Benefits of ragi: ರಾಗಿ ಸೇವನೆಯಿಂದ ಇಷ್ಟೆಲ್ಲಾ ಆರೋಗ್ಯ ಲಾಭಗಳಿವೆ
ಮೂಳೆಗಳ ಬಲಕ್ಕಾಗಿ ಖನಿಜಗಳ ರಚನೆಗೆ ರಾಗಿ ಮಾಲ್ಟ್ ಉತ್ತಮ ಕೊಡುಗೆ ನೀಡುತ್ತದೆ. ರಾಗಿ ಮಾಲ್ಟ್ ಕುಡಿದರೆ ನಮ್ಮ ದೇಹಕ್ಕೆ ಶಕ್ತಿ ಬರುತ್ತದೆ. ರಾಗಿಯಲ್ಲಿರುವ ಪೋಷಕಾಂಶಗಳು ವಿಶೇಷವಾಗಿ ಪ್ರೋಟೀನ್ಗಳು, A, B, C ಜೀವಸತ್ವಗಳು ಮತ್ತು ಖನಿಜಗಳು ನಮ್ಮ ದೇಹಕ್ಕೆ ಬಲ ನೀಡುತ್ತವೆ. ಇದರಿಂದ ಜೀರ್ಣ ಶಕ್ತಿ ಹೆಚ್ಚುತ್ತದೆ.
ರಾಗಿಯಲ್ಲಿರುವ ಅಮೈನೋ ಆಮ್ಲಗಳು ಟ್ರಿಪ್ಟೊಫಾನ್ ಆಗಿದ್ದು, ಹಸಿವನ್ನು ಕಡಿಮೆ ಮಾಡುತ್ತದೆ. ಇದರ ಸೇವನೆಯಿಂದ ತೂಕವನ್ನು ನಿಯಂತ್ರಣದಲ್ಲಿರುತ್ತದೆ. ರಾಗಿ ಹಿಟ್ಟಿನಿಂದ ಮಾಡಿದ ಆಹಾರವನ್ನು ಸೇವಿಸುವುದರಿಂದ ಜೀರ್ಣಕ್ರಿಯೆ ನಿಧಾನವಾಗುತ್ತದೆ. ರಾಗಿಯು ಹೃದಯದ ದೌರ್ಬಲ್ಯ ಮತ್ತು ಅಸ್ತಮಾವನ್ನು ಕಡಿಮೆ ಮಾಡುತ್ತದೆ.
ರಾಗಿಯಿಂದ ಮಾಡಿದ ಆಹಾರ ಸೇವಿಸುವುದರಿಂದ ವೃದ್ಧಾಪ್ಯದಲ್ಲಿ ದೇಹಕ್ಕೆ ಶಕ್ತಿಯನ್ನು ದೊರೆಯುತ್ತದೆ. ನಿಯಮಿತವಾಗಿ ರಾಗಿ ಆಹಾರ ಸೇವಿಸುವುದರಿಂದ ದೇಹಕ್ಕೆ ಉತ್ತಮ ಶಕ್ತಿ ದೊರೆಯುತ್ತದೆ. ರಾಗಿಯ ಸೇವನೆಯಿಂದ ಚರ್ಮವು ಹೊಳಪು ಮತ್ತು ಮೃದುವಾಗಿರುತ್ತದೆ ಮತ್ತು ನೀವು ಯಾವಾಗಲೂ ಯಂಗ್ ಆಗಿ ಕಾಣುತ್ತೀರಿ.
ರಾಗಿಯಲ್ಲಿ ಕಬ್ಬಿಣಾಂಶ ಹೇರಳವಾಗಿರುವುದರಿಂದ ರಕ್ತಹೀನತೆ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ರಾಗಿಯನ್ನು ಗಂಜಿ ಮತ್ತು ಹಾಲಿನೊಂದಿಗೆ ಬೆರೆಸಿ ಸೇವಿಸಿದರೆ ಮಧುಮೇಹಕ್ಕೆ ಉತ್ತಮ ಔಷಧಿಯಾಗಿ ಕಾರ್ಯನಿರ್ವಹಿಸುತ್ತವೆ.
ರಾಗಿ ಫೈಟೊಕೆಮಿಕಲ್ಸ್ ಜೀರ್ಣಕ್ರಿಯೆಯ ಪ್ರಕ್ರಿಯೆಯನ್ನು ನಿಧಾನಗೊಳಿಸಲು ಸಹಾಯ ಮಾಡುತ್ತದೆ. ಇದು ಮಧುಮೇಹಿಗಳಲ್ಲಿ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಅಧಿಕ ರಕ್ತದೊತ್ತಡ ಮತ್ತು ಇತರ ಪರಿಧಮನಿಯ ಕಾಯಿಲೆಗಳಿಂದ ಬಳಲುತ್ತಿದ್ದರೆ ಫೈಬರ್ನಲ್ಲಿ ಸಮೃದ್ಧವಾಗಿರುವ ರಾಗಿ ತುಂಬಾ ಸಹಕಾರಿಯಾಗಿದೆ.