ಹನ್ನೆರಡು ವರ್ಷಗಳ ಬಳಿಕ ಮೇಷ ರಾಶಿಯಲ್ಲಿ ಗುರುವಿನ ನೇರನಡೆ, ಈ ರಾಶಿಗಳ ಜನರ ಭಾಗ್ಯ ಸೂರ್ಯನಂತೆ ಹೊಳೆಯುವಂತೆ ಮಾಡಲಿದೆ!

Mon, 11 Dec 2023-4:06 pm,

Guru Gochar 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ವರ್ಷಾಂತ್ಯದಲ್ಲಿ ದೇವಗುರು ಬೃಹಸ್ಪತಿ ಮೇಷ ರಾಶಿಯಲ್ಲಿ ತನ್ನ ನೇರನಡೆಯನ್ನು ಅನುಸರಿಸಲಿದ್ದಾನೆ. ಇದರಿಂದ ಹೊಸ ವರ್ಷದ ಆರಂಭದಲ್ಲಿಯೇ ಕೆಲ ರಾಶಿಗಳ ಜನರ ಅದೃಷ್ಟ ಸೂರ್ಯನಂತೆ ಹೊಳೆಯಲಿದ್ದು, ಅವರಿಗೆ ಗುರು ಅಪಾರ ಧನ-ಸಂಪತ್ತು ಕರುಣಿಸಲಿದ್ದಾನೆ. (Spirituala News In Kannada)

ಮೇಷ ರಾಶಿ: ಗುರು ನಿಮ್ಮ ರಾಶಿಯಲ್ಲಿಯೇ ನೇರ ನಡೆಯನ್ನು ಅನುಸರಿಸುತ್ತಿರುವ ಕಾರಣ ಈ ಅವಧಿಯಲ್ಲಿ ನಿಮ್ಮ ಆತ್ಮವಿಶ್ವಾಸ ಅಪಾರ ಹೆಚ್ಚಾಗಲಿದೆ. ನಿಮ್ಮಲ್ಲಿ ಹೊಸ ಶಕ್ತಿಯ ಸಂಚಾರ ಇರಲಿದೆ. ಬಾಳ ಸಂಗಾತಿಯ ಜೊತೆಗೆ ನಿಮ್ಮ ಸಂಬಂಧಗಳು ಉತ್ತಮವಾಗಿರಲಿವೆ. ಇಬ್ಬರೂ ಜೊತೆಗೂಡಿ ಸಂಪತ್ತು ವೃದ್ಧಿಯ ಯೋಜನೆಗಳನ್ನು ರೂಪಿಸುವಿರಿ. ಈ ಅವಧಿಯಲ್ಲಿ ನಿಮ್ಮ ಜೀವನ ಶೈಲಿಯಲ್ಲಿಯೂ ಕೂಡ ಉತ್ತಮ ಸುಧಾರಣೆಯನ್ನು ನೀವು ಗಮನಿಸುವಿರಿ. ಪಾರ್ಟ್ನರ್ ಶಿಪ್ ನಲ್ಲಿ ನೀವು ವ್ಯಾಪಾರ ಮಾಡಲು ಬಯಸುತ್ತಿದ್ದರೆ, ಸಮಯ ಸಾಕಷ್ಟು ಅನುಕೂಲಕರವಾಗಿದೆ. ಅವಿವಾಹಿತರಿಗೆ ಮದುವೆಯ ಪ್ರಸ್ತಾಪ ಸಿಗುವ ಸಾಧ್ಯತೆ ಇದೆ. 

ಮಿಥುನ ರಾಶಿ: ನಿಮ್ಮ ಗೋಚರ ಜಾತಕದ ಏಕಾದಶ ಭಾವದಲ್ಲಿ ಗುರು ತನ್ನ ನೆರನಡೆಯನ್ನು ಅನುಸರಿಸಲಿದ್ದಾನೆ. ಇದರಿಂದ ನಿಮ್ಮ ಆದಾಯದಲ್ಲಿ ಅಪಾರ ಹೆಚ್ಚಳವನ್ನು ನೀವು ನಿರೀಕ್ಷಿಸಬಹುದು. ಆದಾಯದ ಹೊಸ ಮೂಲಗಳು ತೆರೆದುಕೊಳ್ಳಲಿವೆ. ಇನ್ನೊಂದೆಡೆ ನಿಮ್ಮ ಪರಾಕ್ರಮದಲ್ಲಿ ವೃದ್ಧಿಯನ್ನು ನೀವು ಕಾಣುವಿರಿ. ಜೀವನದ ಪ್ರತಿಯೊಂದು ಕ್ಷೇತ್ರದಲ್ಲಿ ನೀವು ಉತ್ತಮ ಪ್ರದರ್ಶನ ತೋರುವಿರಿ. ಗುರುವಿನ ದೃಷ್ಟಿ ನಿಮ್ಮ ಜಾತಕದ ಪಂಚಮ ಭಾವದ ಮೇಲೆ ಇರುವ ಕಾರಣ, ಮಕ್ಕಳ ಉನ್ನತಿಯಾಗುವ ಸಾಧ್ಯತೆ ಇದೆ. ಹೂಡಿಕೆಯಿಂದ ಲಾಭ ಸಿಗುವ ಪ್ರಬಲ ಯೋಗವಿದೆ. 

ಸಿಂಹ ರಾಶಿ: ಗುರು ನಿಮ್ಮ ಗೋಚರ ಜಾತಕದ ನವಮ ಭಾವದಲ್ಲಿ ನೇರನಡೆ ಅನುಸರಿಸಲಿದ್ದಾನೆ. ಇದರಿಂದ ನಿಮಗೆ ಅದೃಷ್ಟದ ಅಪಾರ ಬೆಂಬಲ ಪ್ರಾಪ್ತಿಯಾಗಲಿದೆ. ಅಂದುಕೊಂಡ ನಿಮ್ಮ ಎಲ್ಲಾ ಯೋಜನೆಗಳಲ್ಲಿ ನಿಮಗೆ ಯಶಸ್ಸು ಸಿಗಲಿದೆ. ಹೊಸ ಜನರ ಜೊತೆಗೆ ನಿಮ್ಮ ಪರಿಚಯ ಬೆಳೆಯಲಿದ್ದು, ನಿಮ್ಮ ಸಾಮಾಜಿಕ ವ್ಯಾಪ್ತಿ ಹೆಚ್ಚಾಗಲಿದೆ. ವೃತ್ತಿ ಜೀವನದಲ್ಲಿ ನಿಮಗೆ ಉನ್ನತಿಯ ಅವಕಾಶಗಳು ಪ್ರಾಪ್ತಿಯಾಗಲಿದ್ದು, ಇದರಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ಆಧ್ಯಾತ್ಮದತ್ತ ನಿಮ್ಮ ಒಲವು ಹೆಚ್ಚಾಗಲಿದೆ. ಕಾಲಕಾಲಕ್ಕೆ ದೇಶ-ವಿದೇಶಗಳ ಯಾತ್ರೆ ಸಂಭವಿಸುವ ಸಾಧ್ಯತೆ ಇದೆ. 

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)

ZEENEWS TRENDING STORIES

By continuing to use the site, you agree to the use of cookies. You can find out more by Tapping this link