ಶತಮಾನದ ಬಳಿಕ ಗುರು-ಶುಕ್ರರಿಂದ ಗಜಲಕ್ಷ್ಮಿ ರಾಜಯೋಗ ರಚನೆ. ಹೊಸ ವರ್ಷದಲ್ಲಿ ಈ ಜನರಿಗೆ ಅಪಾರ ಧನಸಂಪತ್ತು ಪ್ರಾಪ್ತಿ!
Guru Shukra Yuti 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಗುರು-ಶುಕ್ರರ ಮೈತ್ರಿಯಿಂದ ಗಜಲಕ್ಷ್ಮಿ ರಾಜಯೋಗ ರೂಪುಗೊಳ್ಳಲಿದೆ. ಇದರಿಂದ ಕೆಲ ರಾಶಿಗಳ ಜನರ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ (Spiritual News In Kannada)
ಸಿಂಹ ರಾಶಿ: ಗಜಲಕ್ಷ್ತ್ಮಿ ರಾಜಯೋಗ ನಿರ್ಮಾಣದಿಂದ ನಿಮಗೆ ಹೊಸವರ್ಷದಲ್ಲಿ ಆದಾಯದ ಹೊಸ ಮೂಲಗಳು ನಿರ್ಮಾಣಗೊಳ್ಳಲಿವೆ. ಆರ್ಥಿಕ ಸ್ಥಿತಿ ಮೊದಲಿಗಿಂತ ಅಧಿಕ ಉತ್ತಮವಾಗಲಿದೆ. ಆಸೆಗಳು ಈಡೇರಲಿವೆ. ಈ ಅವಧಿಯಲ್ಲಿ ನೀವು ಹೊಸ ಕೆಲಸ ಆರಂಭಿಸುವ ಸಾಧ್ಯತೆ ಇದೆ. ಆದರಿಂದ ನಿಮಗೆ ಧನಲಾಭ ಉಂಟಾಗಲಿದೆ. ಕೆಲಸದ ನಿಮಿತ್ತ ವಿಶೇಷ ಯಾತ್ರೆ ಸಂಭವಿಸುವ ಸಾಧ್ಯತೆ ಇದೆ. ಅದರಿಂದ ನಿಮ್ಮ ವೃತ್ತಿ ಜೀವನದಲ್ಲಿ ಉನ್ನತಿಯಾಗಲಿದೆ. ಸಾಮಾಜಿಕ ಹಾಗೂ ಧಾರ್ಮಿಕ ಕೆಲಸ ಕಾರ್ಯಗಳನ್ನು ಮಾಡುವುದರಿಂದ ನಿಮ್ಮ ಘನತೆ-ಗೌರವ ಹೆಚ್ಚಾಗಲಿದೆ. ಹೊಸ ವರ್ಷದಲ್ಲಿ ನೀವು ಸಾಕಷ್ಟು ಹಣ ಉಳಿತಾಯ ಮಾಡುವಲ್ಲಿ ಯಶಸ್ಸನ್ನು ಕಾಣುವಿರಿ ಮತ್ತು ಇದರಿಂದ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಾಗಲಿದೆ. ಹೊಸ ವರ್ಷದಲ್ಲಿ ನೀವು ವಾಹನ ಹಾಗೂ ಸಂಪತ್ತನ್ನು ಕೂಡ ಖರೀದಿಸುವ ಸಾಧ್ಯತೆ ಇದೆ.
ಧನು ರಾಶಿ: ಗಜಲಕ್ಷ್ಮಿ ರಾಜಯೋಗದಿಂದ ನಿಮ್ಮ ಆದಾಯ ದುಪ್ಪಟ್ಟಾಗಲಿದೆ. ಆದಾಯದ ಹೊಸ ಮೂಲಗಳು ಕೂಡ ನಿರ್ಮಾಣಗೊಳ್ಳಲಿವೆ. ಈ ಅವಧಿಯಲ್ಲಿ ನಿಮ್ಮ ಸಾಹಸ ಪರಾಕ್ರಮ ಹೆಚ್ಚಾಗಿ ಜೀವನದ ಪ್ರತಿಯೊಂದು ಕ್ಷೇತ್ರದಲ್ಲಿ ನೀವು ಉತ್ತಮ ಸಾಧನೆಯನ್ನು ಮಾಡುವಿರಿ. ಈ ಸಮಯದಲ್ಲಿ ನಿಮಗೆ ಹೂಡಿಕೆಯಿಂದಲೂ ಕೂಡ ಅಪಾರ ಲಾಭ ಉಂಟಾಗಲಿದೆ. ಮಕ್ಕಳಿಗೆ ಸಂಬಂಧಿಸಿದಂತೆ ಕೆಲ ಶುಭ ಸಮಾಚಾರಗಳು ಕೂಡ ನಿಮಗೆ ಪ್ರಾಪ್ತಿಯಾಗಲಿವೆ. ವ್ಯಾಪಾರಿಗಳು ಕೆಲ ಉತ್ತಮ ಡೀಲ್ ಗಳನ್ನು ಫೈನಲ್ ಮಾಡುವ ಸಾಧ್ಯತೆ ಇದೆ. ಲಾಭದ ಶುಭಯೋಗಗಳು ನಿರ್ಮಾಣಗೊಳ್ಳುತ್ತಿವೆ. ಹೊಸ ವರ್ಷದಲ್ಲಿ ನೀವು ಕೆಲ ಸ್ಪೆಷಲ್ ವ್ಯಕ್ತಿಗಳನ್ನು ಭೇಟಿಯಾಗುವ ಸಾಧ್ಯತೆ ಇದೆ.
ಕರ್ಕ ರಾಶಿ: ಈ ರಾಜಯೋಗ ನಿರ್ಮಾಣದಿಂದ ನಿಮಗೆ ಕಾಲಕಾಲಕ್ಕೆ ಧನಲಾಭ ಉಂಟಾಗಲಿದೆ. ಪರ್ಸ್ನಲ್ ಲೈಫ್ ಜೊತೆಗೆ ಪ್ರೊಫೆಶನಲ್ ಲೈಫ್ ನಲ್ಲಿಯೂ ಕೂಡ ನೀವು ಉತ್ತಮ ಪ್ರದರ್ಶನವನ್ನು ತೋರುವಿರಿ. ಜೀವನದ ಪ್ರತಿಯೊಂದು ಕ್ಷೇತ್ರದಲ್ಲಿ ಲಾಭದ ಯೋಗ ರೂಪುಗೊಳ್ಳುತ್ತಿದೆ. ನಿಮ್ಮ ಸ್ಸೇ ಆಕಾಂಕ್ಷೆಗಳು ಈಡೇರಲಿವೆ. ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಿಗಲಿದೆ. ಅರ್ಥಾತ್ ಅವರಿಗೆ ಸರ್ಕಾರಿ ನೌಕರಿ ಸಿಗುವ ಎಲ್ಲಾ ಸಾಧ್ಯತೆಗಳಿವೆ.
(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)