Hair Fall Control Tips : ಈ ನೀರನ್ನು ಬೆಳಿಗ್ಗೆ ಕುಡಿಯುವುದರಿಂದ ದೇಹಕ್ಕೆ ಹಲವಾರು ಲಾಭಗಳು ಸಿಗುತ್ತವೆ ಎನ್ನುತ್ತಾರೆ ಆರೋಗ್ಯ ತಜ್ಞರು. ಇದು ಕೂದಲು ಉದುರುವಿಕೆಗೆ ರಾಮಬಾಣವಾಗಿದೆ. ಅಲ್ಲದೇ ಇದರಲ್ಲಿ ಕಂಡುಬರುವ ಪೋಷಕಾಂಶಗಳು ದೀರ್ಘಕಾಲದ ಕಾಯಿಲೆಗಳನ್ನು ಸುಲಭವಾಗಿ ನಿವಾರಿಸುತ್ತವೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಆಧುನಿಕ ಜೀವನಶೈಲಿಯಿಂದ ಉಂಟಾಗುವ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು, ಅನೇಕ ಜನರು ಬೆಳಿಗ್ಗೆ ಉಪಾಹಾರದ ಮೊದಲು ಡ್ರೈ ಫ್ರೂಟ್ಸ್ ಸೇವಿಸುತ್ತಿದ್ದಾರೆ. ಪ್ರತಿದಿನ ಕಪ್ಪು ಒಣದ್ರಾಕ್ಷಿ ಸೇವಿಸುವುದರಿಂದ ದೇಹಕ್ಕೆ ಹಲವಾರು ಲಾಭಗಳು ದೊರೆಯುತ್ತವೆ.
ಇದು ದೇಹಕ್ಕೆ ಅಗತ್ಯವಿರುವ ಹೆಚ್ಚಿನ ಪ್ರಮಾಣದ ಪ್ರೋಟೀನ್, ಫೈಬರ್, ಸೋಡಿಯಂ, ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮತ್ತು ವಿಟಮಿನ್ ಸಿ ಅನ್ನು ಹೊಂದಿರುತ್ತದೆ. ಹಾಗಾಗಿ ಇವುಗಳನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿಟ್ಟು ಬೆಳಗ್ಗೆ ಸೇವಿಸುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳು ದೊರೆಯುತ್ತವೆ.
ಒಣದ್ರಾಕ್ಷಿಯನ್ನು ರಾತ್ರಿ ನೆನೆಸಿಟ್ಟು, ಆ ನೀರನ್ನು ಬೆಳಗ್ಗೆ ಕುಡಿಯುವುದರಿಂದ ಕೂದಲು ಗಟ್ಟಿಯಾಗುತ್ತದೆ. ಇದಲ್ಲದೆ, ಕೂದಲು ಉದುರುವಿಕೆಯನ್ನು ಸಹ ಸುಲಭವಾಗಿ ಕಡಿಮೆ ಮಾಡಬಹುದು. ಕೂದಲು ಉದುರುವ ಸಮಸ್ಯೆಯಿಂದ ಬಳಲುತ್ತಿರುವವರು ಇದನ್ನು ಪ್ರತಿದಿನ ಸೇವಿಸುವುದರಿಂದ ಪ್ರಯೋಜನ ಪಡೆಯಬಹುದು.
ಕಪ್ಪು ಒಣ ದ್ರಾಕ್ಷಿ ಹೆಚ್ಚಿನ ಪ್ರಮಾಣದ ಕಬ್ಬಿಣವನ್ನು ಹೊಂದಿರುತ್ತವೆ. ಹಾಗಾಗಿ ಈ ದ್ರಾಕ್ಷಿಯನ್ನು ಪ್ರತಿದಿನ ಉಪಹಾರದ ಭಾಗವಾಗಿ ಸೇವಿಸುವುದರಿಂದ ರಕ್ತಹೀನತೆಯ ಸಮಸ್ಯೆಗಳಿಂದ ಸುಲಭವಾಗಿ ಮುಕ್ತಿ ಪಡೆಯಬಹುದು.
ವಿಟಮಿನ್ ಸಿ ಮತ್ತು ಪ್ರೋಟೀನ್ಗಳು ಕಪ್ಪು ದ್ರಾಕ್ಷಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಿವೆ. ಆದ್ದರಿಂದ ಇದನ್ನು ಪ್ರತಿದಿನ ಸೇವಿಸುವುದರಿಂದ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ.
ಚರ್ಮದ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಕಪ್ಪು ದ್ರಾಕ್ಷಿಯನ್ನು ಸೇವಿಸುವುದರಿಂದ ಪ್ರಯೋಜನ ಪಡೆಯಬಹುದು. ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಎಲ್ಲಾ ರೀತಿಯ ಚರ್ಮದ ಸಮಸ್ಯೆಗಳಿಂದ ಪರಿಹಾರ ದೊರೆಯುತ್ತದೆ.