಾಯದ ಮೂಲಗಳು ನಿರ್ಮಾಣಗೊಳ್ಳಲಿವೆ. ಅರ್ಥಾತ್ ವರ್ಷದ ಕೊನೆಯ ತಿಂಗಳು ಆರ್ಥಿಕವಾಗಿ ನಿಮ್ಮ ಪಾಲಿಗೆ ಅತ್ಯುತ್ತಮ ಸಾಬೀತಾಗಲಿದೆ. ಈ ರಾಜಯೋಗದ ದೃಷ್ಟಿ ನಿಮ್ಮ ಜಾತಕದ ಸಪ್ತಮ ಭಾವದಲ್ಲಿರುವ ಕಾರಣ ವಿವಾಹಿತರ ವೈವಾಹಿಕ ಜೀವನ ಸಾಕಷ್ಟು ಖುಷಿಗಳಿಂದ ಕೂಡಿರಲಿದೆ. ಅವಿವಾಹಿತರಿಗೆ ವಿವಾಹ ಪ್ರಸ್ತಾವನೆ ಸಿಗುವ ಸಾಧ್ಯತೆ ಇದೆ. 

3 /5

ಸಿಂಹ ರಾಶಿ: ಗಜಕೇಸರಿ ರಾಜಯೋಗ ನಿಮ್ಮ ಪಾಲಿಗೂ ಕೂಡ ಸಾಕಷ್ಟು ಶುಭವಾಗಿರಲಿದೆ. ಏಕೆಂದರೆ ಇದು ನಿಮ್ಮ ಗೋಚರ ಜಾತಕದ ನವಮಭಾವದಲ್ಲಿ ರೂಪುಗೊಳ್ಳಲಿದೆ. ಇದರಿಂದ ನಿಮಗೆ ಅದೃಷ್ಟದ ಸಂಪೂರ್ಣ ಬೆಂಬಲ ಸಿಗಲಿದೆ. ನೀವು ಅಂದುಕೊಂಡ ಎಲ್ಲಾ ಯೋಜನೆಗಳು ಪೂರ್ಣಗೊಳ್ಳಲಿವೆ, ಕೆಲಸ ಕಾರ್ಯದ ನಿಮಿತ್ತ ಯಾತ್ರೆ ಸಂಭವಿಸುವ ಸಾಧ್ಯತೆ ಇದೆ. ರಾಜಕೀಯ ರಂಗಕ್ಕೆ ಸಂಬಂಧಿಸಿದ ಜನರಿಗೆ ಈ ತಿಂಗಳು ಅತ್ಯಂತ ಶುಭವಾಗಿರಲಿದೆ. ದೀರ್ಘ ಕಾಲದಿಂದ ನೌಕರಿ ಬದಲಾಯಿಸುವ ಯೋಚನೆಯಲ್ಲಿರುವವರಿಗೆ ಈ ತಿಂಗಳು ಉತ್ತಮ ಅವಕಾಶಗಳು ಲಭಿಸಲಿವೆ. ನಿಮ್ಮ ರಾಶಿಗೆ ಸೂರ್ಯ ಅಧಿಪತಿ ಮತ್ತು ಸೂರ್ಯ ಚಂದ್ರನ ನಡುವೆ ಮೈತ್ರಿ ಭಾವದ ಸಂಬಂಧವಿದೆ. ಹೀಗಾಗಿ ಈ ರಾಜಯೋಗ ನಿಮ್ಮ ಪಾಲಿಗೆ ಸಾಕಷ್ಟು ಅನುಕೂಲಕರ ಸಾಬೀತಾಗಲಿದೆ. 

4 /5

ಧನು ರಾಶಿ: ಗಜಕೇಸರಿ ರಾಜಯೋಗ ನಿಮ್ಮ ಪಾಲಿಗೆ ವರದಾನ ಸಾಬೀತಾಗಲಿದೆ. ನಿಮ್ಮ ರಾಶಿಗೂ ಕೂಡ ಗುರು ಅಧಿಪತಿಯಾಗಿದ್ದಾನೆ ಮತ್ತು ಆತ ಚಂದ್ರನ ಜೊತೆಗೆ ಸ್ನೇಹಭಾವದ ಸಂಬಂಧ ಹೊಂದಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಮಕ್ಕಳಿಗೆ ಸಂಬಂಧಿಸಿದ ಶುಭ ಸಮಾಚಾರ ಪ್ರಾಪ್ತಿಯಾಗಲಿದೆ. ಅರ್ಥಾತ್ ಅವರ ವಿವಾಹ ನೆರವೇರುವ ಅಥವಾ ಅವರಿಗೆ ನೌಕರಿ ಸಿಗುವ ಸಾಧ್ಯತೆ ಇದೆ. ಪ್ರೇಮ ಸಂಬಂಧಗಳಲ್ಲಿ ನಿಮಗೆ ಯಶಸ್ಸು ಸಿಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನೀವು ಅಸಂಭವ ಎನ್ನಲಾದ ಕೆಲಸಗಳಲ್ಲಿಯೂ ಕೂಡ ಯಶಸ್ಸನ್ನು ಕಾಣುವಿರಿ. ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಲಾಭವಾಗುವ ಎಲ್ಲಾ ಸಂಕೇತಗಳು ಗೋಚರಿಸುತ್ತಿವೆ. 

5 /5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)